ಬ್ರೇಕಿಂಗ್ ನ್ಯೂಸ್
09-08-24 01:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಷಿಕ್ಯೂಷನ್ ಗೆ ಅನುಮತಿ ನೀಡುತ್ತಾರೆಯೇ ಎಂಬ ಕುತೂಹಲ ಎದ್ದಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಮನವಿಗೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಸಂಸತ್ ಅಧಿವೇಶನ ಮುಗಿದ ಬೆನ್ನಲ್ಲೇ ರಾಜ್ಯಪಾಲರು ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದೇ ವೇಳೆ, ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ ವಹಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆಂಬ ವದಂತಿ ಹಬ್ಬಿದೆ.
ಜುಲೈ 26ರಂದು ಅಬ್ರಹಾಂ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಇದರ ಬೆನ್ನಲ್ಲೇ ಆಗಸ್ಟ್ 1 ರಂದು, ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೋಟಿಸ್ ವಾಪಸ್ ಪಡೆಯಲು ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಅಲ್ಲದೆ, ಅರ್ಜಿಯನ್ನು ತಿರಸ್ಕರಿಸುವಂತೆಯೂ ಆಗ್ರಹಿಸಲಾಗಿತ್ತು. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆಯೇ ಎಂಬ ಕುರಿತು ಕುತೂಹಲ ಮೂಡಿದೆ.
ಈ ನಡುವೆ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ಘರ್ಷಣೆಯಾಗದಂತೆ ನೋಡಿಕೊಳ್ಳಲು ರಾಜ್ಯಪಾಲ ಗೆಹ್ಲೋಟ್ ಅವರು ಕಾನೂನು ಸಲಹೆಗಾರರ ಅಭಿಪ್ರಾಯವನ್ನೂ ತೆಗೆದುಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಸರಕಾರ ಸಲಹೆಯನ್ನು ನೀಡಿದಾಗ ರಾಜ್ಯಪಾಲರು ಇದಕ್ಕೆ ಅನುಗುಣವಾಗಿರುತ್ತಾರೆ ಎಂಬ ಭರವಸೆ ನನಗಿದೆ. 163ನೇ ವಿಧಿಯು ರಾಜ್ಯಪಾಲರು ತಮ್ಮ ವಿವೇಚನೆಯನ್ನು ಬಳಸಬಹುದು ಎಂದು ಹೇಳುತ್ತದೆ. ಆದರೆ, ಅದನ್ನು ಬಿಜೆಪಿಗೆ ಅನುಕೂಲವಾಗುವ ರೀತಿ ಬಳಸುವಂತಿಲ್ಲ. ರಾಜ್ಯಪಾಲರು ಮಂತ್ರಿಮಂಡಲದ ನೆರವು ಮತ್ತು ಸಲಹೆಯನ್ನು ಮೀರಿ ಹೋಗಬಾರದು ಎಂದವರು ತಿಳಿಸಿದ್ದಾರೆ.
ಶೋಕಾಸ್ ನೋಟಿಸ್ ನೀಡದೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಧಿಕಾರ ರಾಜ್ಯಪಾಲರಿಗಿತ್ತು. ಆದರೆ, ಅವರು ನೋಟಿಸ್ ನೀಡಿರುವುದು ಮುಖ್ಯಮಂತ್ರಿಗಳಿಗೆ ವರವಾಗಿ ಪರಿಣಮಿಸಿದೆ. ಈ ನಡುವೆ ಪ್ರಕರಣವನ್ನು ಸಿಬಿಐಗೆ ವಹಿಸುವ ಆಲೋಚನೆ ಕೂಡ ರಾಜ್ಯಪಾಲರಿಗೆ ಇರಬಹುದು ಎಂದು ತಜ್ಞರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಜುಲೈ 25ರಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ-ಜೆಡಿಎಸ್ ನಿಯೋಗ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿತ್ತು.
ಸಂಸತ್ ಅಧಿವೇಶನ ಸಂದರ್ಭದಲ್ಲಿ ತನಿಖೆಗೆ ಅನುಮತಿ ನೀಡಿದಲ್ಲಿ ವಿಪಕ್ಷಗಳು ಗಲಾಟೆ ಎಬ್ಬಿಸುವ ಸಾಧ್ಯತೆ ಇರುವುದರಿಂದ ತಡವಾಗಿಯೇ ಪ್ರಾಸಿಕ್ಯೂಶನ್ ಅನುಮತಿ ನೀಡಲು ರಾಜ್ಯಪಾಲರು ಮುಂದಾಗಿದ್ದಾರೆ ಎನ್ನಲಾಗಿತ್ತಿದೆ.
Governor Thawar Chend Gehlot has not taken any further action regarding the plea filed by TJ Abraham seeking permission to prosecute Chief Minister Siddaramaiah in the Muda land allotment scam. Meanwhile, speculations have started that they are thinking about handing over the case to the Central Bureau of Investigation (CBI) for investigation.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm