CM Siddaramaiah, Muda scam: ಮುಡಾ ಹಗರಣ ; ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ಮತ್ತೊಂದು ದೂರು 

06-08-24 06:40 pm       Bangalore Correspondent   ಕರ್ನಾಟಕ

ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮಂಗಳವಾರ ಮತ್ತೊಂದು ದೂರು ದಾಖಲಾಗಿದೆ.

ಬೆಂಗಳೂರು, ಆಗಸ್ಟ್.6: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮಂಗಳವಾರ ಮತ್ತೊಂದು ದೂರು ದಾಖಲಾಗಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ದಾಖಲಾಗಿದ್ದು, ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

1979ರಲ್ಲಿ ಮೈಸೂರು ತಾಲೂಕು ವರುಣಾದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ಮೈಸೂರಿನವರೇ ಆದ ದೂರುದಾರ ಸ್ನೇಹಮಯಿ ದೂರಿನಲ್ಲಿ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಮನವಿ ಮಾಡಿದ್ದಾರೆ.

Another complaint has been filed against Karnataka Chief Minister Siddaramaiah in the office of Governor Thaawarchand Gehlot in connection with the de-notification of a land case. RTI activist Snehamayi Krishna has filed the complaint through a registered post.