ಬ್ರೇಕಿಂಗ್ ನ್ಯೂಸ್
18-08-24 11:08 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18: ಮುಂದಿನ ಆರು ತಿಂಗಳಲ್ಲಿ ರಾಜ್ಯದ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ, ಅವರ ಭ್ರಷ್ಟಾಚಾರವನ್ನೂ ತೆಗೀತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲಿದ್ದು, ಮುಂದಿನ ಆರು ತಿಂಗಳಲ್ಲಿ ರಾಜ್ಯದ ಅರ್ಧದಷ್ಟು ಬಿಜೆಪಿ ನಾಯಕರು ಜೈಲಿನಲ್ಲಿರುತ್ತಾರೆ ಅಥವಾ ಜಾಮೀನಿಗಾಗಿ ಓಡಲಿದ್ದಾರೆ ಎಂದರು.
ಬಿಜೆಪಿ ನಾಯಕರ ಮೇಲೆ 35ಕ್ಕೂ ಹೆಚ್ಚು ಪ್ರಕರಣಗಳಿದ್ದು, ಮೂರ್ನಾಲ್ಕು ಪ್ರಕರಣಗಳಲ್ಲಿ ಮಧ್ಯಂತರ ವರದಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಯ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. ಹಿಂದಿನ ಸರ್ಕಾರದಲ್ಲಿ ತೀವ್ರ ಭ್ರಷ್ಟಾಚಾರ ಇತ್ತು. ಅದರ ಮೇಲೆ ಕೆಲಸ ಮಾಡುತ್ತಿದ್ದು, ಮುಂದಿನ ಆರು ತಿಂಗಳಲ್ಲಿ ಅರ್ಧದಷ್ಟು ಬಿಜೆಪಿ ನಾಯಕರು ಜೈಲು ಸೇರೋದು ಖಚಿತ ಎಂದು ಅವರು ಹೇಳಿದರು.
ರಾಜ್ಯಪಾಲರ ಪಾತ್ರದ ಕುರಿತು ಚರ್ಚೆಯಾಗಿರುವ ಹತ್ತಾರು ಪ್ರಕರಣಗಳಿದ್ದು, ಅವುಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದ ಸಚಿವರು, ಬಿಜೆಪಿ ನಾಯಕರ ಬಳಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸಾಧ್ಯವೇ ಇಲ್ಲ. ಹೀಗಾಗಿ ಸಿಬಿಐ, ಐಟಿ, ಇಡಿ ಮತ್ತು ಸ್ವತಃ ರಾಜ್ಯಪಾಲರನ್ನು ಬಳಸಿಕೊಂಡು ಪ್ರಕರಣವನ್ನು ಜೀವಂತವಾಗಿಡುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
Karnataka Minister Priyank Kharge on Sunday said half of the BJP leaders in the state will either be in jail or running for bail in the next six months as the Congress government will get to the bottom of the corruption cases of the previous BJP government
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm