ಬ್ರೇಕಿಂಗ್ ನ್ಯೂಸ್
05-08-24 03:24 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್.5: ಲೋಕಸಭೆ ಚುನಾವಣೆಯಲ್ಲಾದ ಹಿನ್ನಡೆ, ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂದು ಭಿನ್ನರೀತಿಯ ಹೇಳಿಕೆಗಳಿಂದ ಮುಜುಗರ ತಂದಿಟ್ಟ ವಿಚಾರ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ರಾಜ್ಯದ ಸಚಿವರನ್ನು ಕರೆದು ಮಾತುಕತೆ ನಡೆಸಿದ್ದು, ಕೆಲಸದಲ್ಲಿ ಸುಧಾರಣೆ ಕಾಣದಿದ್ದರೆ ಕೊಕ್ ನೀಡುವ ಸುಳಿವು ನೀಡಿದ್ದಾರೆ. ಸರಿಯಾಗಿ ಕೆಲಸ ಮಾಡಿದ್ದರೆ, ರಾಜ್ಯದಲ್ಲಿ 15 ಸ್ಥಾನಗಳನ್ನು ಗೆಲ್ಲುವ ಅವಕಾಶಗಳಿದ್ದವು. ಅದನ್ನು ನೀವೇ ಕೈಚೆಲ್ಲಿದ್ದೀರಿ. ಈಗಲೂ ಕೆಲಸ ಸರಿಯಾಗದಿದ್ದರೆ ಬದಲಾವಣೆ ಖಚಿತ ಎಂದು ವಾರ್ನ್ ಮಾಡಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪಾದಯಾತ್ರೆ, ಮತ್ತೊಂದೆಡೆ ರಾಜ್ಯಪಾಲರ ನೋಟಿಸ್ ಹಿನ್ನೆಲೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿ, ಮುಖ್ಯಮಂತ್ರಿ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ, 10-12 ಸಚಿವರನ್ನು ಪ್ರತ್ಯೇಕವಾಗಿ ಕರೆದು ಬಿಸಿ ಮುಟ್ಟಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆಯಾದರೆ, ಕೊಕ್ ನೀಡುವ ಸುಳಿವು ನೀಡಲಾಗಿತ್ತು. ಚುನಾವಣೆ ಬೆನ್ನಲ್ಲೇ ಮೌಲ್ಯಮಾಪನದ ಎಚ್ಚರಿಕೆಯನ್ನೂ ನೀಡಲಾಗಿತ್ತು. ಲೋಕಸಭೆಯಲ್ಲಿ ನೀವು ಹೇಳಿದವರಿಗೇ ಟಿಕೆಟ್ ನೀಡಲಾಗಿತ್ತು. ಆದಾಗ್ಯೂ ನಿರೀಕ್ಷಿತ ಫಲಿತಾಂಶ ಬರಲಿಲ್ಲ. ಮತ್ತೂಂದೆಡೆ ಬಣಗಳ ಬಡಿದಾಟವೂ ನಿಂತಿಲ್ಲ. ಈ ರೀತಿಯ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ. ಇನ್ನೆರಡು ತಿಂಗಳುಗಳಲ್ಲಿ ಎಲ್ಲ ಸಚಿವರ ಕಾರ್ಯವೈಖರಿ ಬದಲಾಗಬೇಕು. ಇಲ್ಲದಿದ್ದರೆ ನಿಮ್ಮನ್ನು ಹುದ್ದೆಯಿಂದ ತೆಗೆದು ಬೇರೆಯವರನ್ನು ನೇಮಕ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಚಿವರು ಮತ್ತು ನಿಗಮ-ಮಂಡಳಿಗಳ ಅಧ್ಯಕ್ಷರ ನಡುವೆಯೂ ಸಮನ್ವಯ ಇಲ್ಲ. ಆಡಳಿತ ಪಕ್ಷದ ಶಾಸಕರೊಂದಿಗೂ ತಿಕ್ಕಾಟ ಮುಂದುವರಿಸಿದ್ದೀರಿ. ಕಾರ್ಯಕರ್ತರೊಂದಿಗೂ ಒಡನಾಟ ಇರಿಸಿಕೊಂಡಿಲ್ಲ. ಸತ್ಯಶೋಧನ ಸಮಿತಿ ಭೇಟಿ ವೇಳೆಯೂ ಸಚಿವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೊನೆಯ ಅವಕಾಶ ನೀಡಲಾಗುತ್ತಿದ್ದು, ಇನ್ನೊಂದು ತಿಂಗಳ ಬಳಿಕ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ರಣದೀಪ್ ಸುರ್ಜೇವಾಲ ಹೇಳಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ. ಇದಲ್ಲದೆ, ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಿದ್ದು, ಅದಕ್ಕಾಗಿ ಸಿದ್ಧತೆ ನಡೆಸಬೇಕು. ನಿರ್ಲಕ್ಷ್ಯ ವಹಿಸಿದಲ್ಲಿ ಕೈಸುಟ್ಟುಕೊಳ್ಳಬೇಕಾದೀತು ಎಂದು ಎಚ್ಚರಿಸಿದ್ದಾರೆ.
ಸಚಿವರ ಕಾರ್ಯವ್ಯಾಪ್ತಿ ತವರು ಜಿಲ್ಲೆಗಳಿಗೆ ಸೀಮಿತಗೊಳಿಸದೆ, ರಾಜ್ಯ ಪ್ರವಾಸ ಮಾಡಿ ಇಲಾಖೆಯಲ್ಲಿ ಸುಧಾರಣೆ ತರಬೇಕು. ಶಾಸಕರು, ಕಾರ್ಯಕರ್ತರ ಅಹವಾಲುಗಳಿಗೆ ಆದ್ಯತೆ ನೀಡಬೇಕು. ದಸರಾ ವೇಳೆಗೆ ಮತ್ತೊಂದು ಮೌಲ್ಯಮಾಪನ ನಡೆಸಲಿದ್ದು ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರು, ಕಾರ್ಯಕರ್ತರ ಕಡೆಯಿಂದ ಅಭಿಪ್ರಾಯಗಳನ್ನು ಆಲಿಸಲಾಗುವುದು. ಮೈನಸ್ ಪಾಯಿಂಟ್ ಬಂದವರನ್ನು ಬದಲಾಯಿಸಲಾಗುವುದು ಎಂದು ಸೂಚಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಮಳೆಯಿಂದ ಹಾನಿಯಾದರೂ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಕೆಲವೊಬ್ಬ ಸಚಿವರನ್ನು ಹೊರತುಪಡಿಸಿ ಉಳಿದವರು ನಿರ್ಲಕ್ಷ್ಯ ವಹಿಸಿದ್ದರು. ತಮ್ಮ ವ್ಯಾಪ್ತಿಯನ್ನು ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ತೀವ್ರ ಟೀಕೆಗೂ ಗುರಿಯಾಗಿತ್ತು. ಇವೆಲ್ಲ ವಿಚಾರಗಳ ಬಗ್ಗೆ ಕೇಂದ್ರ ನಾಯಕರು ಚರ್ಚೆ ವೇಳೆ ಪ್ರಸ್ತಾಪಿಸಿದ್ದಾರೆ. ರಾಜ್ಯಪಾಲರ ನೋಟೀಸ್ ವಿಚಾರದಲ್ಲಿ ಮುಖ್ಯಮಂತ್ರಿ ಪರವಾಗಿ ಹೈಕಮಾಂಡ್ ಬೆನ್ನಿಗೆ ನಿಂತಿದ್ದು, ಯಾವುದೇ ಕಾರಣಕ್ಕೂ ಹೆದರದಂತೆ ಸೂಚಿಸಿದೆ. ಅಲ್ಲದೆ, ಅನಿವಾರ್ಯತೆ ಬಂದರೆ ಕಾನೂನು ರೀತ್ಯ ಕೋರ್ಟಿನಲ್ಲಿ ಪ್ರಶ್ನೆ ಮಾಡುವುದಕ್ಕೆ ಮುಂದಾಗಿದೆ.
High command warns Karnataka ministers over their performance. As the Congress government is expecting Raj Bhavan to respond to a request for sanction of prosecution against Chief Minister Siddaramaiah, Central leaders were in Bengaluru on Sunday to confabulate with top government functionaries and send a message of unity in the Cabinet.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm