ಬ್ರೇಕಿಂಗ್ ನ್ಯೂಸ್
17-08-24 12:05 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೆ ಇತ್ತ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಸದ್ಯ ಸಿಎಂ ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರು ಮತ್ತು ವಕೀಲರು, ಹಿರಿಯ ಅಧಿಕಾರಿಗಳ ಜೊತೆಗೆ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೆಟ್ಟಿಲನ್ನೂ ಏರುವ ಸಾಧ್ಯತೆಯಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಕುರಿತಾಗಿ ಈಗಾಗಲೇ ಸಿಎಂ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಕಾನೂನು ಸಲಹೆಗಾರ ಬಿ ಪೊನ್ನಣ್ಣ ಅವರ ಜೊತೆ ಕೂಡ ಸಮಾಲೋಚಿಸುತ್ತಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರವಾಗಿ ರಾಜ್ಯಪಾಲರಿಂದ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್, ಎಸಿಎಸ್ ಅತೀಕ್ಗೆ ನೋಟಿಸ್ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆಯಾಗಿದೆ. ಮುಡಾ ಪ್ರಕರಣದ ಮೂವರು ದೂರುದಾರರಾದ ಟಿಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಮುಡಾ ನಿವೇಶನ ವಿವಾದ ಕುರಿತು ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನಲೆ ತುರ್ತು ಸಂಪುಟ ಸಭೆಯನ್ನು ಸಂಜೆ 5 ಗಂಟೆಗೆ ಕರೆಯಲಾಗಿದೆ. ರಾಜೀನಾಮೆ ಬದಲು ನ್ಯಾಯಾಲಯದಲ್ಲಿ ಕಾನೂನು ಹೋರಾಟಕ್ಕೆ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
Karnataka Governor Thaawarchand Gehlot has granted permission to prosecute CM Siddaramaiah in MUDA scam, news agency PTI reported quoting sources. "The Governor has granted sanction for prosecution against the Chief Minister. It is based on three petitions filed by T J Abraham, one Pradeep and Snehamayi Krishna," an official at the Raj Bhavan told PTI.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm