ಬ್ರೇಕಿಂಗ್ ನ್ಯೂಸ್
21-08-24 06:49 pm Bangalore Correspondent ಕರ್ನಾಟಕ
ಬೆಂಗಳೂರು, ಆ 21: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸವಾಲು ಹಾಕಿದರು.
ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣದ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ” ಎಂದು ಕೊಪ್ಪಳದಲ್ಲಿ ಹೇಳಿದ್ದರು.
ಇದಕ್ಕೆ ಖಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಮೈಸೂರಿನ ಮುಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಎಂದು ಹೇಳುತ್ತಿದ್ದಾರೆ. ಇಂತಹ ಭಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡುವುದಕ್ಕೆ ನೂರು ಜನ ಸಿದ್ದರಾಮಯ್ಯರು ಬರಬೇಕು” ಎಂದು ವಾಗ್ದಾಳಿ ನಡೆಸಿದರು.
“ನನಗೆ ಯಾವುದೇ ಭಯ ಇಲ್ಲ. ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023 ನವೆಂಬರ್‌ನಲ್ಲಿ. ಸುಮಾರು ಹತ್ತು ತಿಂಗಳಾಗಿದೆ” ಎಂದರು.
ಒಬ್ಬ ಕಾನ್ಸ್‌ಟೇಬಲ್ ಸಾಕು ;
ಇನ್ನು ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಕುಮಾರಸ್ವಾಮಿಗೆ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್‌ಟೇಬಲ್ ಸಾಕು ಎಂದು ಟಾಂಗ್ ಕೊಟ್ಟಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್‌ಟೇಬಲ್ ಸಾಕು. ಅರೆಸ್ಟ್ ಮಾಡುವುದು ಯಾರು, ನಾನು ಮಾಡ್ತೀನಾ? ಪೊಲೀಸರು ಮಾಡುತ್ತಾರೆ. ನನಗೆ ಹೆದರಿಕೊಳ್ಳದೆ ಹೋಗಿದ್ದರೆ ಕುಮಾರಸ್ವಾಮಿ ಪ್ರೆಸ್‌ಮೀಟ್ ಮಾಡುತ್ತಿದ್ದರಾ? ಎಂದು ಲೇವಡಿ ಮಾಡಿದರು.
ಕುಮಾರಸ್ವಾಮಿದು ಬರೀ ಹಿಟ್ ಆ್ಯಂಡ್ ರನ್. ಯಾವ ಪ್ರಕರಣವನ್ನೂ ಕುಮಾರಸ್ವಾಮಿ ಲಾಜಿಕಲ್ ಎಂಡ್‌ಗೆ ತೆಗೆದುಕೊಂಡು ಹೋಗಿಲ್ಲ. ಪೆನ್‌ಡ್ರೈವ್, ಪೆನ್‌ಡ್ರೈವ್ ಅಂದರು ಎಂದು ಅಣುಕಿಸಿ ತೋರಿಸಿದರು.
Need hundreds like Siddaramaiah to arrest me says H D Kumaraswamy. Speaking to media persons CM stated that not 100 Siddaramaiah but one constable is enough to arrest Hd Kumaraswamy he mocked.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm