ಬ್ರೇಕಿಂಗ್ ನ್ಯೂಸ್
25-07-24 06:19 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.25: ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ವಿರೋಧ ನಡುವೆಯೇ ಜನಸಂಖ್ಯೆ ಆಧರಿತ ಲೋಕಸಭಾ ಕ್ಷೇತ್ರ ಪುನರ್ವಿಂಗಡನೆ, ನೀಟ್ ಪರೀಕ್ಷೆ ಹಾಗೂ ಒಂದು ರಾಷ್ಟ್ರ ಒಂದು ಚುನಾವಣೆ ವಿರುದ್ಧವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಧಾನಸಭೆಯಲ್ಲಿ ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ. ಕ್ಷೇತ್ರ ಪುನರ್ ವಿಂಗಡನೆ ಹಾಗೂ ಒಂದು ರಾಷ್ಟ್ರ ಒಂದು ಚುನಾವಣೆ ವಿರುದ್ಧ ಕಾನೂನು ಸಚಿವ ಎಚ್.ಕೆ ಪಾಟೀಲ್ ನಿರ್ಣಯ ಮಂಡಿಸಿದರೆ, ಪ್ರಶ್ನೆಪತ್ರಿಕೆ ಸೋರಿಕೆಯಿಂದ ತೀವ್ರ ವಿವಾದಕ್ಕೀಡಾಗಿರುವ ನೀಟ್ ಪರೀಕ್ಷಾ ಪದ್ಧತಿಯನ್ನು ವಿರೋಧಿಸಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ನಿರ್ಣಯ ಮಂಡಿಸಿದರು.
2026 ಹಾಗೂ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣಾ ಪ್ರಕ್ರಿಯೆ ನಡೆಸಬಾರದು. ಜನಸಂಖ್ಯೆ ಆಧರಿಸಿ ಲೋಕಸಭಾ ಸ್ಥಾನಗಳನ್ನು ಹೆಚ್ಚಿಸುವ ಸಂದರ್ಭದಲ್ಲಿ ಪ್ರತೀ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭೆ ಹಾಗೂ ವಿಧಾನಸಭೆ ಸ್ಥಾನಗಳ ಸಂಖ್ಯೆಯನ್ನು 1971ರ ಜನಗಣತಿಯನ್ನು ಆಧರಿಸಿ ನಿರ್ಧಾರ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ನಿರ್ಣಯವನ್ನು ಮಂಡಿಸಿದ್ದು ವಿಪಕ್ಷ ಸದಸ್ಯರ ವಿರೋಧ ಮಧ್ಯೆಯೇ ಅಂಗೀಕಾರ ಪಡೆಯಲಾಯಿತು.
ಇದೇ ಸಂದರ್ಭದಲ್ಲಿ ಒಂದು ರಾಷ್ಟ್ರ- ಒಂದು ಚುನಾವಣೆ ಎಂಬ ಮೋದಿ ಸರ್ಕಾರದ ಪ್ರಸ್ತಾವದ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಒಂದೇ ಹಂತದ ಚುನಾವಣೆ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ. ಇದು ರಾಜ್ಯಗಳ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ. ಭದ್ರತೆ ಖಚಿತ ಪಡಿಸುವುದು, ಚುನಾವಣಾ ಸಿಬ್ಬಂದಿ ನಿರ್ವಹಣೆ ಸೇರಿದಂತೆ ಹಲವು ಆಯಾಮದಲ್ಲಿ ಇದು ಗಂಡಾಂತರವಾಗಿದೆ. ಹಾಗಾಗಿ ಈ ನೀತಿಯನ್ನು ಜಾರಿಗೆ ತರಬಾರದು ಎಂದು ನಿರ್ಣಯ ಸ್ವೀಕರಿಸಲಾಯಿತು.
ವಿವಾದಿತ ನೀಟ್ ವ್ಯವಸ್ಥೆಯಿಂದ ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಹೀಗಾಗಿ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದು ಮಾಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ. ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು. ವಿದ್ಯಾರ್ಥಿಗಳಿಗೆ ರಾಜ್ಯದ ಸಿಇಟಿ ಅಂಕ ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ನೀಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಧಾನ ಪರಿಷತ್ತಿನಲ್ಲೂ ನೀಟ್ ಪರೀಕ್ಷೆ ವಿರೋಧಿಸಿ ನಿರ್ಣಯ ಮಂಡಿಸಿದರು. ಪರಿಷತ್ತಿನಲ್ಲೂ ಮಸೂದೆಯನ್ನು ಅಂಗೀಕರಿಸಲಾಯಿತು. ನೀಟ್ ಪರೀಕ್ಷಾ ವ್ಯವಸ್ಥೆ ಬಡ ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಅವಕಾಶಗಳನ್ನು ಕಸಿದುಕೊಳ್ಳುತ್ತಿದೆ. ರಾಜ್ಯ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು NEET ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಅಕ್ರಮಗಳನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು. ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆ, 2019 (2019 ರ ಕೇಂದ್ರ ಕಾಯಿದೆ 30) ಇದರಿಂದ ರಾಷ್ಟ್ರೀಯ ಮಟ್ಟದಲ್ಲಿ NEET ವ್ಯವಸ್ಥೆಯನ್ನು ಕೈಬಿಡಲಾಗಿದೆ ಎಂದು ನಿರ್ಣಯವನ್ನು ಓದಿ ಅಂಗೀಕರಿಸಲಾಯಿತು.
ಕೇಂದ್ರ ಸರ್ಕಾರವು ರಾಜ್ಯಕ್ಕೆ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು ಮತ್ತು ಸಿಇಟಿ ಆಧಾರದ ಮೇಲೆ ವೈದ್ಯಕೀಯ ಪ್ರವೇಶವನ್ನು ಒದಗಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತು ಸರ್ವಾನುಮತದಿಂದ ಅಂಗೀಕರಿಸಿದೆ. ಬುಧವಾರ ಪಶ್ಚಿಮ ಬಂಗಾಳ ವಿಧಾನಸಭೆಯು NEET ರದ್ದುಗೊಳಿಸಲು ಮತ್ತು ವೈದ್ಯಕೀಯ ಆಕಾಂಕ್ಷಿಗಳಿಗೆ ಹೊಸ ಪ್ರವೇಶ ಪರೀಕ್ಷೆಯನ್ನು ತರುವ ನಿರ್ಣಯವನ್ನು ಅಂಗೀಕರಿಸಿತ್ತು. ತಮಿಳುನಾಡು, ಪಶ್ಚಿಮ ಬಂಗಾಳ, ನಂತರ ನೀಟ್ ಪರೀಕ್ಷೆ ರದ್ದುಪಡಿಸಿದ ಮೂರನೇ ರಾಜ್ಯ ಕರ್ನಾಟಕವಾಗಿದೆ. ರಾಜ್ಯದಲ್ಲಿ ಒಟ್ಟು 10,945 ಸೀಟುಗಳಿದ್ದು ಅದರಲ್ಲಿ 3,200 ಸರ್ಕಾರಿ ವೈದ್ಯಕೀಯ ಸೀಟುಗಳು ಮತ್ತು 7,745 ಸೀಟುಗಳು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕೆ ಲಭ್ಯವಿದೆ.
The Karnataka Legislative Assembly on Thursday passed resolutions against the National Eligibility cum Entrance Test (NEET) and ‘One Nation, One Election’, amid stiff opposition by BJP and JD(S) legislators. Minister for Law, HK Patil proposed the resolutions in the House, following which Speaker UT Khader sought a voice vote in the House amid din.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm