Bangalore Accident, Ambulance: ಆಂಬ್ಯುಲೆನ್ಸ್ ಗೆ ದಾರಿ ಬಿಡಲು ಹೋಗಿ ಆಸ್ಪತ್ರೆ ಸೇರಿದ ಕಾರ್ ಡ್ರೈವರ್, ಬೈಕ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ, ವಿಡಿಯೋ ನೋಡಿ ಬೆಚ್ಚಿಬಿದ್ದ ಬೆಂಗಳೂರು ಮಂದಿ !

20-08-24 08:24 pm       Bangalore Correspondent   ಕರ್ನಾಟಕ

ಆಂಬುಲೆನ್ಸ್ ದಾರಿ ಮಾಡಿ ಕೊಡಲು ಹೋಗಿ ಕಾರೊಂದು ಪಲ್ಟಿಯಾಗಿರುವ ಘಟನೆ ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ನಡೆದಿದೆ.

ಬೆಂಗಳೂರು, ಆ.20: ಆಂಬುಲೆನ್ಸ್ ದಾರಿ ಮಾಡಿ ಕೊಡಲು ಹೋಗಿ ಕಾರೊಂದು ಪಲ್ಟಿಯಾಗಿರುವ ಘಟನೆ ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ನಡೆದಿದೆ. ಸೋಮವಾರ ಸಂಜೆ ಈ ಘಟನೆ ಸಂಭವಿಸಿದ್ದು, ಕಾರು ಅಪಘಾತಕ್ಕೀಡಾಗುತ್ತಿರು ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಐಟಿ ಸಿಟಿ ಬೆಂಗಳೂರಿನ ಅತಿ ಉದ್ದನೆಯ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದ್ದು, ವಿಡಿಯೋ ನೋಡಿದರೆ ಎಂತಹವರು ಕೂಡ ಒಂದು ಕ್ಷಣ ಬೆಚ್ಚಿ ಬೀಳುತ್ತಾರೆ. ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಫ್ಲೈಓವರ್ ಮೇಲೆ ವೇಗವಾಗಿ ಬರುತ್ತಿರುವ ಆಂಬುಲೆನ್ಸ್ ಗೆ ದಾರಿ ಮಾಡಿ ಕೊಡಲು ಹೋಗಿ ಪಕ್ಕದಲ್ಲೇ ಚಲಿಸುತ್ತಿದ್ದ ಇ ಸ್ಕೂಟರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗುತ್ತದೆ. ಈ ವಿಡಿಯೋ ಮುಂಬದಿ ಚಲಿಸುತ್ತಿದ್ದ ಕಾರಿನ ಬ್ಯಾಕ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಬೇರೊಂದು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ಪರಿಣಾಮ ಪ್ಲೈಓವರ್ ಮೇಲೆ ನಡೆದ ಘಟನೆಯ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆಯ ಸಂಚಾರಿ ಪೊಲೀಸರು ಘಟನೆ ನಡೆದ ಸ್ಥಳದಲ್ಲಿ ಬ್ಯಾರಿಕೆಡ್ ಅಳವಡಿಸಿ ಉಳಿದ ರಸ್ತೆಯ ಭಾಗದಲ್ಲಿ ವಾಹನಗಳು ಸುಗಮವಾಗಿ ಸಂಚಾರ ಮಾಡುವುದಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

In a video that has surfaced online, an ambulance was seen crashing into a car on the Electronic City Flyover bridge in Bengaluru on August 19. The car, while making way for the speeding ambulance crashed into the slow-moving Yulu bike in front of it. The ambulance tried to overtake the car, but in this attempt, it crashed with the car, upturning it. The crash reportedly injured a man.