ಬ್ರೇಕಿಂಗ್ ನ್ಯೂಸ್
16-07-24 03:34 pm HK News Desk ಕರ್ನಾಟಕ
ಕಾರವಾರ, ಜುಲೈ.16: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದು ಏಳು ಜನ ಜೀವಂತ ಸಮಾಧಿಯಾಗಿದ್ದಾರೆ. ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದ್ದು ಎರಡು ಕಾರು ಮಣ್ಣಿನಡಿಗೆ ಬಿದ್ದಿತ್ತು. ನಾಲ್ಕು ಗಂಟೆಗಳ ಕಾಲ ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಏಳು ಮಂದಿ ಮೃತರನ್ನು ಪತ್ತೆ ಮಾಡಿದೆ.
ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯಿಸಿದ್ದು, ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ.
ಕಾರಿನಲ್ಲಿದ್ದ ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ(42), ಶಾಂತಿ ನಾಯ್ಕ (37), ರೋಷನ್, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿದ್ದಾರೆ. 9 ಜನರಲ್ಲಿ 7 ಮಂದಿ ಮೃಪಟ್ಟಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.
ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಟ್ಯಾಂಕರ್ ನಿಲ್ಲಿಸಿ, ಚಾಲಕ ಹಾಗೂ ಕ್ಲೀನರ್ ಅಲ್ಲಿಯೇ ಗೂಡಂಗಡಿಯಲ್ಲಿ ಚಹಾ ಕುಡಿಯುತ್ತಿದ್ದರು. ಈ ವೇಳೆ ದಿಢೀರನೆ ಬೃಹತ್ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ಉರುಳಿ ಗಂಗಾವಳಿ ನದಿಗೆ ಬಿದ್ದಿದೆ. ಟ್ಯಾಂಕರ್ ಚಾಲಕ, ಕ್ಲೀನರ್ ಸೇರಿ ಒಂಬತ್ತು ಜನ ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ.
ಕಾರಿನಲ್ಲಿ ಒಂದೇ ಕುಟುಂಬ ಸದಸ್ಯರು ತೆರಳುತ್ತಿದ್ದರು. ಗುಡ್ಡ ಕುಸಿಯುತ್ತಿದ್ದಂತೆ ಹಠಾತ್ ಆಗಿ ಕಾರು ನಿಲ್ಲಿಸಿ ನಿಧಾನಕ್ಕೆ ಹಿಂದೆ ತೆಗೆದುಕೊಳ್ಳುತ್ತಿದ್ದರು. ಹಿಂದಿನ ಗಾಡಿಯಲ್ಲಿದ್ದ ನಾನು ಇಳಿದು ಬಂದು ನೋಡಿದೆ. ಗುಡ್ಡ ಕುಸಿಯುತ್ತಿದ್ದಂತೆ ಅಲ್ಲಿಂದ ಬೇರೆ ಕಡೆ ಹಾರಿ ಪಾರಾಗಿದ್ದೇನೆ. ಸ್ವಲ್ಪದರಲ್ಲೇ ನನ್ನ ಸಾವು ತಪ್ಪಿತ್ತು. ಇಲ್ಲಿ ಒಂದು ಟೀ ಅಂಗಡಿ ಇತ್ತು. ಟಿ ಅಂಗಡಿಯಲ್ಲಿ ನಾಲ್ಕು ಜನ ಇದ್ದರು. ಗ್ಯಾಸ್ ಟ್ಯಾಂಕರ್ ಕೂಡ ಇಲ್ಲೇ ನಿಲ್ಲಿಸಿದ್ದರು. ಗ್ಯಾಸ್ ಟ್ಯಾಂಕರ್ ಕೆಳಗೆ ನದಿಗೆ ಬಿದ್ದಿದೆ. ಕಾರು ಮತ್ತು ಟೀ ಅಂಗಡಿಯಲ್ಲಿದ್ದವರು ಸೇರಿ ಸುಮಾರು ಒಂಬತ್ತು ಜನ ಮಣ್ಣಿನಡಿ ಸಿಲುಕಿದ್ದಾರೆ ಎಂದು ಪ್ರತ್ಯಕ್ಷದರ್ಶಿ ರಾಜು ಎಂಬವರು ತಿಳಿಸಿದ್ದಾರೆ.
ಹೆದ್ದಾರಿ ಪಕ್ಕದಲ್ಲಿದ್ದ ಮನೆಗೂ ಗುಡ್ಡ ಕುಸಿದು ಬಿದ್ದಿದ್ದು ಮನೆಯಲ್ಲಿದ್ದವರೂ ಕಣ್ಮರೆಯಾಗಿದ್ದಾರೆ. ತಕ್ಷಣಕ್ಕೆ ಮನೆಯಲ್ಲಿದ್ದವರು ಯಾರು, ಕಾರಿನಲ್ಲಿದ್ದವರು ಯಾರೆಂದು ಮಾಹಿತಿ ಲಭ್ಯವಾಗಿಲ್ಲ. ಒಟ್ಟು 9 ಮಂದಿ ಕಾಣೆಯಾಗಿದ್ದಾರೆಂದು ಹೇಳಲಾಗುತ್ತಿದೆ.
Seven persons are reportedly trapped under mud after a landslide on National Highway 66 near Shirur in Ankola taluk of Uttar Kannada on Tuesday (July 16) following incessant rains. Following the landslide, the road between Ankola and Kumta has been blocked, Authorities have begun rescue operation.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 06:05 pm
Mangalore Correspondent
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm