ಬ್ರೇಕಿಂಗ್ ನ್ಯೂಸ್
09-08-24 10:31 pm HK News Desk ಕರ್ನಾಟಕ
ಮೈಸೂರು, ಆಗಸ್ಟ್.9: ಮೈಸೂರು ನಗರಾಭಿವೃದ್ಧಿ ಪಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣವನ್ನು ಮುಂದಿಟ್ಟು ಬಿಜೆಪಿ-ಜೆಡಿಎಸ್ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಡೆಸುತ್ತಿರುವ ‘ಮೈಸೂರು ಚಲೋ’ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಮೈಸೂರಿನಲ್ಲಿ ಜನಾಂದೋಲನ ಹೆಸರಲ್ಲಿ ಸಮಾವೇಶ ನಡೆಸಿದೆ. ರಾಜ್ಯ ಸರ್ಕಾರದ ಎಲ್ಲ ಸಚಿವರು, ಪ್ರಮುಖ ನಾಯಕರು ಭಾಗವಹಿಸಿದ್ದ ಸಭೆಯಲ್ಲಿ ಪಕ್ಷದ ನಾಯಕರೆಲ್ಲ ಒಕ್ಕೊರಲಿನಿಂದ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡು ವಿಪಕ್ಷಗಳಿಗೆ ಕೌಂಟರ್ ಕೊಟ್ಟಿದ್ದಾರೆ.
ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಎದುರಾಗಿ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಪರವಾಗಿ ಶಕ್ತಿ ಪ್ರದರ್ಶನ ಮಾಡಿದೆ. ಮೈಸೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಜನಾಂದೋಲನ ಸಭೆಯಲ್ಲಿ ಕಾಂಗ್ರೆಸ್ ನಾಯಕರು, “ಸಿಎಂ ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಎಂದಿದ್ದಲ್ಲದೆ, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ತಪ್ಪು ಮಾಡಿಲ್ಲ ಎಂಬ ಸಂದೇಶ ಸಾರಲು ಯತ್ನಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಜೊತೆಗೆ ನಿಂತು ನಾವು ಒಟ್ಟಿಗಿದ್ದೇವೆ ಎಂಬುದನ್ನು ಸಾರಿದ್ದಾರೆ. ಸಿದ್ದರಾಮಯ್ಯ ತಮ್ಮ ಅಸ್ತಿತ್ವ ಪ್ರಶ್ನೆ ಬಂದಾಗೆಲ್ಲ ಈ ರೀತಿಯ ಬೃಹತ್ ಸಮಾವೇಶಗಳನ್ನು ನಡೆಸಿದ್ದಾರೆ. ಈ ಬಾರಿ ತನ್ನ ರಾಜಕೀಯ ಎದುರಾಳಿ ಎಂದೇ ಗುರುತಿಸಲ್ಪಟ್ಟ ಮತ್ತೊಬ್ಬ ಹಿಂದುಳಿದ ವರ್ಗದ ನಾಯಕ ಬಿಕೆ ಹರಿಪ್ರಸಾದ್ ಅವರನ್ನು ಕರೆದು ತನ್ನ ಪರವಾಗಿ ಸಮಾವೇಶದಲ್ಲಿ ತೊಡಗಿಸಿದ್ದಾರೆ.
ಈವರೆಗೂ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತ ಬಂದಿದ್ದ ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ವರ್ಷದ ಬಳಿಕ ಮುಖ್ಯಮಂತ್ರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಯಡಿಯೂರಪ್ಪ ಅವರು ಆಪರೇಷನ್ ಕಮಲದ ಮೂಲಕ ಅಧಿಕಾರ ಪಡೆದುಕೊಂಡಿದ್ದು, ಭ್ರಷ್ಟಾಚಾರ ಮಾಡಿದ್ದು ಇತಿಹಾಸ. ಮರಿ ಯಡಿಯೂರಪ್ಪ ಅಪ್ಪನನ್ನೇ ಮೀರಿಸಿ ಭ್ರಷ್ಟಾಚಾರ ಮಾಡಿದ್ದಾರೆ. ಅಪ್ಪ ಸಿಎಂ ಆಗಿದ್ದಾಗ ತಂದೆಯ ಸಹಿಯನ್ನೇ ಮಗ ವಿಜಯೇಂದ್ರ ಮಾಡುತ್ತಿದ್ದ. ಇದರ ಬಗ್ಗೆ ತನಿಖೆ ಆಗಬೇಕು. ರಾಜ್ಯದಲ್ಲಿ ಹಗರಣದ ಪಿತಾಮಹರು ಅಂತ ಇದ್ದರೆ ಯಡಿಯೂರಪ್ಪ ಹಾಗೂ ಅವರ ಮಗ ವಿಜಯೇಂದ್ರನೇ ಆಗುತ್ತಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರಕಾರ ಅಸ್ಥಿರಗೊಳಿಸಲು ಪ್ರಯತ್ನ
ಸಚಿವ ಜಮೀರ್ ಅಹಮದ್, ಸಚಿವ ಮುನಿಯಪ್ಪ ಮಾತನಾಡಿ,”‘ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೆ ತಂದಿರುವುದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಹಾಗಾಗಿ ಮುಡಾ ಪ್ರಕರಣ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯಲು ಬಿಜೆಪಿ-ಜೆಡಿಎಸ್ ಪ್ರಯತ್ನಿಸುತ್ತಿದೆ. ಸಿದ್ದರಾಮಯ್ಯ ಅವರ ಬಾವೈದ ದಾನವಾಗಿ ಕೊಟ್ಟಿರುವ ಜಾಗವನ್ನೇ ಇದೀಗ ವಿವಾದ ಮಾಡಲಾಗಿದೆ. ಬಹುಮತ ಬಂದಿರುವ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.
B k Hariprasad says we stand with Siddaramaiah. Says no matter what we will stand with him.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm