ಬ್ರೇಕಿಂಗ್ ನ್ಯೂಸ್
05-08-24 01:59 pm HK News Desk ಕರ್ನಾಟಕ
ರಾಮನಗರ, ಆ.05: ನಿಮ್ಮದೆಲ್ಲ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ. ಹೆಣ್ಣು ಮಗಳನ್ನ ಕಿಡ್ನಾಪ್ ಮಾಡಿ ಬೆದರಿಸಿ ಸೈಟ್ ಬರೆದಿಕೊಂಡಿದ್ದು ನೀವೆ ಅಲ್ಲವೇ ಎಂದು ವಾಗ್ದಾಳಿ ನಡೆಸಿದರು.
ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದರು ಅವರು. ಆ ಹೆಣ್ಣುಮಗಳನ್ನು ಕಿಡ್ನಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ನಿವೇಶನ ಬರೆಸಿಕೊಂಡಿದ್ದೀರಿ. ಆ ಹೆಣ್ಣುಮಗಳನ್ನು ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ನೀವೇ ಅಲ್ಲವೇ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೆಂದ್ರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ, ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿಕೆಶಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದರು.
ಅಜ್ಜಯ್ಯನ ಮೇಲೆ ಪ್ರಮಾಣ ಮಾಡಿ ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಹೆಚ್ಡಿಕೆ ಡಿಸಿಎಂ ಡಿಕೆಶಿಗೆ ನೇರ ಸವಾಲು ಹಾಕಿದರು.
ಈ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆಡಿದ್ದೀರಿ ಎಂದು ನನಗೆ ಗೊತ್ತಿದೆ. ನಾನು ಏನೂ ಮಾಡಿಯೇ ಇಲ್ಲ, ಸ್ವಚ್ಚವಾಗಿದ್ದೇನೆ ಎಂದು ಅಜ್ಜಯನ ಮುಂದೆ ನಿಂತು ಪ್ರಮಾಣ ಮಾಡಲಿ ಎಂದು ಹೇಳಿದರು ಕುಮಾರಸ್ವಾಮಿ ಅವರು.
ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಮಾಡುವುದೂ ಇಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನ ಬೆಳೆಸಿದೆ. ನಾನು ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ನಾನು ಯಡಿಯೂರಪ್ಪ ಅವರಿಗೆ ಯಾವತ್ತೂ ದ್ರೋಹ ಮಾಡಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ. ಅದಕೆ ಶಿವಕುಮಾರ್ ನಮ್ಮ ಮೈತ್ರಿ ಬಗ್ಗೆ ಹೊಟ್ಟೆ ಉರಿ ಅನುಭವಿಸುತ್ತಿದ್ದಾರೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
“ಕುಮಾರಣ್ಣ, ನೀನು ನನ್ನ ಆಸ್ತಿ ಬಗ್ಗೆ ಚರ್ಚೆ ಮಾಡುವ ಬದಲು ಮೊದಲಿನಿಂದಲೂ ಚರ್ಚೆ ಮಾಡು. ನಿನ್ನ ಸಹೋದರ ಬಾಲಕೃಷ್ಣ ಗೌಡ ಅವರ ಕುಟುಂಬ ಅವರ ತಂದೆ ಹಾಗೂ ಮೈಸೂರು, ಶ್ರೀರಂಗಪಟ್ಟಣದ ಅವರ ಸಂಬಂಧಿಗಳು ಬೇನಾಮಿಗಳು ಎಷ್ಟೆಷ್ಟು ಜಮೀನು ಹೊಂದಿದ್ದಾರೆ ಎಂದು ರಾಮನಗರದಲ್ಲಿ ಉತ್ತರ ನೀಡಬೇಕು. ಒಬ್ಬ ಸರ್ಕಾರಿ ನೌಕರ ಎಷ್ಟು ಸಾವಿರ ಕೋಟಿಗೆ ಇದ್ದಾನೆ, ಯಾವ ಈರುಳ್ಳಿ, ಆಲುಗಡ್ಡೆಯಲ್ಲಿ ಅದು ಸಂಪಾದನೆ ಆಯ್ತು? ಎಂದು ಲೆಕ್ಕ ಕೊಡಬೇಕು” ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸವಾಲೆಸೆದರು.
“ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ನಾನು ಉದ್ದಿಮೆದಾರ ಎಂದು ಹೇಳಿಕೊಂಡಿದ್ದೇನೆ. ನೀನು ಆ ರೀತಿ ಹೇಳಿಲ್ಲ. ನಾನು ಪಂಚೆಯುಟ್ಟು ಹೊಲ ಉಳುಮೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದೀಯ. ಮಣ್ಣಿನ ಮಗ ಎಂದು ಹೇಳಿದ್ದೀಯ. ನಿಮ್ಮ ತಂದೆ ಮಣ್ಣಿನ ಮಗನಾಗಿರಬಹುದು. ಆದರೆ ನೀವಲ್ಲ ಎಂದರು.
“ನನ್ನ ಕುಟುಂಬದ ಮೇಲೆ ಕೇಸ್ ದಾಖಲಿಸಿ ಏನು ಮಾಡಿದಿರಿ? ಏನು ಮಾಡಲು ಆಗಿಲ್ಲ. ಮಿಲಿಟರಿಯವರು ಬಂದು ನನ್ನನ್ನು ಕರೆದುಕೊಂಡು ಹೋಗಲಿದ್ದಾರೆ ಎಂದು ನೀನು ಹೇಳಿದ್ದೀಯಾ. ಹಾಗಿದ್ದರೆ ನಾನು ಜೈಲಲ್ಲಿ ಇದ್ದಾಗ ಯಾಕೆ ಬಂದು ನನ್ನನ್ನು ನೋಡಿದೆ? ನನ್ನ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಅದು ಗೊತ್ತಿದೆಯೇ? ನನ್ನ ಕುಟುಂಬದವರ ಮೇಲೆ ಹಾಕಿಸಿದ್ದ ಕೇಸು ವಜಾ ಆಗಿದೆ ಗೊತ್ತಿದೆಯಾ?” ಎಂದು ಕುಟುಕಿದರು. “ನಾನು ನಿನ್ನ ಡಿನೋಟಿಫಿಕೇಶನ್ ಪ್ರಕರಣ ಇನ್ನು ಚರ್ಚೆ ಮಾಡಿಲ್ಲ. ನಿನ್ನ ಗಣಿ ಕೇಸ್ ಇನ್ನು ಚರ್ಚೆ ಮಾಡಿಲ್ಲ. ನಿನ್ನ ಕುಟುಂಬದವರ ಆಸ್ತಿ ಇನ್ನು ಬಿಡುಗಡೆ ಮಾಡಿಲ್ಲ. ಪಟ್ಟಿ ಬಿಡುಗಡೆ ಮಾಡುತ್ತೇನೆ” ಎಂದು ಸವಾಲೆಸೆದರು.
ಕುಮಾರಸ್ವಾಮಿ ಹಿಟ್ ಅಂಡ್ ರನ್, ಬ್ಲಾಕ್ ಮೇಲರ್:
ಕುಮಾರಸ್ವಾಮಿ ನೀನು ಕೇವಲ ಹಿಟ್ ಅಂಡ್ ರನ್. ಬ್ಲಾಕ್ ಮೇಲರ್. ಎಲ್ಲರನ್ನು ಹೆದರಿಸಿದಂತೆ ಬಿಜೆಪಿಯವರನ್ನು ಹೆದರಿಸಲು ಹೋದೆ. ಪಾದಯಾತ್ರೆ ವಿಚಾರವಾಗಿ ಜಿ.ಟಿ ದೇವೆಗೌಡರ ಕೈಯಲ್ಲಿ ಒಂದು ಹೇಳಿಕೆ ಕೊಡಿಸಿದೆ. ನಿನ್ನ ಮಗನ ಕೈಯಲ್ಲಿ ಒಂದು ಹೇಳಿಕೆ ಕೊಡಿಸಿದೆ. ನೀನು ಒಂದು ಹೇಳಿಕೆ ನೀಡಿದೆ. ಈ ನಾಟಕ ಏಕೆ?” ಎಂದು ಪ್ರಶ್ನಿಸಿದರು. “ಪಾದಯಾತ್ರೆಗೆ ಬರಲ್ಲ ಎಂದು ಹೇಳಿದವನು, ಈಗ ಯಾಕೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದೀಯಾ? ಕೇವಲ ನಿನ್ನ ಅಧಿಕಾರಕ್ಕೋಸ್ಕರ. ನಿನ್ನ ಪಕ್ಷವನ್ನು ಮುಳುಗಿಸಲು ಹೊರಟಿದ್ದೀಯಾ” ಎಂದು ಮಾತಿನ ಮೂಲಕ ತಿವಿದರು.
Dk Shivakumar and HD Kumaraswamy war of words, both slam each other over money matter. Deputy chief minister DK Shivakumar, on Sunday, continued to target Union minister HD Kumaraswamy, accusing him of amassing huge amounts of wealth in terms of benami land through his elder brother and former KAS officer HD Balakrishna.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm