ಬ್ರೇಕಿಂಗ್ ನ್ಯೂಸ್
22-08-24 08:07 pm Bangalore Correspondent ಕರ್ನಾಟಕ
ಬೆಂಗಳೂರು, ಆ 22: ಮುಡಾದಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೆ ರಾಜಕೀಯ ವಲಯದಲ್ಲಿ ಪರ ವಿರೋಧ ಚರ್ಚೆಗಳು ನಡೆಯಲು ಆರಂಭಿಸಿವೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಹಾಲಿ ಸಿಎಂ ಸಿದ್ದರಾಮಯ್ಯ ನಡುವಿನ ಮಾತಿನ ಸಮರಕ್ಕೂ ಈ ಮುಡಾ ಹಗರಣ ಸಾಕ್ಷಿಯಾಗಿದೆ. ಬುಧವಾರದಂದು ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿಯವರನ್ನು ಬಂಧಿಸಲು ನೂರು ಸಿದ್ದರಾಮಯ್ಯ ಯಾಕೆ ಬೇಕು ಒಬ್ಬ ಕಾನ್ಸ್‌ಟೆಬಲ್ ಸಾಕು ಎಂದಿದ್ದರು ಸದ್ಯ ಸಿದ್ದರಾಮಯ್ಯನವರ ಈ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಮುಡಾ ಕೊಚ್ಚೆಯ ಗಮನ ಬೇರೆಡೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರಿದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನು ಅರ್ಥ ಮಾಡಿಕೊಳ್ಳಬಲ್ಲೆ. ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಭೋಧಿಸುವ ನಿಮ್ಮ ಪ್ರಾರಬ್ದ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದು ಅರ್ಥವಾಗಿದೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ. ಇಂಥ ಗಲೀಜು ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ ಎಂದಿದ್ದಾರೆ.
ಕಪ್ಪು ಚುಕ್ಕೆ ಇಲ್ಲಾ ಎನ್ನುವ ನಿಮಗೆ ವೈಟ್ನರ್ ಉಜ್ಜುವ ಪ್ರಯತ್ನವೇಕೆ?
ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಫೋರ್ಜರಿ ಆಗಿದೆ, ಪತ್ರಿಕೆಗಳ ವರದಿಗೆ ಉತ್ತರ ಕೊಡುತ್ತೇನೆ, ಆದರೆ ಪಲಾಯನ ನನ್ನ ಜಾಯಮಾನ ನನ್ನದಲ್ಲ. ಆದರೆ ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು, ಉಪ್ಪಿನ ಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ?. 40 ವರ್ಷಗಳ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲ ಎನ್ನುವ ನೀವು ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ಯೇಕೆ ಎಂದು ಪ್ರಶ್ನಿಸಿದ್ದಾರೆ?
ಸಿಎಂಗೆ ಸಾಲು ಸಾಲು ಪ್ರಶ್ನೆ
ಮುಡಾದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್ ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್ನರ್ ಅಳಿಸೀತಾ ಸಿದ್ದರಾಮಯ್ಯನವರೇ ಎಂದು ಸಿದ್ದರಾಮಯ್ಯನವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ?
ನಿಮ್ಮದು ನಾಲೆಗೆಯೋ ಅಥವಾ ಇನ್ನೇನೋ
ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ, 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ ಅಥವಾ ಇನ್ನೇನೋ. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ. ಸತ್ತ ಜೀವದ ರುಚಿ ನೆಕ್ಕಲು. ಮಿಸ್ಟರ್ ಸಿದ್ದರಾಮಯ್ಯ ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ, 2011ರಲ್ಲಿ ಸುಪ್ರೀಂ ಕೋರ್ಟ್ SITಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ?. ನಾನು ವಕೀಲ. ನಾನು ವಕೀಲ. ಎಂದು ಪದೇಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ನೀಡಿದ್ದೆ ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು ಎಂದಿ ಬರೆದುಕೊಂಡಿದ್ದಾರೆ.
ನಂಬಿ ಬಂದವರ ಬೆನ್ನಿಗೆ ಚೂರಿ ಹಾಕುವವರು ನೀವು!
ರಾಜ್ಯಪಾಲರಿಗೆ SIT ಬರೆದ ಪತ್ರ ಇಟ್ಟುಕೊಂಡು ಹಾರಾಟ ಮಾಡುತ್ತಿದ್ದೀರಿ. ಪತಂಗದ ಹಾರಾಟ ನೋಡಲಿಕ್ಕೆ ಚೆಂದ, ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ, ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲಕಸ ಮಾಡಿಕೊಂಡು, ನಂಬಿ ಕೈಹಿಡಿದವರ ಬೆನ್ನಿಗೆ ಚೂರಿ ಹಾಕಿ ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ. ಸಿದ್ದರಾಮಯ್ಯನವರೇ ನನ್ನ ರಾಜಕಾರಣ ನಿಮ್ಮಂತೆಯೇ ಹಣಕ್ಕೆ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ. ಸೋತರೆ ಸೋಲಬೇಕು ಬಾಹುಬಲಿಯಂತೆ. ಆ ಮಹಾನ್ ವಿರಾಗಿಯೇ ನನ್ನ ಆದರ್ಶ ಎಂದಿದ್ದಾರೆ.
Big verbal social media fight between CM Siddaramaiah and HD Kumaraswamy. Kumaraswamy slams CM says we can make pan India movie against your corruptions.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm