ಬ್ರೇಕಿಂಗ್ ನ್ಯೂಸ್
23-07-24 07:37 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 23: ವಾಲ್ಮೀಕಿ ಹಗರಣದ ಬಗ್ಗೆ ಇ.ಡಿ ನಡೆಸುತ್ತಿರುವ ತನಿಖೆ ಇದೀಗ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪಾತ್ರದ ಬಗ್ಗೆ ಹೇಳಿಕೆ ನೀಡುವಂತೆ ನಿಗಮದ ಅಧಿಕಾರಿಗೆ ಇಡಿ ಅಧಿಕಾರಿಗಳು ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.
ಜಾರ್ಖಂಡ್, ದೆಹಲಿ ಮಾದರಿಯಲ್ಲಿ ಮುಖ್ಯಮಂತ್ರಿಯನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಆರೋಪ ಮಾಡಿದ್ದಾರೆ. ವಾಲ್ಮೀಕಿ ನಿಗಮದ ಪದನಿಮಿತ್ತ ನಿರ್ದೇಶಕ ಆಗಿದ್ದ ಕಲ್ಲೇಶ್ ಬಿ ಅವರು ನೀಡಿರುವ ದೂರನ್ನು ಆಧರಿಸಿ ಇಡಿ ವಿಭಾಗದ ಬೆಂಗಳೂರು ವಲಯದ ಉಪ ನಿರ್ದೇಶಕ ಮನೋಜ್ ಮಿತ್ತಲ್ ಹಾಗೂ ಸಹಾಯಕ ನಿರ್ದೇಶಕ ಮುರಳಿ ಕಣ್ಣನ್ ವಿರುದ್ಧ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.



ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಲೋಕಸಭೆಯಲ್ಲಿ ಇಡಿ ನಡೆಯ ಪ್ರಸ್ತಾವ ಮಾಡಿಸುತ್ತೇವೆ ಎಂದು ಇದೇ ವೇಳೆ ಸಿದ್ದರಾಮಯ್ಯ ಗುಡುಗಿದ್ದಾರೆ. ಕೇಂದ್ರ ಸರ್ಕಾರವು, ಸಿದ್ದರಾಮಯ್ಯನವರ ವಿರುದ್ದ ರಾಜಕೀಯ ದ್ವೇಷದ ಕೆಲಸವನ್ನು ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ರಾಜಕೀಯ ದ್ವೇಷದ ಕಾರಣಕ್ಕೆ ಬಂಧಿಸಿದ ರೀತಿ ಸಿದ್ದರಾಮಯ್ಯ ಅವರನ್ನೂ ಬಂಧಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಇಡಿ ಸಂಸ್ಥೆಯನ್ನು ಬಳಸಿಕೊಳ್ಳುವ ಅಸಂವಿಧಾನಿಕ ಕೆಲಸವನ್ನು ಮಾಡುತ್ತಿದೆ" ಎಂದು ಸಚಿವ ಮಹದೇವಪ್ಪ ಆಪಾದಿಸಿದ್ದಾರೆ. ಇಂತಹ ಕುತಂತ್ರಗಳಿಂದ ಕೇಂದ್ರ ಸರ್ಕಾರವು ರಾಜ್ಯದ ಜನರ ವಿರೋಧ ಎದುರಿಸುತ್ತದೆಯೇ ವಿನಃ, ಅದರಿಂದ ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ಸಾಧ್ಯವಿಲ್ಲ. ಅಷ್ಟಕ್ಕೂ ದೊಡ್ಡ ಜನಬೆಂಬಲದ ಫಲವಾಗಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರಂತಹ ಜನಪ್ರಿಯ ಮುಖ್ಯಮಂತ್ರಿಯನ್ನು ED ದುರ್ಬಳಕೆ ಸಂಚಿನಿಂದ ಬಂಧಿಸುವ ಹುನ್ನಾರವನ್ನು ಸಹಿಸಲಾದೀತೇ? ಎಂದು ಪ್ರಶ್ನಿಸಿದ್ದಾರೆ. ಇದರೊಂದಿಗೆ ಇ.ಡಿ ವಿರುದ್ಧ ರಾಜ್ಯ ಸರ್ಕಾರ ನೇರ ಸಂಘರ್ಷಕ್ಕೆ ಇಳಿದಂತಾಗಿದೆ.
A senior government official in Karnataka has filed a police case against two officials of the Enforcement Directorate, accusing them of forcing him to frame Chief Minister Siddaramaiah, a former minister of the state and a few others in the Valmiki Corporation scam that surfaced earlier this year.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm