ಬ್ರೇಕಿಂಗ್ ನ್ಯೂಸ್
19-07-24 10:54 am HK News Desk ಕರ್ನಾಟಕ
ಹಾವೇರಿ, ಜುಲೈ 19: ನಿರಂತರ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವಣೂರಿನ ಮಾದಾಪುರ ಗ್ರಾಮದಲ್ಲಿ ಇಂದು ನಸುಕಿನ ಜಾವ ನಡೆದಿದೆ. ಮೃತರನ್ನು ಚನ್ನಮ್ಮ(30) ಹಾಗು 2 ವರ್ಷದ ಅವಳಿ ಮಕ್ಕಳಾದ ಅಮೂಲ್ಯ ಮತ್ತು ಅನುಶ್ರೀ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮುತ್ತಪ್ಪ ಮತ್ತು ಅವರ ಪತ್ನಿ ಸುನೀತಾ ಹಾಗೂ ಯಲ್ಲಮ್ಮ(70) ಗಾಯಗೊಂಡಿದ್ದು, ಸವಣೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಯಲ್ಲಮ್ಮ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಮೃತಪಟ್ಟ ಅವಳಿ ಮಕ್ಕಳು ಗಾಯಗೊಂಡಿರುವ ಮುತ್ತಪ್ಪ ಮತ್ತು ಸುನೀತಾ ದಂಪತಿಯ ಪುತ್ರಿಯರಾಗಿದ್ದಾರೆ.
ಮಾಜಿ ಶಾಸಕ ಅಜ್ಜಂಪೀರ ಖಾದ್ರಿ, ಎಸಿ ಮಹಮ್ಮದ್ ಅಜ್ಜೀಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಮೃತರ ಸಂಬಂಧಿಕ ವಿರೇಶ್ ಸೊಪ್ಪಿನ ಮಾಹಿತಿ ನೀಡಿ, "ರಾತ್ರಿ 2.30ರ ಸುಮಾರಿಗೆ ಮೇಲ್ಚಾವಣಿ ಕುಸಿದಿದೆ. ಉಸಿರಾಟದ ತೊಂದರೆಯಾಗಿ ಮೂವರು ಸಾವನ್ನಪ್ಪಿದರು. ಸವಣೂರಿನಲ್ಲಿ ಯಾವಾಗಲೂ ಆಂಬ್ಯುಲೆನ್ಸ್ ಸಮಸ್ಯೆ ಇದ್ದದ್ದೇ. ಒಂದು ವೇಳೆ ಇದ್ದರೂ ಸಮಯಕ್ಕೆ ಸರಿಯಾಗಿ ಕಳುಹಿಸುವುದಿಲ್ಲ. ಘಟನೆಯ ತಕ್ಷಣವೇ ಆಂಬ್ಯುಲೆನ್ಸ್ ಬಂದಿದ್ದರೆ ಮೂವರ ಪ್ರಾಣ ಉಳಿಸಬಹುದಿತ್ತು" ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯಾದ್ಯಂತ ಈ ವರ್ಷ ವಾಡಿಕೆಗಿಂತ ಅಧಿಕ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಗುಡ್ಡ, ರಸ್ತೆ ಕುಸಿತ ಸಂಭವಿಸಿ ಸಾವು-ನೋವು ವರದಿಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಮಂದಿ ಸಾವನ್ನಪ್ಪಿದ್ದು ಹಲವರು ಕಣ್ಮರೆಯಾಗಿದ್ದಾರೆ. ಜಿಲ್ಲಾಡಳಿತ ತೆರವು ಕಾರ್ಯಾಚರಣೆ ಮಾಡುತ್ತಿದ್ದಂತೆ ಮತ್ತೆ ಮತ್ತೆ ಗುಡ್ಡ ಕುಸಿಯುತ್ತಿದೆ.
ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನದಿ ಪಾತ್ರದ ಜನರ ಮನೆಗಳು ಕುರುಹೇ ಇಲ್ಲದಂತೆ ನೀರಿನೊಂದಿಗೆ ಕೊಚ್ಚಿ ಹೋಗಿವೆ. ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಸೇತುವೆಗಳು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೆರೆ ಸಂತ್ರಸ್ತರಿಗೆ ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆದು ಆಶ್ರಯ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗುತ್ತಿದೆ.
Heavy rain in Haveri, three including two twins killed after house collapsed. Three others have got injuries had have been admitted in the hospital.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm