ಬ್ರೇಕಿಂಗ್ ನ್ಯೂಸ್
01-08-24 10:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.1: ಯಾವುದೇ ಅಪರಾಧ ಪ್ರಕರಣದಲ್ಲಿ ಸಂಬಂಧಪಟ್ಟ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆಸಿಕೊಳ್ಳುವುದಕ್ಕೂ ಮುನ್ನ ಕ್ರೈಂ ಸಂಖ್ಯೆ, ಎಫ್‌ಐಆರ್ ಪ್ರತಿ, ಅಪರಾಧದ ಬಗ್ಗೆ ಮಾಹಿತಿ ಮತ್ತು ದೂರಿನ ಸಂಕ್ಷಿಪ್ತ ರೂಪವನ್ನು ಒಳಗೊಂಡ ನೋಟೀಸ್ ಅನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಕರ್ನಾಟಕ ಹೈಕೋರ್ಟ್, ರಾಜ್ಯ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.
ಅಲ್ಲದೆ, ಈ ಕುರಿತು ಸಾರ್ವಜನಿಕರ ಅವಗಾಹನೆಗಾಗಿ ರಾಜ್ಯ ಗೃಹ ಕಾರ್ಯದರ್ಶಿ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ಆದೇಶಿಸಿದೆ. ಅಮೃತಹಳ್ಳಿ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರು ವಾಟ್ಸಪ್ ಮೂಲಕ, ''ನೀವು ಠಾಣೆಗೆ ಹಾಜರಾಗಬೇಕೆಂದು'' ಕಳುಹಿಸಿದ್ದ ಸಂದೇಶವನ್ನು ಪ್ರಶ್ನಿಸಿ ಪತ್ರಕರ್ತ ಟಿ.ಆರ್. ಶಿವಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ -2023ರ ಕಲಂ 35ರ ಅನುಸಾರ ಆರೋಪಿಗೆ ಚೆಕ್‌ಲಿಸ್ಟ್ ಒದಗಿಸದೆ ಹೋದಲ್ಲಿ ಅಂತಹ ಆರೋಪಿಯು ಠಾಣಾಧಿಕಾರಿ ಮುಂದೆ ಹಾಜರಾಗುವ ಅವಶ್ಯಕತೆ ಇಲ್ಲ. ಅಂತೆಯೇ, ಪೊಲೀಸರು ಇಂತಹ ಆರೋಪಿಯ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ನನಗೆ ಹಾಗೂ ನನ್ನ ಕುಟುಂಬ ಸದಸ್ಯರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಸಂಬಂಧ ಟಿ.ವಿ. ಚಾನಲ್‌ನ ಸಿಇಒ ವಿಜಯ್ ಟಾಟಾ ನೀಡಿದ ದೂರಿನ ಅನುಸಾರ ಅಮೃತಹಳ್ಳಿ ಠಾಣೆಯ ಪೊಲಿಸರು ಟಿ.ಆರ್. ಶಿವಪ್ರಸಾದ್‌ಗೆ ವಾಟ್ಸ್‌ಆಪ್ ಮೂಲಕ ಸಂದೇಶ ಕಳುಹಿಸಿ, ಠಾಣೆಗೆ ಹಾಜರಾಗಬೇಕೆಂದು ಸೂಚಿಸಿದ್ದರು. ಅದನ್ನು ಪ್ರಶ್ನಿಸಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
In a judgment aimed at checking the abuse of power by the police, the High Court of Karnataka has now made it mandatory for the State police to provide a copy of the first information report (FIR) along with the notice summoning a person to appear for questioning or investigation either as a witnesses or a suspect in connection with a criminal case.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm