ಬ್ರೇಕಿಂಗ್ ನ್ಯೂಸ್
12-07-24 04:21 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ “ಮೈಸೂರು ಚಲೋ” ಪ್ರತಿಭಟನೆ ನಡೆಸಿದರು.
ಬಿಜೆಪಿ ಜೆಡಿಎಸ್ ಮೈತ್ರಿ ಒಳಗೊಂಡಂತೆ ಎರಡೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು. ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದರು. ಬೆಂಗಳೂರು- ಮೈಸೂರು ರಸ್ತೆಯಲ್ಲಿ ಮೈಸೂರಿಗೆ ಹೊರಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮುನಿರತ್ನ ಅವರನ್ನು ಮಾರ್ಗಮಧ್ಯೆಯಲ್ಲಿಯೇ ಪೊಲೀಸರು ತಡೆದಿದ್ದು ಬಿಡದಿ ಬಳಿ ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಮುಡಾದಲ್ಲಿ ಭಾರೀ ಭ್ರಷ್ಟಾಚಾರವಾಗಿದ್ದು 4-5 ಸಾವಿರ ಕೋಟಿಯ ದೊಡ್ಡ ಹಗರಣ ಬಯಲಾಗಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಆತಂಕಕ್ಕೆ ಒಳಗಾಗಿದ್ದಾರೆ. ಬಿಜೆಪಿಯ ಪ್ರತಿಭಟನೆ ಹತ್ತಿಕ್ಕಲು ಸಿಎಂ ಪ್ರಯತ್ನ ಮಾಡ್ತಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಮೂಡಾದಲ್ಲಿ ಅಕ್ರಮ ಆಗಿಲ್ಲ ಅಂದರೆ ಸಿಬಿಐ ತನಿಖೆಗೆ ಕೊಡಿ. ನೀವು ಪ್ರಾಮಾಣಿಕವಾಗಿ ಇದ್ದರೆ ಸಿಬಿಐ ತನಿಖೆಗೆ ಕೊಡಿ ಎಂದು ಸವಾಲೆಸೆದರು.
ರಾಜ್ಯವು ಕಾಂಗ್ರೆಸ್‌ಗೆ ಎಟಿಎಂ ಆಗಿದೆ. ರಾಹುಲ್ ಗಾಂಧಿಗೆ ದುಡ್ಡು ಕಳುಹಿಸುವ ಕೆಲಸ ಇವರು ಮಾಡ್ತಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ದೊಡ್ಡ ಹಗರಣ ಆಗಿದೆ. ಸಿಎಂ ಇದಕ್ಕೆ ಉತ್ತರ ಕೊಡಬೇಕು. ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಮುಡಾ ಕ್ಲೀನ್ ಮಾಡ್ತೀನಿ ಅಂತ ಸಿಎಂ ಹೇಳ್ತಿದ್ದಾರೆ. ತಮ್ಮ ಬಣ್ಣ ಬಯಲಾದ ಹಿನ್ನೆಲೆ ಈಗ ಮಾತಾಡ್ತಿದ್ದಾರೆ ಎಂದರು.
ಹಿಂದುಳಿದ ವರ್ಗದ ದಾಳದ ಕುರಿತ ಪ್ರಶ್ನೆಗೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ಇನ್ನೊಬ್ಬ ಹಿಂದುಳಿದ ನಾಯಕನನ್ನ ಮಾಡಲಿ. ಸಿದ್ದರಾಮಯ್ಯ ಈ ಸ್ಥಾನದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ. ನಾನು ಸಿಎಂ ಸ್ಥಾನದಲ್ಲಿ ಇರೋದು ಕೆಲವರಿಗೆ ಆಗ್ತಿಲ್ಲ ಅಂತಾ ಅವರ ಪಕ್ಷದವರಿಗೆ ಹೇಳ್ತಿದ್ದಾರೆ. ಸಿದ್ದರಾಮಯ್ಯ ಇವತ್ತು ಎಕ್ಸ್ಪೋಸ್ ಆಗಿದ್ದಾರೆ. ಮುಡಾ ಅಕ್ರಮದಲ್ಲಿ ಸಿಎಂ ಕುಟುಂಬ ಭಾಗಿಯಾಗಿದೆ ಎಂದು ಗಂಭೀರ ಆರೋಪ ಮಾಡಿದರು.
A large posse of BJP workers, led by State president B. Y. Vijayendra, heading to Mysuru in a convoy of vehicles to lay siege to the Mysore Urban Development Authority (MUDA) office, were stopped at Kaniminike, Kumbalagodu by the Bengaluru police. The convoy comprised over 600 cars and would have disrupted traffic, police claimed.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm