ಬ್ರೇಕಿಂಗ್ ನ್ಯೂಸ್
04-07-24 06:03 pm HK News Desk ಕರ್ನಾಟಕ
ಬೆಂಗಳೂರು, ಜುಲೈ 04: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.
ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರವರೆಗೆ ವಿಸ್ತರಿಸಿ ಆದೇಶ ನೀಡಿದೆ.
ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಿಂದ ವೀಡಿಯೋ ಕಾನ್ಫರೆನ್ಸ್ ಮಾಡಲಾಗಿತ್ತು. ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್ಪಿಪಿ ಕಡೆಯಿಂದ ರಿಮಾಂಡ್ ಅರ್ಜಿ ಸಲ್ಲಿಸಲಾಗಿತ್ತು. ರಿಮಾಂಡ್ ಅರ್ಜಿ ನೀಡುವಂತೆ ಆರೋಪಿಗಳ ಪರ ವಕೀಲರ ಮನವಿ ಮಾಡಿದ್ದರು. ಆರೋಪಿಗಳ ವಕೀಲರು ಸಹಿ ಮಾಡಿ ರಿಮಾಂಡ್ ಅರ್ಜಿ ಪಡೆಯಲು ನ್ಯಾಯಾಧೀಶರು ಸೂಚನೆ ನೀಡಿದರು.
ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಜೂನ್ 9 ರಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಅವರ ಗ್ಯಾಂಗ್ ಜೈಲು ಪಾಲಾಗಿದೆ.
The police custody of actor Darshan Thoogudeepa and sixteen other individuals has been extended by a Bengaluru court on Thursday for an additional two weeks till July 18 in connection with the Renukaswamy murder case.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm