ಬ್ರೇಕಿಂಗ್ ನ್ಯೂಸ್
28-07-24 01:30 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.28: ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕಾಗಿಯೇ ತಡಕಾಡುತ್ತಿದೆ. ಇದರ ನಡುವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿ ಸದಸ್ಯರಿಗೆ ಗೌರವಧನ, ಭತ್ಯೆಗಳನ್ನು ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಮಾಡಿದೆ. ರಾಜ್ಯ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ, ಉಪಾಧ್ಯಕ್ಷರಿಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನ ನೀಡಲಾಗಿದ್ದು, ಇವರು ತಲಾ 12 ಆಪ್ತ ಸಿಬಂದಿಗಳನ್ನು ಹೊಂದಬಹುದಾಗಿದೆ.
ಆಮೂಲಕ ಸಚಿವ ಸ್ಥಾನ ಸಿಗದ ಶಾಸಕರಿಗೆ ಬೇರೆ ರೀತಿಯಲ್ಲಿ ಮಣೆ ಹಾಕುವ ತಂತ್ರ ಒಂದೆಡೆಯಾದರೆ, ರಾಜ್ಯ ಸರಕಾರದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯೂ ಆಗಲಿದೆ. ಜಿಲ್ಲಾ ಸಮಿತಿಯ ಅಧ್ಯಕ್ಷರಿಗೆ 40 ಸಾವಿರ ಮಾಸಿಕ ಗೌರವಧನ, ಉಪಾಧ್ಯಕ್ಷರಿಗೆ ಪ್ರತಿ ಸಭೆಗೆ 1200 ರೂ. ಭತ್ಯೆ, ಸದಸ್ಯರಿಗೆ ಪ್ರತಿ ಸಭೆಗೆ 1100 ರೂ. ಭತ್ಯೆ ಸಿಗಲಿದೆ. ತಾಲೂಕು ಸಮಿತಿ ಅಧ್ಯಕ್ಷರಿಗೆ 25 ಸಾವಿರ ರೂ. ಮಾಸಿಕ ಗೌರವಧನ, ಸದಸ್ಯರಿಗೆ ಒಂದು ಸಾವಿರ ರೂ. ಪ್ರತಿ ಸಭೆಗೆ ಭತ್ಯೆ ಸಿಗಲಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಇರುವ ಸಮಿತಿಗಳು ತಿಂಗಳಿಗೆ ಗರಿಷ್ಠ ಎರಡು ಸಭೆಗಳನ್ನು ನಡೆಸಲು ಅವಕಾಶ ಇದೆ.
ಸರಕಾರದ ಗ್ಯಾರಂಟಿ ಯೋಜನೆಗಳು ನಾನಾ ಇಲಾಖೆಗಳ ಮೂಲಕ ಅನುಷ್ಠಾನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಮನ್ವಯ ಸಾಧಿಸುವ ದೃಷ್ಟಿಯಿಂದ ಸಿಬಂದಿ ಮತ್ತು ಆಡಳಿತ ಸುದಾರಣೆ ಇಲಾಖೆ ಕಾರ್ಯದರ್ಶಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಜಿಲ್ಲಾ ಸಮಿತಿಗಳು ಸಭೆ ನಡೆಸಲು ಜಿಪಂ ಸಭಾಂಗಣ ಹಾಗೂ ತಾಲೂಕು ಸಮಿತಿಗಳು ತಾಪಂ ಸಭಾಂಗಣಗಳನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ.
ಜಿಪಂ ಆವರಣದಲ್ಲಿ ಕಚೇರಿ ವ್ಯವಸ್ಥೆ
ಜಿಲ್ಲಾ ಸಮಿತಿಗಳಿಗೆ ಸಂಬಂಧಿತ ಜಿಪಂ ಕಚೇರಿ ಆವರಣದಲ್ಲಿ ಕಚೇರಿ ವ್ಯವಸ್ಥೆ ಹಾಗೂ ಅಗತ್ಯವಿರುವ ಪೀಠೋಪಕರಣ ಒದಗಿಸುವ ಹೊಣೆಗಾರಿಕೆಯನ್ನು ಜಿಪಂ ಸಿಇಓಗಳಿಗೆ ನೀಡಲಾಗಿದೆ. ತಾಲೂಕು ಸಮಿತಿಗಳಿಗೆ ತಾಪಂ ಕಚೇರಿ ಆವರಣದಲ್ಲಿ ಕಚೇರಿ ಹಾಗೂ ಪೀಠೋಪಕರಣ ಒದಗಿಸುವ ವ್ಯವಸ್ಥೆಯನ್ನು ಆಯಾ ತಾಪಂ ಕಾರ್ಯ ನಿರ್ವಹಣಾ ಅಧಿಕಾರಿ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನಡೆಸುವ ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಗೆ ಗ್ಯಾರಂಟಿ ಸಮಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಆಹ್ವಾನಿಸುವುದು ಕಡ್ಡಾಯವಾಗಿದ್ದು ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ನಡೆಸುವ ಕೆಡಿಪಿ ಸಭೆಗೆ ತಾಲೂಕು ಮಟ್ಟದ ಸಮಿತಿ ಅಧ್ಯಕ್ಷರನ್ನು ಆಹ್ವಾನಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
state-government fixes honorarium and allowances for guarantee implementation committee. Fixation of Salary, Allowance for Guarantee Committee Officers, How much honorarium to whom by karnataka government
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm