ಬ್ರೇಕಿಂಗ್ ನ್ಯೂಸ್
17-07-24 07:26 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.17: ಪಂಚೆ ತೊಟ್ಟಿದ್ದಕ್ಕೆ ನಗರದ ಜಿ.ಟಿ ಮಾಲ್ ನಲ್ಲಿ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿದ ಘಟನೆ ನಡೆದಿದೆ.
ಮಾಲ್ ಗೆ ಸಿನಿಮಾ ನೋಡಲು ಯುವಕನೊಬ್ಬ ತನ್ನ ತಂದೆ ಜೊತೆಗೆ ಬಂದಿದ್ದ ಆದರೆ ಪಂಚೆ ಹಾಕಿದ ಕಾರಣಕ್ಕಾಗಿ ರೈತನಿಗೆ ಮಾಲ್ ಎಂಟ್ರಿ ನಿರಾಕರಣೆ ಮಾಡಲಾಗಿತ್ತು, ಇದರ ವಿಡಿಯೋ ವೈರಲ್ ಬೆನ್ನಲ್ಲೇ ಇಂದು ಅದೇ ಮಾಲ್ ಸಿಬ್ಬಂದಿಗಳಿಂದ ಪಂಚೆ ಉಟ್ಟ ರೈತನನ್ನು ಕರೆಸಿ ಸನ್ಮಾನ ಮಾಡಲಾಗಿದೆ
ಈ ಘಟನೆಗೆ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಇದು ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಇದರ ಬೆನ್ನಲ್ಲೇ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿ, ಮಾಲ್ ಸಿಬ್ಬಂದಿ ಕ್ಷಮೆ ಕೇಳುವಂತೆ ಮಾಡಿದ್ದಾರೆ.
ರೈತ ಬೆಳೆದ ಬೆಳೆ ಬೇಕು ಆದರೆ ನಗರದಲ್ಲಿ ರೈತನಿಗೆ ಮಾಲ್‌ಗೆ ಎಂಟ್ರಿ ಇಲ್ವಾ ಎಂದು ಹಲವು ಪ್ರಶ್ನೆ ಮಾಡಿದ್ದಾರೆ. ಮಾಲ್ ಆಡಳಿತ ಮಂಡಳಿಯ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದು, ಸೂಕ್ತ ಕ್ರಮಕ್ಕೂ ಆಗ್ರಹಿಸಿದ್ದಾರೆ.
ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಮಂಡ್ಯ ಜಿಲ್ಲಾ ರೈತ ಸಂಘ ಎಂಬ ಫೇಸ್ ಬುಕ್ ಪೇಜ್‌ನಲ್ಲಿ ‘ ಮಾಲ್ ಸಿಬ್ಬಂದಿಗಳು ನಾಡಿನ ರೈತರಲ್ಲಿ ಕ್ಷಮೆ ಕೇಳಬೇಕು. ಇನ್ನು ಮುಂದೆ ಈ ರೀತಿ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಇದೇ ಭಾನುವಾರ ರಾಜ್ಯಾದ್ಯಂತ ರೈತರು ನಿಮ್ಮ ಮಾಲ್ ಗೆ ಪಂಚೆ ಹಾಕೊಂಡು ಮುತ್ತಿಗೆ ಹಾಕಲಿದ್ದಾರೆ’ ಎಂದು ಎಚ್ಚರಿಕೆ ನೀಡಿದೆ.
ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಸಂತೋಷ್ ಲಾಡ್, ಈ ವಿಚಾರ ತಿಳಿದು ಬಂತು. ಯಾವುದೋ ಮಾಲ್ ಒಂದರಲ್ಲಿ ಬಿಟ್ಟಿಲ್ಲ ಎಂಬ ಮಾಹಿತಿ ಗೊತ್ತಾಯಿತು. ಇದು ಪ್ರಸ್ತುತವಿರುವ ಮಾನಸಿಕ ಸ್ಥಿತಿ. ಸಿದ್ದರಾಮಯ್ಯ ಅವರು ಪಂಚೆ ಹಾಕಿಕೊಂಡು ಸಿಎಂ ಆಗಿದ್ದಾರೆ. ಇದು ಆ ಸೆಕ್ಯುರಿಟಿಗೆ ಯಾರೋ ಗೈಡ್ ಲೈನ್ಸ್ ಕೊಟ್ಟಿರಬಹುದು ಎಂದರು.
ಮಾಹಿತಿ ತಿಳಿದು ಪ್ರತಿಕ್ರಿಯೆ ಕೊಡುವೆ ಎಂದ ಡಿಕೆಶಿ ;
ಇನ್ನು ಮಾಲ್‌ನಲ್ಲಿ ರೈತನಿಗೆ ಪಂಚೆ ತೊಟ್ಟ ಕಾರಣಕ್ಕಾಗಿ ಎಂಟ್ರಿ ಕೊಡದೆ ಇರುವ ವಿಚಾರವಾಗಿ ಮಾಹಿತಿ ಇಲ್ಲ. ಈ ಮಾಹಿತಿಯನ್ನು ತಿಳಿದುಕೊಂಡು ಸಂಬಂಧ ಪಟ್ಟವರಿಗೆ ಸೂಕ್ತ ಸೂಚನೆಗಳನ್ನು ಕೊಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೃಷ್ಣ ಭೈರೇಗೌಡ ಪ್ರತಿಕ್ರಿಯೆ
ಈ ಘಟನೆ ಸಂಬಂಧ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಮುಖ ನೋಡಿ, ಬಟ್ಟೆ ನೋಡಿ ಒಬ್ಬ ವ್ಯಕ್ತಿಯನ್ನು ಅಳೆಯಬಾರದು. ಇದೊಂದು ಬ್ರಿಟಿಷರ ಮನಸ್ಥಿತಿ, ನಮ್ಮನ್ನು ಆಳಿದವರ ಮೈಂಡ್ಸೆಟ್. ಜಿ.ಟಿ.ಮಾಲ್ ಅಷ್ಟೇ ಅಲ್ಲ, ಬೇರೆ ಕಡೆಯೂ ಇಂತಹ ರೀತಿ ನಡೆದಿವೆ. ಅರಿವಿನ ಕೊರತೆ ಇದೆಯೋ, ದುರಹಂಕಾರದಿಂದ ಮಾಡುತ್ತಿದ್ದಾರೋ? ಜಿ.ಟಿ.ಮಾಲ್ನವರು ಹಾಗೇ ನಡೆದುಕೊಂಡಿದ್ದು ತಪ್ಪು, ಖಂಡನೀಯ. ಮುಖ ನೋಡಿ ಗೌರವ ಕೊಡುವುದು ಖಂಡನೀಯ ಎಂದರು.
ಇತ್ತೀಚಿಗೆ ರೈತನೊಬ್ಬನಿಗೆ ನಮ್ಮ ಮೆಟ್ರೋದಲ್ಲಿ ಪ್ರವೇಶ ನಿರಾಕರಿಸಲಾಗಿತ್ತು. ಭದ್ರತಾ ಸಿಬ್ಬಂದಿ ಅವರ ಉಡುಪು ಕಂಡು ಪ್ರಯಾಣಕ್ಕೆ ಅನುಚಿತ ಎಂದು ಬಿಟ್ಟಿರಲಿಲ್ಲ. ಈ ಘಟನೆಯ ನಂತರ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಲಾಗಿತ್ತು.
ಕ್ಷಮೆ ಕೇಳಿದ ಸೆಕ್ಯೂರಿಟಿ ;
ರೈತನನ್ನು ತಡೆದ ಸೆಕ್ಯೂರಿಟಿ ಸಿಬ್ಬಂದಿ ಕೂಡ ಕ್ಷಮೆಯಾಚಿಸಿದ್ದಾರೆ. ''ನಿನ್ನೆ ಮಧ್ಯಾಹ್ನ ವ್ಯಕ್ತಿಯೊಬ್ಬರು ಪಂಚೆಯಲ್ಲಿ ಮಾಲ್‌ಗೆ ಬಂದಿದ್ದರು. ಪಂಚೆಯನ್ನು ಮೊಣಕಾಲಿನ ತನಕ ಧರಿಸಿ ನಿಂತಿದ್ದರು. ಕೆಳಗಿನ ಮಹಡಿಯಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯುತ್ತಿತ್ತು. ವಿಚಾರವನ್ನು ಮ್ಯಾನೇಜ್ಮೆಂಟ್ ಗಮನಕ್ಕೆ ತರಲಾಗಿತ್ತು. ಸಂಜೆ ಮತ್ತೆ ರೈತರೊಬ್ಬರು ಪಂಚೆ ಧರಿಸಿ ಬಂದಿದ್ದರು. ಈ ಸಮಯದಲ್ಲಿ ನಾವು ತಡೆದು, ಮ್ಯಾನೇಜ್ಮೆಂಟ್ ಗಮನಕ್ಕೆ ತಂದಿದ್ದೆವು. ಆದರೆ, ಉದ್ದೇಶಪೂರ್ವಕವಾಗಿ ತಡೆದಿಲ್ಲ. ಮ್ಯಾನೇಜ್ಮೆಂಟ್ನಿಂದ ಉತ್ತರ ಬರುವ ತನಕ ಕಾಯಿಸಿದ್ದೆವಷ್ಟೇ'' ಎಂದು ಸೆಕ್ಯೂರಿಟಿ ಅರುಣ್ ಸ್ಪಷ್ಟನೆ ನೀಡಿದ್ದಾರೆ.
ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್ ಸಾಧ್ಯತೆ ;
ರೈತನಿಗೆ ಅವಮಾನ ಮಾಡಿದ ಜಿಟಿ ವರ್ಲ್ಡ್ ಮಾಲ್ ಮುಂದೆ ಇಂದು ರೈತ ಸಂಘಟನೆಗಳ ಹಾಗೂ ಕನ್ನಡ ಸಂಘಟನೆಗಳ ಸದಸ್ಯರು ಪಂಚೆ ಉಟ್ಟು ಪ್ರತಿಭಟನೆ ನಡೆಸಿದರು. ಇದೀಗ ರೈತರಿಗೆ ನ್ಯಾಯ ಸಲ್ಲಿಸಲು ಹೋರಾಟ ನಡೆಸಿದ ಹಾಗೂ ಸಾರ್ವಜನಿಕರ ಮುಂದೆ ರೈತನಿಗೆ ಮಾಡಿದ ಅಪಮಾನಕ್ಕೆ ಮಾಲ್ ಮಾಲೀಕರು ಕ್ಷಮೆ ಯಾಚಿಸಿದ್ದರಿಂದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.ಈ ನಡುವೆ ಮಾಲ್ ಆಡಳಿತದ ವರ್ತನೆಯ ಬಗ್ಗೆ ಸ್ಪಷ್ಟನೆ ಕೇಳಿ ನೋಟಿಸ್ ನೀಡಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಮುಂದಾಗಿದೆ.
Farmer denied entry to Bengalore GT World Mall, peotest held, farmer honoured by staffs. Members of pro-Kannada outfits on Wednesday morning staged a protest in front of the GT World Mall near Magadi Road after a farmer in traditional attire was allegedly denied entry.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
12-01-25 05:07 pm
HK News Desk
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
12-01-25 12:33 pm
Mangalore Correspondent
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
DYFI, CM Siddaramaiah, IPS Anupam Agrawal; ಪೊ...
11-01-25 04:57 pm
Lava Kusha Jodukare Kambala, Mangalore; ತೃತೀಯ...
11-01-25 02:25 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm