ಬ್ರೇಕಿಂಗ್ ನ್ಯೂಸ್
18-07-24 04:43 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.18: ರೇಣುಕಾಚಾರ್ಯ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಲಾಗಿದೆ. ಆರ್ಥಿಕಾಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ ಸಿ ಗೌಡರ್ ಅವರು ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಆ. 1ರವರೆಗೆ ವಿಸ್ತರಿಸಿ ಆದೇಶ ನೀಡಿದ್ದಾರೆ. ಜೂ. 18ರಂದು ನಡೆದ ವಿಚಾರಣೆಯಲ್ಲಿ ಈ ಆದೇಶ ಹೊರಬಿದ್ದಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ;
ಈ ಹಿಂದಿನ ವಿಚಾರಣೆಯಲ್ಲಿ ದರ್ಶನ್ ಅವರಿಗೆ ಜು. 5ರಂದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆ ಅವಧಿಯು ಜು. 18ರಂದು ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 17 ಮಂದಿ ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲರನ್ನೂ ವಿಚಾರಣೆಗೊಳಪಡಿಸಲಾಗಿತ್ತು.
ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ದರ್ಶನ್, ಪವಿತ್ರಾ ಗೌಡ ಸೇರಿ 13 ಮಂದಿ ಹಾಗೂ ತುಮಕೂರು ಕೇಂದ್ರ ಕಾರಾಗೃಹದಿಂದ ಮೂವರನ್ನು ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಸರ್ಕಾರಿ ವಕೀಲರು ಹಾಗೂ ದರ್ಶನ್ ಪರ ವಕೀಲರ ವಾದ- ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ಆರೋಪಿಗಳ ಬಂಧನವನ್ನು ವಿಸ್ತರಿಸಿ ಆದೇಶ ಹೊರಡಿಸಿದರು.
ಮನೆ ಊಟದ ಬಗ್ಗೆ ನಾಳೆ ನಿರ್ಧಾರ ಮತ್ತೊಂದೆಡೆ, ತಮಗೆ ಮನೆ ಊಟ ಬೇಕು, ಜೈಲಿನಲ್ಲಿರುವ ತಮ್ಮ ಸೆಲ್ ನಲ್ಲಿ ಮಲಗಲು ಹಾಸಿಗೆ ವ್ಯವಸ್ಥೆ ಮಾಡಿಕೊಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್ ಮುಂದೆ ಬಂದಿದ್ದು, ಆ ಅರ್ಜಿಯ ವಿಚಾರಣೆಯನ್ನು ಜು. 19ಕ್ಕೆ ಮುಂದೂಡಲಾಗಿದೆ. ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಇಂದಿಗೆ 26 ದಿನಗಳಾಗಿವೆ. ಕಂಬಿ ಹಿಂದೆ ಇರುವ ದರ್ಶನ್‌ಗೆ ಜೈಲೂಟ ಒಗ್ಗುತ್ತಿಲ್ಲ. ಹೀಗಾಗಿ ಮನೆಯೂಟ, ಹಾಸಿಗೆ ಹಾಗೂ ಪುಸ್ತಕಕ್ಕೆ ಬೇಡಿಕೆ ಇಟ್ಟು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಇಂದು ರಿಟ್ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇನ್ನು ಕೋರ್ಟ್ ನಲ್ಲಿ ಏನೆಲ್ಲಾ ಆಯ್ತು ಅಂತ ನೋಡುವುದಾದರೆ ನಟ ದರ್ಶನ್ ಪರ ವಕೀಲ ಕೆಎನ್ ಫಣೀಂದ್ರ ಹಾಜರಾಗಿ, ಇಂದೇ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ಆದರೆ, ಕೇಸ್ ನ ಎಸ್ಪಿಪಿ ಆಕ್ಷೇಪಣೆ ಸಲ್ಲಿಕೆ ಮಾಡಿ ಸೋಮವಾರಕ್ಕೆ ವಾದ ಮಾಡಲು ಅವಕಾಶ ಕೇಳಿದರು. ಆದರೆ ನಾಳೆ ವಿಚಾರಣೆ ಮಾಡೋದಾಗಿ ಜಡ್ಜ್ ಆದೇಶ ನೀಡಿದ್ದಾರೆ. ಕಾನೂನಿನಲ್ಲಿ ಇರೋ ಅವಕಾಶಗಳ ನೋಡೋಣ ಅಂತ ನಾಳೆಗೆ ಅರ್ಜಿ ವಿಚಾರಣೆ ಮುಂದೂಡಿದ್ದಾರೆ. ಇದರೊಂದಿಗೆ ನಾಳೆವರೆಗೂ ದರ್ಶನ್ ಗೆ ಜೈಲೂಟವೇ ಗಟ್ಟಿಯಾಗಿದೆ.
ಸರ್ಕಾರಿ ವಕೀಲರಿಂದ ಆಕ್ಷೇಪಣೆ ನಟ ದರ್ಶನ್ ಮನೆ ಊಟಕ್ಕೆ ಹಾಕಿದ್ದ ಅರ್ಜಿಗೆ ಪ್ರಾಸಿಕ್ಯೂಷನ್‌ನಿಂದ ಅಕ್ಷೇಪಣೆ ಸಲ್ಲಿಕೆ ಮಾಡಿದ್ದು, ದರ್ಶನ್ ನ್ಯಾಯಾಂಗ ಬಂಧನಕ್ಕೆ ಹೋಗುವವರೆಗೂ ಯಾವುದೇ ಅನಾರೋಗ್ಯ ಇರಲಿಲ್ಲ. ಅಲ್ಲದೆ ಅರ್ಜಿ ಜೊತೆ ಅವರು ಯಾವುದೇ ಕಾಯಿಲೆ ಬಗ್ಗೆ ವೈದ್ಯಕೀಯ ದಾಖಲೆ ಸಲ್ಲಿಸಿಲ್ಲ. ನಿಯಮಗಳ ಪ್ರಕಾರ ವಿನಾಯಿತಿಗಾಗಿ ಕಾರಾಗೃಹಗಳ ಐಜಿಗೆ ಅರ್ಜಿ ಸಲ್ಲಿಸಬೇಕು, ಈ ಅರ್ಜಿಯಲ್ಲಿ ಅವರು ಪಡೆಯುವ ಸವಲುತ್ತುಗಳ ನಿರ್ವಹಣೆ ಎಲ್ಲಾ ವಿವರಿಸಬೇಕು. ಆದರೆ ಇದಾವುದನ್ನು ಮಾಡದೇ ನೇರವಾಗಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಇವರ ಅರ್ಜಿಯೇ ಊರ್ಜಿತ ಅಲ್ಲ ಅಂತ ಆಕ್ಷೇಪಣೆ ಸಲ್ಲಿಕೆ ಮಾಡಿದೆ.
ಜೈಲಿನಲ್ಲಿ ನೀಡಲಾಗುತ್ತಿರುವ ಆಹಾರ ಜೀರ್ಣಿಸಿಕೊಳ್ಳಲು ನನಗೆ ಆಗುತ್ತಿಲ್ಲ. ಜೈಲಿನ ಊಟದಿಂದಾಗಿ ಅತಿಸಾರ ಉಂಟಾಗಿದ್ದು ಪದೇ ಪದೇ ಭೇದಿ ಆಗುತ್ತಿದೆ. ಪರಿಣಾಮ ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರ ತರಿಸಿಕೊಳ್ಳಲು ಜೈಲು ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಿದ್ದೆ. ಆದರೆ, ಅವರು ಇದಕ್ಕೆ ಒಪ್ಪಿಲ್ಲ' ಎಂದು ದರ್ಶನ್ ಅರ್ಜಿಯಲ್ಲಿ ವಿವರಿಸಿದ್ದಾರೆ.
ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾರಾಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪರಪ್ಪನ ಅಗ್ರಹಾರ ಕೇಮದ್ರ ಕಾರಾಗೃಹದ ಸೂಪರಿಂಟೆಂಡೆಂಟ್, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
Actor Darshan judicial custody extended again till August in murder case. Application for home food has been postponed to July 19th by the court as Darshan is facing health issues by eating jail food.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm