ಬ್ರೇಕಿಂಗ್ ನ್ಯೂಸ್
12-07-24 05:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.12: ಪವರ್ ಟಿವಿ ಕನ್ನಡ ಸುದ್ದಿ ವಾಹಿನಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸೂಕ್ತ ಪರವಾನಗಿ ಇಲ್ಲದೆ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಅನ್ನುವ ಆರೋಪದಲ್ಲಿ ಕರ್ನಾಟಕ ಹೈಕೋರ್ಟ್ ಪ್ರಸಾರ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು.
ಈ ಸಂಬಂಧ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶದ ವಿರುದ್ಧ ಮೇಲ್ಮನವಿ ಹೋದ ಪವರ್ ಟಿವಿ ವಾಹಿನಿ ಪರವಾಗಿ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪೀಠವು, ಈ ವಿಚಾರದ ಕುರಿತಾಗಿ ನಾವು ಹೆಚ್ಚೇನು ಕೇಳಲು ಬಯಸೋದಿಲ್ಲ. ಸುದ್ದಿ ವಾಹಿನಿಯ ಪ್ರಸಾರ ನಿಲ್ಲಿಸುವುದು ರಾಜಕೀಯ ದ್ವೇಷದ ಕ್ರಮ ಅನ್ನೋದು ಸ್ಪಷ್ಟ ಎಂದಿದ್ದಾರೆ. ಸುದ್ದಿ ವಾಹಿನಿಯ ದನಿಯನ್ನು ಉಡುಗಿಸಬೇಕು ಅನ್ನುವ ಉದ್ದೇಶ ಇದರ ಹಿಂದಿದೆ. ಹೀಗಾಗಿ ವಾಹಿನಿ ಪ್ರಸಾರಕ್ಕೆ ತಡೆ ಹೇರಲಾಗಿತ್ತು. ಆದರೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡೋದು ಸರ್ಕಾರಗಳ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿಗಳು ಚಾಟಿ ಬೀಸಿದ್ದಾರೆ.
ಜುಲೈ 9ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಸೋದಾಗಿ ಹೇಳಿರುವ ಸುಪ್ರೀಂ ಕೋರ್ಟ್, ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಹೀಗಾಗಿ, ಸ್ಥಗಿತಗೊಂಡಿರುವ ಪವರ್ ಟಿವಿ ಮತ್ತೆ ಕಾರ್ಯ ನಿರ್ವಹಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಪವರ್ ಟಿವಿಯಲ್ಲಿ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸಮಗ್ರ ವರದಿ ಪ್ರಕಟವಾಗಿತ್ತು.
The Supreme Court on Friday granted interim relief to Kannada news channel Power TV and its affiliate Mitcoin Infrastructure by vacating an interim stay on the TV channel's broadcasts.Power TV is a Kannada news channel that had been at the forefront of reporting sexual abuse allegations against suspended Janata Dal (Secular) [JD (s)] leader Prajwal Revanna and his brother, Suraj Revanna.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm