ಬ್ರೇಕಿಂಗ್ ನ್ಯೂಸ್
14-08-24 06:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ರಾಮೇಶ್ವರ ಕೆಫೆ ಸ್ಫೋಟ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಆಗಿದೆ. ಜೆಪಿ ನಗರದಲ್ಲಿರುವ ಉಡುಪಿ ಉಪಹಾರ ಹೊಟೇಲ್ ಬಳಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಭಯೋತ್ಪಾದಕ ಕೃತ್ಯ ಎನ್ನುವುದು ತಿಳಿದುಬಂದಿತ್ತು.
ಜೆಪಿ ನಗರದ ಮನೆಯೊಂದರಲ್ಲಿ ಸ್ಪೋಟ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಕುಕ್ಕರ್ ಬ್ಲಾಸ್ಟ್ ಆಗಿರುವುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಮೋಸಿನ್ ಎಂಬ ಇಬ್ಬರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಮಾಡು, ಒಳಗಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿ ಸುಟ್ಟ ವಯರ್‌ಗಳು ಪತ್ತೆಯಾಗಿದೆ. ಸ್ಫೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ.
ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್‌ಐಎ ಹಾಗೂ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಘಟನೆ ನಡೆದಿರುವ ಸ್ಪೋಟದ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಯನ್ನು ಎನ್‌ಐಎ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಎನ್ ಐ ಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವ ಕೆಲಸ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಅದೇ ಮಾದರಿಯ ಬ್ಲಾಸ್ಟ್ ನಡೆದಿದೆಯಾ ಎನ್ನುವ ಅನುಮಾನ ಬಂದಿದೆ.
A powerful explosion near Main Udupi Upahar in JP Nagar, Bengaluru, has left two individuals seriously injured. The blast, which occurred around 10 a.m. on Monday, injured two young men, Samir and Mosin, both from Uttar Pradesh.
15-01-25 12:19 pm
HK News Desk
Hassan Accident, Mangalore: ಕ್ಯಾಂಟಿನ್ಗೆ ನುಗ್...
14-01-25 03:36 pm
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
15-01-25 12:09 pm
Mangaluru Correspondent
Mangalore News, Savayava Sante: ಫೆಬ್ರವರಿ ತಿಂಗ...
14-01-25 08:36 pm
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm