ಬ್ರೇಕಿಂಗ್ ನ್ಯೂಸ್
10-07-24 11:07 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ; ಹಗರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ಕೊಡಬೇಕು ಎಂದು ಆಗ್ರಹಿಸಿದರು.
2004ರಲ್ಲಿ ಸಿಎಂ ಪತ್ನಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ. ಮೂಡಾ ಸ್ವಾಧೀನದಲ್ಲಿದ್ದ ಜಾಗವನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿ ಮಾಡಿದ್ದು ಹೇಗೆ? 2009- 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಸಹ ಈ ಜಾಗವು ಮೂಡಾ ಆರ್‍ಟಿಸಿಯಲ್ಲಿ ನಮೂದಾಗಿತ್ತು. ಭೂಮಿ ಖರೀದಿ ಆಗಿ ಕನ್ವರ್ಷನ್ ಆಗಿತ್ತು. ಗಿಫ್ಟ್ ಡೀಡ್ ಎಂದು ಮಾಹಿತಿ ಕೊಡುವಾಗಲೂ ಅದು ಕೃಷಿ ಭೂಮಿ ಆಗಿರಲಿಲ್ಲ. ಇದು ಕೂಡ ತಪ್ಪು ಮಾಹಿತಿ ಎಂದು ವಿಜಯೇಂದ್ರ ತಿಳಿಸಿದರು.
2 ನಿವೇಶನಕ್ಕೆ ಅರ್ಹತೆ- 14 ನಿವೇಶನ ಹಂಚಿಕೆ
2022ರ ಜನವರಿ 12ರಂದು ಕ್ರಯಪತ್ರ ಆಗಿದ್ದು, ಮೂಡಾ ಪ್ರೋತ್ಸಾಹದಾಯಕ ಯೋಜನೆ ಹೆಸರಲ್ಲಿ ನಿಯಮಗಳು 1991ರ ಮೇರೆಗೆ ಎಂದು ಉಲ್ಲೇಖಿಸಿ ಸಿಎಂ ಪತ್ನಿಗೆ 14 ಸೈಟ್ ಕೊಟ್ಟಿದ್ದಾರೆ. ಇದು ಕ್ರಯಪತ್ರದಲ್ಲಿ ಉಲ್ಲೇಖವಾಗಿದೆ. ಆದರೆ, 1991ರ ಕಾನೂನು ಪ್ರಕಾರ ಅವರಿಗೆ ಒಂದು ಎಕರೆ ಮೀರಿದ ಜಮೀನಾದರೆ 40-60 ಒಂದೇ ನಿವೇಶನ ಕೊಡಬೇಕು. 3ರಿಂದ 4 ಎಕರೆ ಆಗಿದ್ದರೆ 4,800 ಅಡಿಯ ನಿವೇಶನ (40-60ರ ಎರಡು ನಿವೇಶನ) ಕೊಡಬೇಕಿತ್ತು. ಮುಖ್ಯಮಂತ್ರಿ ಧರ್ಮಪತ್ನಿ ಪಾರ್ವತಮ್ಮ ಅವರಿಗೆ ಎರಡು ನಿವೇಶನ ಮಾತ್ರ ಕೊಡಬೇಕಿತ್ತು. 2 ನಿವೇಶನದ ಬದಲು 14 ನಿವೇಶನ ಕೊಟ್ಟಿದ್ದು ಸಂಪೂರ್ಣ ಕಾನೂನುಬಾಹಿರ ಎಂದು ವಿಜಯೇಂದ್ರ ಆಕ್ಷೇಪಿಸಿದರು.
ಮೈಸೂರಿನದು ಭೂ ಹಗರಣ
ಮೂಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರು ಅನೇಕ ತಪ್ಪು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಗಳ ಮುಖವಾಡ ಕಳಚಿ ಬಿದ್ದಿದೆ. ಹೇಗಾದರೂ ಬೆಲೆಬಾಳುವ ನಿವೇಶನ ಕಬಳಿಸಬೇಕು ಎಂದುಕೊಂಡು ನಿಯಮ ಗಾಳಿಗೆ ತೂರಿ ಅಕ್ರಮ ನಡೆಸಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ಜನತೆಗೆ ಉತ್ತರಿಸಬೇಕು. ಹಗರಣಕ್ಕೆ ಹೊಣೆಯನ್ನು ಅವರೇ ಹೊರಬೇಕು ಎಂದು ಒತ್ತಾಯಿಸಿದರು.
ಮಹದೇವಪ್ಪನವರೇ ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದ ಸಿಎಂ, ಬಡ ಹೆಣ್ಮಕ್ಕಳಿಗೆ 2 ಸಾವಿರ ಕೊಟ್ಟರೆ, ತಮ್ಮ ಪತ್ನಿಗೆ 2 ಕೋಟಿಗೂ ಹೆಚ್ಚು ಮೌಲ್ಯದ 14 ನಿವೇಶನಗಳನ್ನು ಪಡೆದಿದ್ದಾರೆ. 63-64 ಕೋಟಿಗೂ ಹೆಚ್ಚು ಬೆಲೆಯ ನಿವೇಶನ ಪಡೆದುದನ್ನು ರಾಜ್ಯದ ಜನರೂ ಪ್ರಶ್ನೆ ಮಾಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು.
ಚುನಾವಣಾ ನಿಯಮ ಉಲ್ಲಂಘನೆ
ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ, ತಾವೇ ಪರಿಹಾರ ಕೇಳಿರುವ ಮೊದಲ ಮುಖ್ಯಮಂತ್ರಿ ಇವರು. ಮೈಸೂರಿನ ಕೆಸರೇ ಗ್ರಾಮದ 3.16 ಎಕರೆ ಜಮೀನಿಗೆ ಬದಲಾಗಿ ತಮ್ಮ ಪತ್ನಿಗೆ 14 ನಿವೇಶನ ಮಂಜೂರು ಮಾಡಿಸಿಕೊಂಡಿದ್ದಾರೆ. ಅದರ ಬೆಲೆ 62 ಕೋಟಿ ಬರಬೇಕಿದ್ದು, 18 ಕೋಟಿಯ ನಿವೇಶನ ಪಡೆದುದಾಗಿ ಹೇಳಿದ್ದಾರೆ. ಆದರೆ, ಮಾನ್ಯ ಮುಖ್ಯಮಂತ್ರಿಗಳು 2013ರ ಚುನಾವಣಾ ಅಫಿಡವಿಟ್‍ನಲ್ಲಿ 3.16 ಎಕರೆ ಭೂಮಿಯನ್ನು ಉಲ್ಲೇಖಿಸಿಲ್ಲ. ಇದು ಚುನಾವಣೆ ನಿಯಮಗಳ ಉಲ್ಲಂಘನೆ. ಇದೆಲ್ಲವನ್ನೂ ಪರಿಶೀಲಿಸಿ ಚುನಾವಣಾ ಆಯೋಗಕ್ಕೆ ದೂರು ಕೊಡುವ ಕುರಿತು ನಿರ್ಧರಿಸುತ್ತೇವೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.
5 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ. ಹಗರಣದಲ್ಲಿ ಒಳಗೊಂಡವರನ್ನು ರಕ್ಷಿಸಲು ಭೈರತಿ ಸುರೇಶ್ ಮುಂದಾಗಿದ್ದಾರೆ. ಮೂಡಾ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿ ವರದಿ ಕೊಟ್ಟ ಜಿಲ್ಲಾಧಿಕಾರಿಯನ್ನೂ ತರಾತುರಿಯಲ್ಲಿ ವರ್ಗಾವಣೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಮೂಡಾ ಅವ್ಯವಹಾರಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳ ವರದಿಯ ಬಳಿಕವೂ 15-6-2024ರಲ್ಲಿ ಸುಮಾರು 42 ಸೈಟ್‍ಗಳನ್ನು ಒಬ್ಬರಿಗೆ ಬದಲಿಯಾಗಿ ಕೊಟ್ಟಿದ್ದಾರೆ. ಇಂಥ ಸಾವಿರಾರು ನಿವೇಶನಗಳನ್ನು ಈ ಸರಕಾರ ಕಾನೂನುಬಾಹಿರವಾಗಿ ಕೊಟ್ಟಿದೆ. ಬಡವರು, ದಲಿತರು, ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ತಮಗೆ ಬೇಕಾದಂತೆ ಹಂಚಿದ್ದಾರೆ. ಸಿಬಿಐ ತನಿಖೆ ಮಾತ್ರವಲ್ಲದೆ ಮುಖ್ಯಮಂತ್ರಿಗಳು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
Escalating pressure on Karnataka Chief Minister Siddaramaiah, the opposition BJP is set to stage a protest in his home district of Mysuru on July 12 demanding his resignation in connection with alleged irregularities in Mysuru Urban Development Authority (MUDA) and a CBI probe.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm