ಬ್ರೇಕಿಂಗ್ ನ್ಯೂಸ್
13-08-24 11:44 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು ತೀರ್ಪು ಪ್ರಕಟಿಸದೆ ಕಾಯ್ದಿರಿಸಿದೆ. ಹೀಗಾಗಿ ಯಾವ ರೀತಿಯ ತೀರ್ಪು ಬರುತ್ತೋ ಎನ್ನುವ ನಡುಕ ಡಿಕೆ ಶಿವಕುಮಾರ್ಗೆ ಶುರುವಾಗಿದೆ.
ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ನ್ಯಾ.ಉಮೇಶ್ ಎಂ ಅವರಿದ್ದ ಪೀಠ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಡಿಕೆ ಶಿವಕುಮಾರ್ಗೆ ಕೋರ್ಟ್ ಏನು ತೀರ್ಪು ಕೊಡುತ್ತೆ ಎನ್ನುವ ಟೆನ್ಷನ್ ಶುರುವಾಗಿದೆ.
2019ರಲ್ಲಿ ಆಡಳಿತಲ್ಲಿದ್ದ ಬಿಜೆಪಿ ಸರಕಾರವು ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಅನುಮತಿ ನೀಡಿತ್ತು. ಅದನ್ನು ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಆನಂತರ ಅವರು ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು 2023ರ ನ.28ರಂದು ಹಿಂಪಡೆದಿತ್ತು.
ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಕಡೆಯಿಂದ ನೀಡಲಾಗಿದ್ದ ಮೇಲ್ಮನವಿಯನ್ನೂ ಹಿಂಪಡೆಯಲಾಗಿತ್ತು. ಇದರಂತೆ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿದ್ದನ್ನು ಆಕ್ಷೇಪಿಸಿ ಮತ್ತು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆನಂತರ ಸಿಬಿಐ ಕೂಡ ಸರಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನ ಮೊರೆ ಹೋಗಿತ್ತು. ಸರ್ಕಾರದ ನಿರ್ಧಾರ ತಪ್ಪೆಂದು ಕೋರ್ಟ್ ತೀರ್ಪು ನೀಡಿದರೆ, ಅದರಿಂದ ಡಿಕೆಶಿಗೆ ಸಂಕಷ್ಟ ಎದುರಾಗಲಿದೆ.
The Karnataka High Court on Monday reserved its order on the petitions filed by the Central Bureau of Investigation and BJP MLA Basangouda Patil Yatnal challenging the State government's decision to withdraw consent for CBI probe into corruption allegations against Congress leader and Karnataka's Deputy Chief Minister DK Shivakumar.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm