ಬ್ರೇಕಿಂಗ್ ನ್ಯೂಸ್
16-07-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 16: ಹಾಸನದ ಪೆನ್ ಡ್ರೈವ್ ಪ್ರಕರಣ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿದ್ದು, ಆಡಳಿತ - ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ವಾಗ್ವಾದ ನಡೆಯಿತು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮಗಳ ಕುರಿತು ಚರ್ಚೆ ಮಾಡುವ ವೇಳೆ ರಾಜ್ಯ ಸರ್ಕಾರ ರಚಿಸಿರುವ ಎಸ್ ಐಟಿ ತನಿಖೆಯ ತಾರತಮ್ಯವನ್ನು ಪ್ರಸ್ತಾಪಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಎಫ್ಐಆರ್ ದಾಖಲಾಗಿ 40 ದಿನಗಳಾದರೂ ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರನ್ನು ವಿಚಾರಣೆಗೆ ಕರೆಯುವುದಿಲ್ಲ. ಅದೇ ರೀತಿ ಹೆಚ್.ಡಿ. ರೇವಣ್ಣನ ಮಗ ಮಾಡಿದ ತಪ್ಪಿಗೆ ರೇವಣ್ಣ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಯಿತು. ಬೆಂಗಳೂರು, ಹಾಸನ, ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಗೆ ತಲಾ 20 ಮಂದಿ ಪೊಲೀಸರ ತಂಡಗಳನ್ನು ನಿಯೋಜಿಸಲಾಗಿತ್ತು. ರೇವಣ್ಣ ಅವರ ಪತ್ನಿ ಭವಾನಿ ಅವರ ಬಂಧನಕ್ಕೂ ಪ್ರಯತ್ನಿಸಲಾಯಿತು. ಅವರು ನ್ಯಾಯಾಲಯದಲ್ಲಿ ಜಾಮೀನು ಪಡೆದುಕೊಂಡರು. ನಮ್ಮ ಪಕ್ಷದ ಮಾಜಿ ಶಾಸಕ ಪ್ರೀತಂಗೌಡ ಅವರನ್ನು ಬಂಧಿಸುವ ಯತ್ನಗಳಾದವು. ಎಸ್ಐಟಿ ಅಧಿಕಾರಿಗಳ ಈ ತಾರತಮ್ಯ ಏಕೆ ಎಂದು ಪ್ರಶ್ನಿಸಿದರು.
ಮಧ್ಯಪ್ರವೇಶಿಸಿದ ಜೆಡಿಎಸ್ನ ಹಿರಿಯ ಶಾಸಕರೂ ಆಗಿರುವ ಮಾಜಿ ಸಚಿವ ರೇವಣ್ಣ ಮಾತನಾಡಿ, ಪ್ರತಿಪಕ್ಷದ ನಾಯಕರು ನನ್ನ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಸ್ಪಷ್ಟನೆ ನೀಡಲು ನನಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು. ಜೆಡಿಎಸ್ನ ಶಾಸಕ ಕೃಷ್ಣಪ್ಪ ಅವರು, ರೇವಣ್ಣ ಅವರ ಪುತ್ರ ತಪ್ಪು ಮಾಡಿದ್ದಾರೆ ಎಂದು ಹೇಳುವುದು ಸರಿಯಲ್ಲ. ಅದನ್ನು ನ್ಯಾಯಾಲಯ ತೀರ್ಮಾನ ಮಾಡುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಆರ್.ಅಶೋಕ್ ಅವರು ತಮ ಹೇಳಿಕೆಯನ್ನು ಸರಿಪಡಿಸಿಕೊಳ್ಳುವುದಾಗಿ ಹೇಳಿದರು.
ಚರ್ಚೆಯ ನಡುವೆ ಪದೇ ಪದೆ ವಿಷಯ ಪ್ರಸ್ತಾಪವಾದಾಗ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ಎರಡು ಎಸ್ಐಟಿ ತಂಡಗಳ ನಡುವೆ ಪದೇ ಪದೆ ಹೋಲಿಕೆ ಮಾಡಿ ಮಾತನಾಡುತ್ತಿರುವುದು ಏಕೆ?, ನೂರಾರು ಮಹಿಳೆಯರ ಮಾನ ಹರಣವಾಗಿರುವ ಪ್ರಕರಣ ವಾಲ್ಮೀಕಿ ಹಗರಣಕ್ಕಿಂತಲೂ ಕಡಿಮೆ ಎಂಬ ಧೋರಣೆಯೇ?, ಮಹಿಳೆಯರ ಮಾನಕ್ಕೆ ಬೆಲೆ ಇಲ್ಲವೇ? ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕಾಂಗ್ರೆಸ್ನ ಶಾಸಕ ನಾರಾಯಣ ಸ್ವಾಮಿಯವರು ಮಧ್ಯಪ್ರವೇಶ ಮಾಡಿ, ಹಣ ಹೋದರೆ ಬರುತ್ತದೆ, ಮಾನ ಹೋದರೆ ಬರುತ್ತದೆಯೇ? ಎಂದು ಪ್ರಶ್ನಿಸಿದರು. ಇದರಿಂದ ಸಿಟ್ಟಾದ ರೇವಣ್ಣ ಅವರು, ನಿಮ್ಮ ಬಂಡವಾಳ ಗೊತ್ತಿದೆ, ಕುಳಿತುಕೊಳ್ಳಿ ಎಂದು ಕಿಡಿಕಾರಿದರು. ಈ ವೇಳೆ ಕೃಷ್ಣಪ್ಪ, ನೀವೆಲ್ಲಾ ಶ್ರೀರಾಮಚಂದ್ರರು ಎಂದು ಕಾಂಗ್ರೆಸ್ಸಿಗರನ್ನು ಮೂದಲಿಸಿದರು.
ಅವಕಾಶ ಪಡೆದುಕೊಂಡು ಸ್ಪಷ್ಟನೆ ನೀಡಿದ ರೇವಣ್ಣ ಅವರು, ನನಗೆ ಕಾಂಗ್ರೆಸ್ ಶಾಸಕರಂತೆ ವಾದ ಮಾಡುವಷ್ಟು ಶಕ್ತಿ ಇಲ್ಲ. ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ, ನಾನು ಯಾರ ಪರವಾಗಿಯೂ ವಹಿಸಿಕೊಂಡು ಮಾತನಾಡುತ್ತಿಲ್ಲ ಎಂದು ಬಾವುಕರಾದರು. 40 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಹೆಣ್ಣು ಮಗಳೊಬ್ಬಳನ್ನು ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಕರೆಸಿಕೊಂಡು ದೂರು ಬರೆಸಿಕೊಂಡಿದ್ದಾರೆ. ಇಂತಹ ವ್ಯಕ್ತಿ ಪೊಲೀಸ್ ಮಹಾನಿರ್ದೇಶಕರಾಗಲು ಅನರ್ಹರು. ಮೂರೂ ಬಿಟ್ಟು ನೀತಿಗೆಟ್ಟ ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರಿಂದ ಆಕ್ಷೇಪಗಳು ವ್ಯಕ್ತವಾದವು. ಸಚಿವ ಪ್ರಿಯಾಂಕ ಖರ್ಗೆ ಸಂತ್ರಸ್ತರ ದೂರು ತೆಗೆದುಕೊಳ್ಳುವುದು ತಪ್ಪೇ? ಎಂದು ಪ್ರಶ್ನಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸರ್ಕಾರದ ವಿರುದ್ಧ ರೇವಣ್ಣ ಆರೋಪ ಮಾಡಿದ್ದಾರೆ. ಅವರಿಗೆ ಅನ್ಯಾಯವಾಗಿದ್ದರೆ ಪ್ರತ್ಯೇಕವಾಗಿ ನೋಟೀಸ್ ಕೊಡಲಿ, ಚರ್ಚೆಗೆ ಅವಕಾಶ ಮಾಡಿಕೊಡಿ ಎಂದು ಸಲಹೆ ನೀಡಿದರು. ನಾನು ನೋಟೀಸ್ ಕೊಡುತ್ತೇನೆ ಎಂದು ರೇವಣ್ಣ ಹೇಳಿದರು. ಒಟ್ಟಾರೆ ಪೆನ್ ಡ್ರೈವ್ ಪ್ರಕರಣ ಸದನದಲ್ಲಿ ಕೆಲಕಾಲ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು.
The pen drive case in Hassan echoed in the Assembly today, leading to a verbal spat between the ruling and opposition members. Leader of Opposition in the Assembly R Ashoka, while discussing the irregularities in the Valmiki Scheduled Tribes Development Corporation, raised the issue of discrimination in the SIT probe constituted by the state government.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm