ಬ್ರೇಕಿಂಗ್ ನ್ಯೂಸ್
03-08-24 07:38 pm HK News Desk ಕರ್ನಾಟಕ
ಸಕಲೇಶಪುರ, ಆಗಸ್ಟ್.3: ಬೆಂಗಳೂರು ಮತ್ತು ಕರಾವಳಿ ನಗರಿ ಮಂಗಳೂರು ನಡುವೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಶಿರಾಡಿ ಘಾಟ್ ಭೂಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದ್ದಾರೆ. ಮೈಸೂರಿನಿಂದ ರಸ್ತೆ ಮಾರ್ಗದಲ್ಲೇ ಬಂದ ಮುಖ್ಯಮಂತ್ರಿ ಶಿರಾಡಿ ಗುಡ್ಡ ಕುಸಿತದ ಭೀಕರತೆ ಕಂಡು ಶಾಕ್ ಆಗಿದ್ದಾರೆ. ಗುಡ್ಡ ಕಡಿಯುವಾಗ ಯಾಕೆ ಎಚ್ಚರ ವಹಿಸಿಲ್ಲ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಕಲೇಶಪುರ ಬಳಿಯ ದೊಡ್ಡ ತಪ್ಪಲು ಎಂಬಲ್ಲಿ ಮತ್ತೆ ಗುಡ್ಡ ಕುಸಿದಿದ್ದು ಇದರಿಂದಾಗಿ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಗುಡ್ಡ ಕುಸಿತಕ್ಕೆ ಇದೇ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸಿದರು. "ಒಟ್ಟು 45 ಕಿ.ಮೀ ನಲ್ಲಿ 35 ಕಿ.ಮೀ ಹೈವೇ ಕಾಮಗಾರಿ ಮುಗಿದಿದೆ. 10 ಕಿ.ಮೀ ಬಾಕಿ ಇದೆ. ಆದರೆ ಇಲ್ಲಿಯ ವರೆಗೂ ಎಲ್ಲಿಯೂ ರಸ್ತೆಗೆ ತಡೆಗೋಡೆ ನಿರ್ಮಿಸಿಲ್ಲ. ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಗಮನಕ್ಕೆ ತಂದರು.
ಮಣ್ಣು ಕುಸಿತದಿಂದ ರಸ್ತೆಯಲ್ಲಿ ನಿಂತಿರುವ ಮೊಣಕಾಲುದ್ದುದ ಕೆಸರಲ್ಲೇ ನಡೆದುಕೊಂಡೇ ಗುಡ್ಡ ಕುಸಿತ ಪ್ರದೇಶವನ್ನು ಪರಿಶೀಲಿಸಿದ ಮುಖ್ಯಮಂತ್ರಿ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೂ ಮಾಹಿತಿ ಪಡೆದರು. ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು. ಈ ರೀತಿ ಘಾಟ್ ಪ್ರದೇಶದ ಗುಡ್ಡ ಅಗೆಯುವಾಗ ಯಾಕೆ ಮಣ್ಣಿನ ಸುರಕ್ಷತೆ ಬಗ್ಗೆ ಕ್ರಮಗಳನ್ನು ಕೈಗೊಂಡಿಲ್ಲ. ಲಂಬವಾಗಿ ಗುಡ್ಡ ಕಡಿದು ಕಡಿಮೆ ಹಣದಲ್ಲಿ ಕಾಮಗಾರಿ ಮುಗಿಸಬೇಕೆಂದು ಯೋಜನೆ ಹಾಕಿದ್ದೀರಾ.. ತಡೆಗೋಡೆ ಕಟ್ಟುತ್ತಿದ್ದರೆ ಈ ರೀತಿ ಕುಸಿತ ಆಗುತ್ತಿತ್ತಾ.. ರಸ್ತೆ ವಿಸ್ತರಣೆ ಕಾರಣಕ್ಕೆ ಘಾಟ್ ಪ್ರದೇಶವನ್ನು ಒಟ್ಟಾರೆ ಅಗೆದು ಹಾಕೋದಾ ಎಂದು ಪ್ರಶ್ನೆ ಮಾಡಿದರು. ಕೂಡಲೇ ಈ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.
Karnataka CM Siddaramaiah visits the Shiradi Ghat hill collapse site to inspects and issues instructions to the regional officer of the National Highway Authority in Hassan on Saturday August 03, 2024
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm