ಬ್ರೇಕಿಂಗ್ ನ್ಯೂಸ್
20-08-24 07:57 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.20: ಮುಡಾ ಸೈಟ್ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವಾಗಲೇ ಕಾಂಗ್ರೆಸ್ ಮುಯ್ಯಿಗೆ ಮುಯ್ಯಿ ಎನ್ನುವಂತೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ತೊಡೆ ತಟ್ಟಿದೆ. ಹಳೆಯ ಭ್ರಷ್ಟಾಚಾರ ಪ್ರಕರಣದಲ್ಲಿ ಎಚ್ಡಿಕೆ ವಿರುದ್ಧ ಎಸ್ಐಟಿ ಪತ್ರ ಬರೆದಿದ್ದು ರಾಜ್ಯಪಾಲರನ್ನು ಮತ್ತೆ ಇಕ್ಕಟ್ಟಿಗೆ ಸಿಲುಕಿಸಿದೆ.
2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆಯನ್ನು ಮಂಜೂರು ಮಾಡಿಸಿದ್ದಾರೆ ಎಂಬ ಆರೋಪವಿದೆ. ಪ್ರಕರಣ ಸಂಬಂಧ ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್ಐಟಿ ರಾಜ್ಯಪಾಲರಿಗೆ ಮತ್ತೊಮ್ಮೆ ಪತ್ರ ಬರೆದಿದೆ.
ಅಕ್ರಮ ಗಣಿಗಾರಿಕೆ ಕುರಿತು 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಅವರು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ. ಎಚ್.ಡಿ ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್ಐಟಿ 2023 ನವೆಂಬರ್ 21ರಂದು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಸಂಬಂಧ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ರಾಜ್ಯಪಾಲರು ಜುಲೈ 29ರಂದು ಎಸ್ಐಟಿಗೆ ಪತ್ರ ಬರೆದಿದ್ದರು.
ಜುಲೈ 29ರಂದು ರಾಜ್ಯಪಾಲರು ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆಗಳೊಂದಿಗೆ ಎಸ್‌ಐಟಿ ಸೋಮವಾರ ಸಂಜೆ ಮರು ಪತ್ರ ಬರೆದಿದ್ದು ಚಾರ್ಜ್ ಶೀಟ್ ಹಾಕಲು ಅನುಮತಿ ಕೇಳಿದೆ. ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೆ ಮನವಿ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಯ ವಸ್ತುವಾಗಿದೆ.
The special investigation team (SIT) of the Karnataka Lokayutka has renewed its request with Governor Thawarchand Gehlot for permission to file a charge-sheet against Union Heavy Industries and Steel Minister HD Kumaraswamy in a case of renewal of mining lease.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm