ಬ್ರೇಕಿಂಗ್ ನ್ಯೂಸ್
30-07-24 05:45 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30: ಬೈಕ್ ಗೆ ಡಿಕ್ಕಿ ಹೊಡೆದು ಸವಾರರಿಬ್ಬರ ಸಾವಿಗೆ ಕಾರಣನಾಗಿದ್ದ ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಬಂಧಿಸಲಾಗಿದೆ. ಅಪಘಾತದ ಬಳಿಕ ಪರಾರಿಯಾಗಿದ್ದ ಚಾಲಕ ಶಿವಶಂಕರ್ (38) ಎಂಬಾತನನ್ನು ಹಲಸೂರು ಗೇಟ್ ಸಂಚಾರಿ ಠಾಣಾ ಪೊಲೀಸರು ಸೆರೆ ಹಿಡಿದಿದ್ದಾರೆ.
ಲಾರಿ ಡಿಕ್ಕಿಯಾಗಿ ಮೈಮೇಲೆ ಹರಿದು ಟಿಸಿಎಸ್ ಕಂಪನಿಯ ಉದ್ಯೋಗಿಗಳಾಗಿದ್ದ ಪ್ರಶಾಂತ್ ಹಾಗೂ ಶಿಲ್ಪಾ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೆ.ಆರ್.ಸರ್ಕಲ್ ಬಳಿ ನಡೆದಿತ್ತು. ಅಪಘಾತದ ಬಳಿಕ ಸ್ಥಳದಿಂದ ಚಾಲಕ ಸ್ಥಳದಿಂದ ಪರಾರಿಯಾಗಿದ್ದ.
ಚಾಲಕ ಪಾನಮತ್ತನಾಗಿ ಲಾರಿ ಚಲಾಯಿಸಿರುವ ಶಂಕೆ ವ್ಯಕ್ತವಾಗಿದ್ದು, ಆತನ ರಕ್ತದ ಮಾದರಿ ಸಂಗ್ರಹಿಸಲಾಗಿದೆ. ವೈದ್ಯಕೀಯ ವರದಿಯ ಬಳಿಕ ಸತ್ಯಾಂಶ ಹೊರಬರಲಿದೆ.
ಕೆಆರ್ ಸರ್ಕಲ್‌ನಲ್ಲಿ ಭಾನುವಾರ ರಾತ್ರಿ ನಡೆದ ಅಪಘಾತದಲ್ಲಿ ಯುವಕ ಪ್ರಶಾಂತ್ ಮತ್ತು ಯುವತಿ ಶಿಲ್ಪಾ ಸಾವನ್ನಪ್ಪಿದ್ದರು. ಅಪಘಾತದಲ್ಲಿ ಮೃತಪಟ್ಟ ಯುವತಿಯ ಮದುವೆಗೆ ಪೋಷಕರು ಸಿದ್ಧತೆ ನಡೆಸಿದ್ದರು.
ಮೃತ ಶಿಲ್ಪ ಆಂಧ್ರಪ್ರದೇಶದ ಇಂದುಪುರ ನಿವಾಸಿಯಾದ್ದು, ನಾಗವಾರದ ಪಿಜಿಯಲ್ಲಿ ವಾಸವಾಗಿದ್ದರು. ಶಿಲ್ಪ ತಂದೆ ವೆಂಕಟರಾಮ ರೆಡ್ಡಿ ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದಾರೆ. ಅವರಿಗೆ ಒಟ್ಟು ಮೂವರು ಹೆಣ್ಣು ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಆಗಿದೆ. ಶಿಲ್ಪ ಕೊನೆಯ ಮಗಳಾಗಿದ್ದು, ಮದುವೆ ತಯಾರಿ ಮಾಡಿಕೊಂಡು, ಅದಕ್ಕಾಗಿ ಚಿನ್ನವನ್ನು ಮಾಡಿಸಿಟ್ಟಿದ್ದರು.
ಕಸದ ಲಾರಿಗಳ ಸ್ಪೀಡ್ ಲಿಮಿಟ್ ಬಗ್ಗೆ ಹೆಣ ಬಿದ್ಮೇಲೆ ಚಿಂತನೆ ;
ಬಿಬಿಎಂಪಿ ಕಸದ ಲಾರಿಗಳಿಂದ ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ವೇಗಮಿತಿ ಅಳವಡಿಸಲು ಸಂಚಾರಿ ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ. ಪ್ರಸ್ತುತ ಕಸದ ಲಾರಿಗಳಿಗೆ ಪ್ರತೀ ಗಂಟೆಗೆ 60 ಕಿ.ಮೀ ವೇಗಮಿತಿ ಇದೆ. ಆದಾಗ್ಯೂ ಚಾಲಕರ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಕಸದ ಲಾರಿಗಳಿಂದ ಸಂಭವಿಸಿರುವ ಅಪಘಾತ ಪ್ರಕರಣಗಳ ವರದಿ ಸಿದ್ಧಪಡಿಸಿ ವೇಗಮಿತಿಯನ್ನು ಮತ್ತಷ್ಟು ತಗ್ಗಿಸಲು ಚಿಂತಿಸಲಾಗುತ್ತಿದೆ. ಅಲ್ಲದೇ ಕಸದ ದುರ್ವಾಸನೆಯ ನಡುವೆ ಕೆಲಸ ಮಾಡಬೇಕಿರುವುದರಿಂದ ಕೆಲವು ಚಾಲಕರು ಪಾನಮತ್ತರಾಗಿ ವಾಹನ ಚಲಾಯಿಸುತ್ತಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿರುವ ಪೊಲೀಸರು ವಿಶೇಷ ಕಾರ್ಯಾಚರಣೆ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
BBMP truck accident in Bangalore, two dead, escaped truck driver arrested by police. The arrested has been identified as Shivashankar. He had flee away from the spot soon after the accident killing two techies.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm