ಬ್ರೇಕಿಂಗ್ ನ್ಯೂಸ್
18-07-24 11:06 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.18: ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲೂ ಉದ್ಯೋಗದ ಮೀಸಲು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹೊಸ ಮಸೂದೆಯನ್ನು ಜಾರಿಗೆ ತಂದಿದೆ. ಎಲ್ಲ ಮಾದರಿಯ ಕೈಗಾರಿಕೆ, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸುವ ರಾಜ್ಯ ಉದ್ಯೋಗ ಮಸೂದೆಯ ಕರಡಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಖಾಸಗಿ ಉದ್ಯೋಗಗಳಲ್ಲಿ ಶೇ.50-75ರಷ್ಟು ಕನ್ನಡಿಗರನ್ನು ಕಡ್ಡಾಯಗೊಳಿಸುವ ಮಸೂದೆ ಇದಾಗಿದೆ. ನಿರ್ವಹಣಾ ವಲಯದ ಉದ್ಯೋಗಗಳಲ್ಲಿ ಶೇಕಡಾ 50 ರಷ್ಟು ಮತ್ತು ನಿರ್ವಹಣೆಯೇತರ ಉದ್ಯೋಗಗಳಲ್ಲಿ ಶೇಕಡಾ 75 ರಷ್ಟು ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುತ್ತದೆ. ಈ ಮಸೂದೆಯು ಐಟಿ ಕಂಪನಿಗಳು ಸೇರಿದಂತೆ ಸಂಪೂರ್ಣ ಖಾಸಗಿ ವಲಯಗಳನ್ನು ಒಳಗೊಂಡಿದೆ. ಇದನ್ನು ಪ್ರಸ್ತುತ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡದ ಕಂಪನಿಗಳಿಗೆ ದಂಡವನ್ನು ವಿಧಿಸಲು ಅವಕಾಶ ನೀಡಲಿದೆ. ವಿಧೇಯಕದಲ್ಲಿ ನಿಬಂಧನೆಗಳನ್ನು ಅನುಸರಿಸದ ಕಂಪನಿಗಳಿಗೆ 10,000 ರಿಂದ 25,000 ರೂ. ವರೆಗೆ ದಂಡ ವಿಧಿಸಲಾಗುವುದು. ಆನಂತರವೂ ಇದೇ ದೂರು ಇದ್ದರೆ ಜಾರಿ ಆಗುವವರೆಗೆ ಪ್ರತಿದಿನ 100 ರೂ.ಗಳನ್ನು ಸಂಗ್ರಹಿಸಲಾಗುತ್ತದೆ ಎನ್ನುವುದನ್ನು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.
ಮಸೂದೆ ಪ್ರಕಾರ, ಕನ್ನಡ ಮಾತನಾಡುವುದರಿಂದ ಒಬ್ಬನನ್ನು ಕನ್ನಡಿಗನೆಂದು ಗುರುತಿಸಲಾಗಲ್ಲ. ಕನ್ನಡಿಗನೆಂದು ಅರ್ಹತೆ ಪಡೆಯಲು, ಒಬ್ಬ ವ್ಯಕ್ತಿ 15 ವರ್ಷ ಕಾಲ ರಾಜ್ಯದಲ್ಲಿ ವಾಸಿಸಿರಬೇಕು. ಮತ್ತು ನೋಡಲ್ ಏಜೆನ್ಸಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆದರೆ ಇದರ ಬಗ್ಗೆ ಸಂಸ್ಥೆಗಳು ಅಗತ್ಯ ಬಿದ್ದರೆ ವಿನಾಯಿತಿ ಕೇಳಿ ಅರ್ಜಿ ಸಲ್ಲಿಸಬಹುದು. ಸರ್ಕಾರ ಕೆಲವು ಷರತ್ತುಗಳಡಿ ಷರತ್ತಿನಲ್ಲಿ ಸಡಿಲಿಕೆ ಮಾಡಬಹುದು. ಆದರೆ, ಎಲ್ಲಾ ಖಾಸಗಿ ಸಂಸ್ಥೆಗಳು ಗ್ರೂಪ್ 'ಸಿ' ಮತ್ತು 'ಡಿ' ಬ್ಲೂ ಕಾಲರ್ ಉದ್ಯೋಗಗಳಿಗೆ ಕನ್ನಡಿಗರನ್ನು ಮಾತ್ರ ನೇಮಿಸಿಕೊಳ್ಳಬೇಕು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.
ಮಸೂದೆಗೆ ಭಾರೀ ಆಕ್ಷೇಪ, ತಡೆ ಹಾಕಿದ ಮುಖ್ಯಮಂತ್ರಿ
ಖಾಸಗಿ ಕಂಪೆನಿಗಳಲ್ಲಿ 50 ರಷ್ಟು ಉದ್ಯೋಗ ಕನ್ನಡಿಗರಿಗೆ ನೀಡುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಐಟಿ ಕಂಪನಿಗಳಿಂದ ಭಾರೀ ಆಕ್ಷೇಪ ಕೇಳಿಬಂದಿದೆ. ಹೀಗಾಗಿ ಸದ್ಯಕ್ಕೆ ಈ ಮಸೂದೆಯನ್ನು ಅಧಿವೇಶನದಲ್ಲಿ ಮಂಡನೆ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟದಲ್ಲಿ ಅನುಮತಿ ಸಿಕ್ಕರೂ, ಪ್ರಬಲ ಲಾಬಿಗೆ ಮಣಿದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಸೂದೆ ತಡೆಹಿಡಿಯಲು ಸೂಚನೆ ನೀಡಿದ್ದಾರೆ. ಕೆಲವು ಬದಲಾವಣೆಗಳೊಂದಿಗೆ ಮಸೂದೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ. ಖಾಸಗಿ ವಲಯದ ಕಂಪನಿಗಳ ಮಸೂದೆ ಜಾರಿ ವಿಚಾರ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.
The Karnataka government has paused, and will further study, a bill directing private firms in the state to reserve jobs for Kannadigas. The bill, cleared Monday, requires firms in India's IT capital to prioritise local hires for 70 per cent of non-management roles and 50 per cent of management-level jobs.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm