ಬ್ರೇಕಿಂಗ್ ನ್ಯೂಸ್
07-12-20 03:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.7: ದೆಹಲಿ ಮತ್ತು ಹರ್ಯಾಣದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಡಿ.8ರಂದು ದೇಶಾದ್ಯಂತ ಬಂದ್ ನಡೆಸಲು ರೈತರ ಸಂಘಟನೆಗಳು ನಿರ್ಧರಿಸಿವೆ. ಕರ್ನಾಟಕದಲ್ಲೂ ರಾಜ್ಯ ರೈತ ಸಂಘದ ವತಿಯಿಂದ ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಪ್ರದೇಶಗಳಲ್ಲಿ ಪ್ರತಿಭಟನೆ, ಬಂದ್ ನಡೆಯಲಿದೆ. ಈ ಬಗ್ಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.
ಮಂಗಳವಾರ ರಾಜ್ಯದಾದ್ಯಂತ ಪ್ರತಿಭಟನೆ, ಅರ್ಧ ದಿನದ ವರೆಗೆ ಬಂದ್ ಮಾಡಲಾಗುವುದು. ಬುಧವಾರ ಎಲ್ಲ ಜಿಲ್ಲೆಗಳಿಂದ 50 ಸಾವಿರಕ್ಕೂ ಹೆಚ್ಚು ರೈತರು ಟ್ರಕ್, ಲಾರಿಗಳಲ್ಲಿ ರಾಜಧಾನಿಗೆ ಬರಲಿದ್ದಾರೆ. ಬುಧವಾರ ಪೂರ್ತಿಯಾಗಿ ಬೆಂಗಳೂರು ಬಂದ್ ಆಗಲಿದೆ. ರೈತರು ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಡಿ.7ರಿಂದ 15ರ ವರೆಗೆ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದರಲ್ಲಿ ಭೂಸುಧಾರಣೆ ಮಸೂದೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಇದೇ ಸಂದರ್ಭದಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ರೈತರು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸಿ, ಬಳಿಕ ವಿಧಾನಸೌಧದತ್ತ ತೆರಳಲಿದ್ದಾರೆ. ಪೊಲೀಸರು ಅವಕಾಶ ನೀಡದಿದ್ದರೆ ಕೋರ್ಟ್ ಆವರಣದಲ್ಲಿ ಪ್ರತಿಭಟನೆಗೆ ಪ್ಲಾನ್ ಹಾಕಿದ್ದಾರೆ.
ಇದೇ ವೇಳೆ, ಉತ್ತರದ ರಾಜ್ಯಗಳಲ್ಲಿ ರೈತರ ಪ್ರತಿಭಟನೆಗೆ ಪ್ರತಿಪಕ್ಷಗಳು ಬೆಂಬಲ ಘೋಷಿಸಿವೆ. ಕಾಂಗ್ರೆಸ್, ಆರ್ ಜೆಡಿ, ಎಸ್ಪಿ, ಟಿಎಂಸಿ ಸೇರಿದಂತೆ ಬಹುತೇಕ ವಿಪಕ್ಷಗಳು ಬೆಂಬಲ ಘೋಷಿಸಿದ್ದು, ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಕೇಂದ್ರ ಸರಕಾರ ತರಲುದ್ದೇಶಿಸಿರುವ ಕೃಷಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ಈಗಾಗ್ಲೇ ಕಳೆದ ಎರಡು ವಾರಗಳಿಂದ ದೆಹಲಿ, ಹರ್ಯಾಣ, ಉತ್ತರ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ರೈತರ ಜೊತೆಗೆ ಪ್ರತಿಭಟನೆಗಿಳಿದ ಎಸ್ಪಿ ಮುಖಂಡ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm