Karnataka governor Gehlot, Siddaramaiah: ರಾಜ್ಯದ್ಯಂತ ಕೈ ಪ್ರತಿಭಟನೆ ; ರಾಜ್ಯಪಾಲರಿಗೆ ಬುಲೆಟ್ ಪ್ರೂಫ್​ ಕಾರು, Z - ಸೆಕ್ಯೂರಿಟಿ ಭದ್ರತೆ

21-08-24 04:40 pm       Bangalore Correspondent   ಕರ್ನಾಟಕ

ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುತ್ತಿದೆ. ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್ ಸೇರಿ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು, ಆ 21: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುತ್ತಿದೆ. ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್ ಸೇರಿ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಲೆಟ್ ಪ್ರೂಫ್ ಕಾರು ಬಳಸಲು ಮುಂದಾಗಿದ್ದಾರೆ. ಅಲ್ಲದೆ, ಝೆಡ್ ಶ್ರೇಣಿಯ ಭದ್ರತೆಯನ್ನ ಪೊಲೀಸರು ಒದಗಿಸಿದ್ದಾರೆ.

ಪ್ರಾಸಿಕ್ಯೂಷನ್ ಅನುಮತಿ ವಿರೋಧಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿವೆ. ಮುಂಜಾಗ್ರತ ಕ್ರಮವಾಗಿ ನಗರ ಪೊಲೀಸರು ಬುಲೆಟ್ ಪ್ರೂಫ್ ಕಾರು ಬಳಕೆ ಹಾಗೂ ಝೆಡ್ ಶ್ರೇಣಿಯ ಭದ್ರತೆಯನ್ನ ಒದಗಿಸಲಾಗಿದೆ. ಆಗಸ್ಟ್ 29ರ ವರೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗದಂತೆ ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

ಎಚ್ಚರಿಕೆ ನಡೆ ಅನುಸರಿಸಿರುವ ರಾಜ್ಯಪಾಲರು ಇಂದು ಮೈಸೂರು ಬ್ಯಾಂಕ್ ವೃತ್ತದ ಬಳಿಯಿರುವ ನೃಪತುಂಗ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಆಗಸ್ಟ್ 29ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ರಾಜ್ಯಪಾಲರು ಬಹುತೇಕ ಗೈರಾಗುವ ಸಾಧ್ಯತೆಯಿದೆ. ಪ್ರಾಸಿಕ್ಯೂಷನ್ ಅನುಮತಿ ರದ್ದು ಕೋರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಹೋಗಿದ್ದು, ಮೂಂದೂಡಿಕೆಯಾಗಿದ್ದ ಅರ್ಜಿ ವಿಚಾರಣೆ ಆಗಸ್ಟ್ 29ರಂದು ಬರಲಿದೆ. ಅಲ್ಲಿವರೆಗೂ ಯಾವುದೇ ರೀತಿ ಕ್ರಮ ಕೈಗೊಳ್ಳಬಾರದೆಂದು ನ್ಯಾಯಾಲಯವು ನಿರ್ದೇಶಿಸಿತ್ತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇದಕ್ಕೂ ಮುನ್ನ ಬುಲೆಟ್ ಪ್ರೂಫ್ ಇರುವ ಕಾರನ್ನು ಪಡೆದುಕೊಳ್ಳದೇ ಸಾಮಾನ್ಯ ಕಾರನ್ನೇ ಬಳಕೆ ಮಾಡುತ್ತಿದ್ದರು.

ಇದರ ನಡುವೆ ಆಗಸ್ಟ್ 29ನೇ ತಾರೀಖಿನವರೆಗೆ ರಾಜ್ಯದಲ್ಲಿನ ಎಲ್ಲಾ ಕಾರ್ಯಕ್ರಮಗಳನ್ನು ರಾಜ್ಯಪಾಲರು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರ ನಡುವೆಯೇ ರಾಜ್ಯಪಾಲರು ಕೂಡ ಹೈಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದಾರಂತೆ. ಈ ಹಿನ್ನೆಲೆಯಲ್ಲೇ ನೃಪತುಂಗ ವಿವಿ ಮೊದಲ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಇದರೊಂದಿಗೆ ಸಾರ್ವಜನಿಕ ಕಾರ್ಯಕ್ರಮದಿಂದ ರಾಜ್ಯಪಾಲರು ದೂರ ಉಳಿದ್ರಾ ಎಂಬ ಪ್ರಶ್ನೆ ಉದ್ಬವವಾಗಿದೆ. ಈಗಾಗಲೇ ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಲು ಕರೆ ಕೊಟ್ಟಿವೆ.

ವಿಶ್ವವಿದ್ಯಾಲಯಗಳ ವಾರ್ಷಿಕ ಘಟಿಕೋತ್ಸವಗಳಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಘಟಿಕೋತ್ಸವ ಆಯೋಜನೆ ಮಾಡಲಾಗಿದ್ದು, 2020-21 ರಿಂದ 2022-2023 ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಇದರಲ್ಲಿ 792 ವಿದ್ಯಾರ್ಥಿಗಳಿಗೆ ಪದವಿ, 16 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಬೇಕಿತ್ತು. ಆದರೆ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ನೃಪತುಂಗ ವಿವಿಯ ಮೊದಲ ಘಟಿಕೋತ್ಸವ ನಡೆದಿದೆ. ಈಗಾಗಲೇ ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಲು ಕರೆ ಕೊಟ್ಟಿವೆ.

Governor VS CM Siddaramaiah fight, Thaawarchand Gehlot gets z security and bullet proof car. Karnataka Governor Thaawarchand Gehlot on Saturday sanctioned the prosecution of Chief Minister Siddaramaiah in a case of alleged corruption in the allotment of land to his wife by the Mysuru Urban Development Authority (MUDA), saying that a “neutral, objective and non-partisan investigation should be conducted”. The allotment was done in 2021, while the BJP was in power in the State.