ಬ್ರೇಕಿಂಗ್ ನ್ಯೂಸ್
09-08-24 03:36 pm HK News Desk ಕರ್ನಾಟಕ
ಶಿವಮೊಗ್ಗ, ಆ.09: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮತ್ತಿಕೈ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.
ಚಂಪಕಾಪುರ ಗ್ರಾಮದ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತ ದುರ್ದೈವಿಗಳು. ಕೌಟಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಬಾವಿಗೆ ಬಿದ್ದಿದ್ದ ಮೂವರನ್ನೂ ಗ್ರಾಮಸ್ಥರು ರಕ್ಷಿಸಲು ಪ್ರಯತ್ನಿಸಿದರು. ಆದರೆ, ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಬಾವಿಯಿಂದ ಹೊರ ತೆಗೆಯುವಷ್ಟರಲ್ಲಿ ಮೂವರೂ ಮೃತರಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ವಾಣಿ ಪತಿ ರಾಜೇಶ್ ಮತ್ತಿಕೈ ಗ್ರಾಮದಲ್ಲಿ ಟಿವಿ ರಿಪೇರಿ ಕೆಲಸ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಹೊಸನಗರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ತಾಯಿ, ಮಕ್ಕಳಿಬ್ಬರ ಸಾವಿನ ಕುರಿತು ಮಾತನಾಡಿರುವ ಸ್ಥಳೀಯರಾದ ಸುಬ್ರಮಣ್ಯ ಅವರು, ಚಂಪಕಪುರದ ರಾಜೇಶ್ ಅವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಅಚ್ಚರಿ ತಂದಿದೆ. ರಾಜೇಶ್ ಟಿವಿ ರಿಪೇರಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾನೆ. ಆತ ಒಳ್ಳೆಯ ವ್ಯಕ್ತಿಯಾಗಿದ್ದಾನೆ. ಆದರೆ ಇವರ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಬೇಸರವಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸರ ತನಿಖೆ ಬಳಿಕವೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.
Shivamogga mother commits suicide along with her two children. The deceased mother were having some family issues. Incident came to light in Hosanagara.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm