ಬ್ರೇಕಿಂಗ್ ನ್ಯೂಸ್
24-07-24 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಅಂಕೋಲಾದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿಯನ್ನು ಕೊನೆಗೂ ಪತ್ತೆ ಮಾಡಲಾಗಿದೆ. ಭೂಕುಸಿತ ಆಗಿರುವ ಪ್ರದೇಶದಲ್ಲೇ ಗಂಗಾವಳಿ ನದಿಯ ತಟದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಟ್ವೀಟ್ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ನೀಡಿದ್ದು, 'ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್‌ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಅದನ್ನು ಮೇಲೆತ್ತಲಿದ್ದಾರೆ. ನದಿಯಲ್ಲಿ ಮಣ್ಣು ಮೇಲೆತ್ತಲು ವಿಶೇಷ ರೀತಿಯ ಲಾಂಗ್ ಆರ್ಮ್ ಬೂಮರ್ ಯಂತ್ರವನ್ನು ಬಳಸಲಾಗುತ್ತಿದೆ ಎಂದಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಮಣ್ಣು ಅಥವಾ ನೀರಿನಾಳದಲ್ಲಿರುವ ಇರುವ ಲೋಹಗಳನ್ನು ಶೋಧ ಮಾಡಬಲ್ಲ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದ ಒಂಬತ್ತನೇ ದಿನ ವಿಶೇಷ ರೀತಿಯ ಯಂತ್ರ ತರಿಸಲಾಗಿದ್ದು ಅದು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಎಸ್ಪಿ ನಾರಾಯಣ್, ಇಸ್ರೋ ನೆರವಿನಲ್ಲಿ ಟ್ರಕ್ ಇರುವ ಸ್ಥಳವನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆಗೆ ನೌಕಾಪಡೆಯಿಂದ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿದ್ದೇವೆ. ನಿಖರವಾಗಿ ಸ್ಥಳದ ಕುರಿತು ಮಾಹಿತಿ ಪಡೆದ ನಂತರ ಮೃತದೇಹಗಳನ್ನು ಹುಡುಕಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
The Karnataka government clarified on Wednesday that a truck was located in the Gangavali river amid an ongoing search for Kozhikode native Arjun who was missing after a landslide in Shirur. "One truck has been definitively located in the water and that the naval deep divers will attempt anchoring shortly.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm