ಬ್ರೇಕಿಂಗ್ ನ್ಯೂಸ್
04-08-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಆ.4 : ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಘಟ್ಟದ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ. ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ಹೇಳಿದ್ದಾರೆ.
ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಎಲ್ಲರೂ ಕಾನೂನಿನ ಮುಂದೆ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ. ಇಂಥಹ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧವೂ ಕ್ರಮ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆಯ ವೇಳೆ ಅವೈಜ್ಞಾನಿಕವಾಗಿ 90 ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಗೂ ನೋಟಿಸ್ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ವಯನಾಡು ಮತ್ತು ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಸಹಸ್ರಾರು ವರ್ಷಗಳ ಗುಡ್ಡವೇ ಕಣ್ಮರೆಯಾಗಿದೆ. ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟಗಳಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
Illegal resorts and home stays should taken over at forest areas should be banned says Eshwar Khandre in karnataka after massive landslide in wayanad.
23-11-24 07:43 pm
Bangalore Correspondent
B Y Vijayendra, DK Shivkumar: ವಿಜಯೇಂದ್ರಗೆ ತೀವ...
23-11-24 02:15 pm
Karnataka Bypolls Live Updates Congress: ಉಪ ಚ...
23-11-24 11:35 am
ಲಾರಿ ಡ್ರೈವರ್ ಎಡವಟ್ಟಿಗೆ ಫಾರ್ಚುನರ್ ಕಾರು ಡಿಕ್ಕ...
22-11-24 05:16 pm
Kodava News, children : ಕೊಡವ ಜನಸಂಖ್ಯೆ ಹೆಚ್ಚಿಸ...
22-11-24 03:53 pm
23-11-24 05:34 pm
HK News Desk
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
ಭಾರತೀಯ ರೈಲ್ವೇ ಹೊಸ ಇತಿಹಾಸದತ್ತ ಹೆಜ್ಜೆ ; ವಿದ್ಯುತ...
14-11-24 11:11 pm
23-11-24 10:37 pm
Mangalore Correspondent
Mangalore, Shiradi Ghat Accident: ಬೆಂಗಳೂರಿನ ಕ...
23-11-24 12:20 pm
Ut Khader, Mangalore: ನೇತ್ರಾವತಿ ತೀರದಲ್ಲಿ ತಡೆಗ...
22-11-24 10:33 pm
Kuthar, Mangalore News: ಕುತ್ತಾರಿನಲ್ಲಿ ಜೆಸಿಬಿ...
22-11-24 10:17 pm
Brijesh Chowta, MIR group, Mangalore: ಸಂಸದ ಕ್...
22-11-24 09:04 pm
23-11-24 10:49 am
Mangaluru Correspondent
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm
Bangalore crime, Stabbing: ಬೈಕ್ ಪಾರ್ಕಿಂಗ್ ವಿಚ...
22-11-24 04:14 pm
Belthangady, Mangalore, Crime : ಟೋರ್ನ್ ಜೀನ್ಸ್...
22-11-24 03:04 pm