ಬ್ರೇಕಿಂಗ್ ನ್ಯೂಸ್
03-07-24 08:07 pm HK News Desk ಕರ್ನಾಟಕ
ಕೋಲಾರ, ಜುಲೈ 04: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.
ಮುಳಬಾಗಿಲಿನ ಅನಿಲ್ ಕುಮಾರ್ (21) ಬಂಧಿತ ಯುವಕ.
ಬಾಲಕಿಯು ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಸೋಮವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಆಕೆ ಶೌಚಾಲಯಕ್ಕೆ ಹೋಗಿದ್ದಾಳೆ. ಈ ಸಮಯದಲ್ಲಿ ಮಗು ಜನನವಾಗಿದೆ. ಮಗುವಿನ ಅಳು ಸದ್ದು ಕೇಳಿ ಕಕ್ಕಾಬಿಕ್ಕಿಯಾದ ಕಾಲೇಜಿನ ಉಪನ್ಯಾಸಕಿಯರು, ಸಿಬ್ಬಂದಿ ಸ್ಥಳಕ್ಕೆ ಓಡಿ ಹೋಗಿದ್ದಾರೆ. ತಕ್ಷಣವೇ ಸಮೀಪದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಉಪನ್ಯಾಸಕರು ಬಾಲಕಿಯ ಪೋಷಕರಿಗೆ ವಿಚಾರ ಮುಟ್ಟಿಸಿದ್ದು, ಅವರೂ ಆಸ್ಪತ್ರೆಗೆ ಬಂದಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
2023ರಲ್ಲೂ ಇಂಥದ್ದೇ ಘಟನೆ:
ಕೋಲಾರ ನಗರದ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ 2023ರಲ್ಲಿ ಇಂಥದ್ದೇ ಘಟನೆ ಸಂಭವಿಸಿತ್ತು.
ಆಗ ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳಿಗೆ ಶೌಚಾಲಯದಲ್ಲಿ ಮಗು ಜನಿಸಿತ್ತು. ಬಾಲಕಿಯ ಆ ಮಗುವಿನ ಕತ್ತು ಹಿಸುಕಿ ಸಾಯಿಸಿ ಶೌಚಾಲಯದೊಳಗೆ ತುರುಕಿದ್ದಳು. ನಂತರ ಹೊರಗೆ ಬಂದು ರಕ್ತಸ್ರಾವವಾಗಿದ್ದು, ತಾಯಿಯನ್ನು ಕರೆಸುವಂತೆ ಉಪನ್ಯಾಸಕರಿಗೆ ಹೇಳಿದ್ದಳು. ನಂತರ ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸಲು ಹೋದಾಗ ಮಗುವಿರುವುದು ಪತ್ತೆಯಾಗಿತ್ತು. ವಿಚಾರಣೆ ನಡೆಸಿದಾಗ ಬಾಲಕಿ ತಾನೇ ಮಗುವನ್ನು ಸಾಯಿಸಿರುವುದಾಗಿ ಒಪ್ಪಿಕೊಂಡಿದ್ದಳು. ಬಾಲಕಿಯು ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯಿಸಿಕೊಂಡು ಪ್ರೀತಿಸುತ್ತಿದ್ದಳು.
A girl (17) who was studying first PUC in a private college on the outskirts of the city gave birth to a baby girl in the toilet of the same college. A POCSO case has been registered in this connection and the youth has been arrested.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm