ಬ್ರೇಕಿಂಗ್ ನ್ಯೂಸ್
08-07-24 08:59 pm HK NEWS ಕರ್ನಾಟಕ
ದಾವಣಗೆರೆ, ಜುಲೈ 08: ಬಿಜೆಪಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಕೆ.ಜಿ. (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಸೋಮವಾರ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವನೆ ಮಾಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.
ಮಾಜಿ ಸಚಿವ ಬಿ.ಸಿ. ಪಾಟೀಲ್‌ರ ಮೊದಲ ಪುತ್ರಿ ಸೌಮ್ಯಾ ಅವರ ಪತಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅವರು ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವಿದ್ದು, ಅಲ್ಲಿಗೆ ಕುಟುಂಬಸ್ಥರು, ಸಂಬಂಧಿಕರು ತೆರಳುತ್ತಿದ್ದಾರೆ.
ಮೆಗ್ಗಾನ್ ಅಸ್ಪತ್ರೆಗೆ ಆಗಮಿಸಿರುವ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರು ಪೊಲೀಸರಿಂದ ಮಾಹಿತಿ ಪಡೆದು, ಕಾರಿನಲ್ಲಿ ಕುಳಿತು ದುಃಖಿಸುತ್ತಿರುವುದು ಕಂಡುಬಂದಿದೆ.
ಶಿವಮೊಗ್ಗದಲ್ಲಿ ಬಿ.ಸಿ.ಪಾಟೀಲ್ ಮಾತನಾಡಿ, ಪ್ರತಾಪ್ ಕಾಣೆಯಾದ ವಿಚಾರ ತಿಳಿದು ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೆ. ನಂತರ ಹೊನ್ನಾಳಿ-ಮಲೆಬೆನ್ನೂರು ರೋಡ್‌ನಲ್ಲಿ ವಿಷ ಸೇವಿಸಿದ್ದಾರೆ ಎಂದು ತಿಳಿಯಿತು. ಮೊದಲು ದಾವಣಗೆರೆಗೆ ಶಿಫ್ಟ್ ಮಾಡಲು ಹೇಳಿದ್ದೆವು, ನಂತರ ಶಿವಮೊಗ್ಗ ಹತ್ತಿರ ಅಂತ ಇಲ್ಲಿನ ಆಸ್ಪತ್ರೆಗೆ ಸೇರಿಸಲಾಗಿದೆ. ಶಿಕಾರಿಪುರ ಹತ್ತಿರ ಬಂದಾಗ ಜೀವ ಹೋಗಿದೆ ಎಂದು ತಿಳಿಸಿದರು.
ಮಕ್ಕಳ ವಿಚಾರದಲ್ಲಿ ಅವರಿಗೆ ಕೊರಗಿತ್ತು, ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಎರಡು ತಿಂಗಳು ಇದ್ದರು. ಅಲ್ಲಿ ಸರಿ ಹೋಗಿದ್ದರು. ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಅವರೇ ನೋಡಿಕೊಳ್ಳುತ್ತಿದ್ದರು. ಮದುವೆ ಆಗಿ 16 ವರ್ಷ ಆಗಿತ್ತು, ಬೆಳಗ್ಗೆ ಜೊತೆಯಲ್ಲಿ ತಿಂಡಿ ಮಾಡಿದ್ದೆವು. ಈಗ ಇಂತಹ ಘಟನೆ ನಡೆದಿದೆ. ನಾಳೆ ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಹೇಳಿದರು.
ಬಿಸಿ ಪಾಟೀಲ್ ಅವರಿಗೆ ಸಹೋದರ ಕಾಲ್ ಮಾಡಿ, ಇಂದು ಮಧ್ಯಾಹ್ನ 1.45ರ ಸುಮಾರಿಗೆ ಆಘಾತಕಾರಿ ವಿಚಾರವನ್ನ ತಿಳಿಸಿದ್ದಾರೆ. ಪ್ರತಾಪ್ ಕಾಣೆ ಆಗಿದ್ದಾರೆ ಎಂಬುದು ಆಗಲೇ ಮಾಜಿ ಸಚಿವ ಬಿಸಿ ಪಾಟೀಲ್ ಅವರಿಗೆ ತಿಳಿದಿದ್ದು. ಕೂಡಲೇ ಪೊಲೀಸರಿಗೆ ಕೂಡ ಮಾಹಿತಿಯನ್ನು ನೀಡಿದ್ದಾರೆ.
ಮತ್ತೊಂದು ಕಡೆ ಅಳಿಯನ ಸಾವಿನ ಸುದ್ದಿ ತಿಳಿದು, ಶಿವಮೊಗ್ಗಕ್ಕೆ ತೆರಳಿದ ಬಿ.ಸಿ. ಪಾಟೀಲ್ ಅವರಿಗೆ ಈಗ ಕುಟುಂಬದ ಸದಸ್ಯರು ಜೊತೆಯಾಗಿದ್ದಾರೆ. ಹಿರೇಕೆರೂರಿನ ಬಿ.ಸಿ. ಪಾಟೀಲ್ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದ್ದು, ಸ್ಥಳೀಯ ನಾಯಕರು ಕೂಡ ಸಾಂತ್ವನ ಹೇಳುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೇರಿದಂತೆ, ರೇಣುಕಾಚಾರ್ಯ & ಸ್ಥಳೀಯ ಬಿಜೆಪಿ ನಾಯಕರು ಹಾಗೂ ಮುಖಂಡರು ಇದೀಗ ಬಿಸಿ ಪಾಟೀಲ್ ಅವರಿಗೆ ಸಾಂತ್ವನ ಹೇಳಿದ್ದಾರೆ.
ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಿಷ್ಟು :
ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ಆತ್ಮಹತ್ಯೆ ಮಾಡಿಕೊಂಡ ಪ್ರತಾಪ್ ಕುಮಾರ್ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದ ನಿವಾಸಿ. ವೈಯಕ್ತಿಕ ಕಾರಣಕ್ಕೆ ವಿಷ ಸೇವಿಸಿದ್ದಾರೆ. ಅವರು ಶಿವಮೊಗ್ಗ ಕಡೆಯಿಂದ ಕಾರಿನಲ್ಲಿ ಒಬ್ಬರೇ ಬಂದು ಕ್ರಿಮಿನಾಶಕ ಔಷಧಿ ಕುಡಿದಿದ್ದಾರೆ. ಕುಡಿದು ಕಾರ್ ನಲ್ಲಿ ಅಸ್ವಸ್ಥರಾಗಿದ್ದರು. ಮೃತರ ಸಹೋದರ ಪ್ರಭು ಎಂಬುಬದರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು ಸ್ಥಳಕ್ಕೆ ಹೋಗಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಹೊನ್ನಾಳಿ ನಂತರ ಶಿವಮೊಗ್ಗ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿ ಅಗದೇ ಸಾವನ್ನಪ್ಪಿದ್ದಾರೆ.
ಇವರು ಕೃಷಿ ಹಾಗೂ ಇತರೇ ವ್ಯವಹಾರ ಮಾಡಿಕೊಂಡಿದ್ದರು. ಮೇಲ್ನೋಟಕ್ಕೆ ಇದೊಂದು ವೈಯಕ್ತಿಕ ಕಾರಣದಿಂದ ನಡೆದ ಘಟನೆ. ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ. ಸದ್ಯ ಮೊಬೈಲ್ ವಶಕ್ಕೆ ಪಡೆಯಲಾಗಿದ್ದು. ಪರಿಶೀಲನೆ ಮಾಡಲಾಗುವುದು. ಇನ್ನು ಇನ್ನೂ ದೂರು ಕೊಟ್ಟಿಲ್ಲ. ದೂರು ನೀಡಿದ ಬಳಿಕ ಪ್ರಕರಣದ ಕುರಿತು ತನಿಖೆ ನಡೆಸಲಾಗಿವುದು ತಿಳಿಸಿದ್ದಾರೆ
ಮಾವ ಬಿಸಿ ಪಾಟೀಲ್ ಹೇಳುವಂತೆ ಮಕ್ಕಳಾಗಿಲ್ಲ ಎನ್ನುವ ಕೊರಗಿನಲ್ಲಿದ್ದರಂತೆ. ಹೀಗಾಗಿ ಪ್ರತಾಪ್ ಮಕ್ಕಳು ಆಗಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾದ್ರಾ ಎನ್ನುವ ಶಂಕೆ ವ್ಯಕ್ತವಾಗಿದೆ.
Pratap, the son-in-law of former BJP minister BC Patil, tragically died by suicide today. The incident occurred in Arakere, Honnali taluk of Davanagere. Pratap consumed poison in his car near a forest at around 3:30 PM. After taking the poison, he called his family to inform them of his intentions.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm