ಬ್ರೇಕಿಂಗ್ ನ್ಯೂಸ್
05-08-24 02:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.5: ಬೆಂಗಳೂರು ನಗರದಲ್ಲಿ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಂತೆ, ಬೆಂಗಳೂರು ನಗರದಾದ್ಯಂತ ಪ್ರತಿ ಶನಿವಾರ ಮತ್ತು ಇತರೇ ದಿನಗಳಲ್ಲಿ ಬೆಳಗ್ಗೆ, ಸಂಜೆ ಎಲ್ಲ ರೀತಿಯ ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ವೀಕೆಂಡಲ್ಲಿ ಟ್ರಾಫಿಕ್ ಹೆಚ್ಚಿರುವುದರಿಂದ ಪ್ರತಿ ಶನಿವಾರಗಳಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ಮತ್ತು ಸಂಜೆ 4.30 ರಿಂದ ರಾತ್ರಿ 9ರ ವರೆಗೆ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇತರ ದಿನಗಳಲ್ಲಿ ಬೆಳಗ್ಗೆ 7 ರಿಂದ ಪೂರ್ವಾಹ್ನ 11ರ ವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 10ರ ವರೆಗಿನ ನಿರ್ಬಂಧವಿದ್ದು ಅದು ಮುಂದುವರಿಯಲಿದೆ.
ವಾರಾಂತ್ಯ ದಿನಗಳಲ್ಲಿ ಹೆಚ್ಚಿನ ದಟ್ಟಣೆ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರ ನಡುವೆ ಇರುತ್ತದೆ. ಶನಿವಾರ ಮಧ್ಯಾಹ್ನ 1 ಗಂಟೆಯಷ್ಟೊತ್ತಿಗೆ ಸಂಚಾರ ದಟ್ಟಣೆ ತೀವ್ರಗೊಳ್ಳುತ್ತದೆ. ಪೀಕ್ ಅವರ್ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2:30ರ ವರೆಗೆ ಮತ್ತು ಸಂಜೆ 5 ರಿಂದ ರಾತ್ರಿ 8:30ರ ವರೆಗೆ ಇರುತ್ತದೆ. ಹಾಗಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಘನ ವಾಹನಗಳ ನಿರ್ಬಂಧವು ವಾರಾಂತ್ಯದಲ್ಲಿ ನಗರ ಎದುರಿಸುವ ತೀವ್ರ ಟ್ರಾಫಿಕ್ ದಟ್ಟಣೆಯನ್ನು ಪರಿಹರಿಸುವ ಉದ್ದೇಶ ಹೊಂದಿದೆ. ಇದರಿಂದ ಸಾಮಾನ್ಯ ಪ್ರಯಾಣಿಕರಿಗೆ ಸಂಚಾರ ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.
Bengaluru Traffic Police is taking many measures to control traffic in the city. Communicating traffic rules to motorists and pedestrians. Also implementing new initiatives. Now they have made some changes in the traffic time of heavy goods vehicle within the city.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm