ಬ್ರೇಕಿಂಗ್ ನ್ಯೂಸ್
14-08-24 06:08 pm HK News Desk ಕರ್ನಾಟಕ
ಬೆಳಗಾವಿ, ಆಗಸ್ಟ್.14: ಕಾಂಗ್ರೆಸ್ ಸರ್ಕಾರದಿಂದ ನೀಡಲಾಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು. ಇದರಿಂದ ವಾರ್ಷಿಕವಾಗಿ ರೂ. 10,000 ಕೋಟಿ ಉಳಿತಾಯವಾಗಲಿದೆ ಎಂದು ಜಾರಕಿಹೊಳಿ ಹೇಳಿದ್ದಾರೆ.
ಈ ವರ್ಷದ ಆರಂಭದಲ್ಲಿ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕಾಗಿ ರೂ. 52,000 ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಪಕ್ಷದ ವರಿಷ್ಠರನ್ನು ಭೇಟಿ ಮಾಡಿದಾಗ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ನಾನೇನು ಹೇಳಿಲ್ಲ. ಈ ಗ್ಯಾರಂಟಿ ಯೋಜನೆಗಳು ಬಡವರಿಗೆ ತಲುಪಬೇಕು, ಶ್ರೀಮಂತರಿಗೆ ಬೇಡ ಎಂದು ಜನ ಹೇಳುತ್ತಿದ್ದಾರೆ. ಹೋಟೆಲ್ ಗಳಲ್ಲಿ, ಕೆಲಸಗಾರರು ಸೇರಿದಂತೆ ಎಲ್ಲೆಡೆಯೂ ಇದೇ ಚರ್ಚೆಯಾಗುತ್ತಿದೆ. ಶ್ರೀಮಂತರಿಗೆ ಯಾಕೆ ನೀಡುತ್ತಿದ್ದೀರಿ? ಬಡವರಿಗೆ ನೀಡಿ ಎಂದು ಪ್ರತಿಪಕ್ಷಗಳು ಕೂಡಾ ಕೇಳಿವೆ ಎಂದರು.
ಯೋಜನೆಗಳ ಪರಿಷ್ಕರಣೆಯಿಂದ ಸರ್ಕಾರದಿಂದ ಜನಪ್ರಿಯತೆ ಹೆಚ್ಚಲಿದೆ. ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಯಾರು ಹೇಳಿದ್ದು? ಅದನ್ನು ನಾವು ಸ್ಥಗಿತಗೊಳಿಸುವುದಿಲ್ಲ. ಇದರ ಬಗ್ಗೆ ಕ್ಯಾಬಿನೆಟ್ ಹಾಗೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆದಿಲ್ಲ. ಇದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದರು.
Karnataka Minister Satish Jarkiholi on Wednesday said the guarantee schemes need to be reviewed so that only the economically weaker sections, and not the rich, benefit from them, sparking a debate on the ambitious programmes launched by the Congress government.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm