ಬ್ರೇಕಿಂಗ್ ನ್ಯೂಸ್
01-08-24 10:52 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 1: ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣ ಸಂಬಂಧಿಸಿ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಜ್ವಲ್ ಅವರದ್ದು ಎನ್ನಲಾದ ವಿಡಿಯೋಗಳು ಅಸಲಿಯೆಂದು ವಿಧಿ ವಿಜ್ಞಾನ ತಜ್ಞರು ವರದಿ ನೀಡಿದ್ದಾರೆ.
ಅತ್ಯಾಚಾರ ಪ್ರಕರಣ ಸಂಬಂಧಿಸಿ ಎಲ್ಲ ವಿಡಿಯೋಗಳನ್ನು ತನಿಖಾಧಿಕಾರಿಗಳು ಜಪ್ತಿ ಮಾಡಿದ್ದಲ್ಲದೆ, ಅದನ್ನು ಎಫ್ಎಸ್ಎಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ವಿಧಿ ವಿಜ್ಞಾನ ತಂಡ ವರದಿಯು ಎಸ್ಐಟಿ ಅಧಿಕಾರಿಗಳ ಕೈಸೇರಿದ್ದು, ವಿಡಿಯೋ ನೈಜವಾಗಿದ್ದು ಯಾವುದೇ ತಿರುಚಿದ ವಿಡಿಯೋಗಳಲ್ಲ ಎಂದು ಹೇಳಿದೆ. ವಿಡಿಯೋಗಳು ಅಸಲಿಯಾಗಿದ್ದು, ಅದರಲ್ಲಿರುವ ವ್ಯಕ್ತಿ ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ ಎಂದು ಮೂಲಗಳು ಹೇಳಿವೆ.
ಹಾಸನದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ ಆರೋಪಿತ ವ್ಯಕ್ತಿಯ ಮುಖ ಕಾಣಿಸುತ್ತಿರಲಿಲ್ಲ. ಮಾಜಿ ಸಂಸದ ಪ್ರಜ್ವಲ್ ಸ್ವತಃ ಹಲವು ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ನಡೆಸಿ ವಿಡಿಯೋ ಮಾಡಿಕೊಂಡಿದ್ದಾನೆಂದು ಆರೋಪಿಸಲಾಗಿತ್ತು. ವಿಡಿಯೋದಲ್ಲಿರುವ ವ್ಯಕ್ತಿ ಮತ್ತು ಬಂಧಿತ ಪ್ರಜ್ವಲ್ ರೇವಣ್ಣ ಅವರಿಗೂ ಸಾಮ್ಯತೆ ತೋರಿಸಬೇಕಾಗಿದೆ. ಪ್ರಕರಣದ ತನಿಖೆ ನಡೆದಿದ್ದು, ಶೀಘ್ರದಲ್ಲೇ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Forensic science experts have reported that the videos of Prajwal, which went viral on the internet in connection with the case registered against former JDS MP Prajwal Revanna on the charge of raping women, are genuine.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm