ಬ್ರೇಕಿಂಗ್ ನ್ಯೂಸ್
24-08-24 02:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಸಿದ್ದಾರೆ.
ಎಂಬಿ ಪಾಟೀಲ್ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ನಿಯಮದ ಪ್ರಕಾರ ಆನ್‌ಲೈನ್‌ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಇವರು ಕೈಗಾರಿಕೆ ನಡೆಸದ ಕಂಪನಿಗಳಿಗೆ ಹಂಚಿಕೆ ಮಾಡಿದ್ದು ಭಾರೀ ಅಕ್ರಮ ಎಸಗಿದ್ದಾರೆ. ಬೆಂಗಳೂರು ಆಸುಪಾಸಿನಲ್ಲಿ ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ. ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ . ಇವರ ಕೆಲಸಗಳಿಗೆ ಕೆಲವು ಅಧಿಕಾರಿಗಳು ಸಾಥ್ ನೀಡಿದ್ದಾರೆ. ಅಕ್ರಮ ಹಂಚಿಕೆಯಿಂದ ಕೆಐಎಡಿಬಿಗೆ ಕೋಟ್ಯಂತರ ರೂ. ನಷ್ಟವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಕಂಪನಿಗಳಿಗೆ ಸಿ.ಎ ಜಮೀನು ಹಂಚಿಕೆಯಾಗಿದೆ. ಕೈಗಾರಿಕೆ ನಡೆಸದ ಕಂಪನಿಗಳಿಗೂ ಕೆಐಎಡಿಬಿ ನಿಯಮ ಉಲ್ಲಂಘಿಸಿ ಸಿ.ಎ ನಿವೇಶನಗಳನ್ನು ಮಂಜೂರಾತಿ ಮಾಡಲಾಗಿದೆ. ಕೆಐಎಡಿಬಿಯ ಈ ಅಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರುಪಾಯಿ ನಷ್ಟ ಉಂಟಾಗಿದೆ
ಭೂಮಿಗೆ ಹೆಚ್ಚಿನ ಬೇಡಿಕೆ ಇರುವ ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಸಿಎ ನಿವೇಶನಗಳನ್ನು ಹಂಚಿಕೆ ಮಾಡಿದ್ದು, ಪಾರದರ್ಶಕತೆ ಕಾಯ್ದುಕೊಂಡಿಲ್ಲ. ಭೂಮಿ ಹಂಚಿಕೆ ಮಾಡುವ ನಕ್ಷೆಯನ್ನು ಬದಲಾಯಿಸಿ ಸಿಎ ಜಮೀನು ಹಂಚಿಕೆ ಮಾಡಲಾಗಿದೆ.
ಅತ್ಯಂತ ಬೆಲೆಬಾಳುವ ಸಿ.ಎ ಪ್ರದೇಶಗಳನ್ನು ಬಹಿರಂಗ ಹರಾಜು ಮೂಲಕ ಹಂಚಿಕೆ ಮಾಡಬೇಕಾಗಿತ್ತು. ಆದರೆ ತಮಗೆ ಬೇಕಾದವರಿಗೆ ಮಾರ್ಗಸೂಚಿ ಅನುಸರಿಸದೇ ಮನಸೋ ಇಚ್ಛೆ ಹಂಚಿಕೆ ಮಾಡಿದ್ದಾರೆ. ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದಿಲ್ಲ. ಇದಕ್ಕೆ ಸಮರ್ಥನೀಯ ಕಾರಣಗಳನ್ನು ಒದಗಿಸಿಲ್ಲ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ಆದಾಯ ನಷ್ಟ ಉಂಟಾಗಿದೆ.
ಸಾರ್ವಜನಿಕ ಹಿತಾಸಕ್ತಿ ಹೊರತಾಗಿ ಸಿಎ ನಿವೇಶನ ಹಂಚಿಕೆ ಮಾಡಿದ್ದು ಕಾನೂನುಬಾಹಿರವಾಗಿದೆ. ಈ ಮೂಲಕ ತಮ್ಮ ಕಚೇರಿಯನ್ನು ಸಾರ್ವಜನಿಕ ಹಿತಾಸಕ್ತಿ ವಿರುದ್ಧವಾಗಿ ದುರುಪಯೋಗ ಪಡಿಸಿಕೊಂಡು ಸರ್ಕಾರದ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದಾರೆ. ತಾನು ಮಾಡುತ್ತಿರುವ ಅಕ್ರಮದಿಂದ ಖಾಸಗಿ ವ್ಯಕ್ತಿಗಳಿಗೆ ಲಾಭವಾಗುತ್ತದೆ ಎಂದು ಗೊತ್ತಿದ್ದರೂ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿಗಳ ನಷ್ಟ ಉಂಟು ಮಾಡಿ ಖಾಸಗಿ ವ್ಯಕ್ತಿಗಳಿಗೆ ಲಾಭ ಮಾಡಿಕೊಟ್ಟಿದ್ದಾರೆ.
ರಾಜ್ಯದ ಹಲವು ಕೈಗಾರಿಕೆ ಪ್ರದೇಶದಲ್ಲಿ ನಾಗರಿಕ ಸೇವೆ (ಸಿಎ)ಗೆ ಮೀಸಲಿದ್ದ ಭೂಮಿಯಲ್ಲಿ ನಕಲಿ, ಅಪ್ರಾಮಾಣಿಕ ಮತ್ತು ದೋಷಪೂರಿತ ವಿವರಣೆಗಳನ್ನು ಆಧರಿಸಿ ಅವರು ಸಿ.ಎ ಭೂಮಿಯನ್ನು ಕಡಿಮೆ ದರಕ್ಕೆ ಉದ್ಯಮಿಗಳಿಗೆ ಹಂಚಿಕೆ ಮಾಡಿ ನಿಯಮ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
In a setback to the Congress government in Karnataka, a complaint has been lodged on Friday against the State Minister for Medium and Heavy Industries, M.B. Patil, with Governor Thaawarchand Gehlot seeking consent for prosecution against him in connection with the Mysuru Urban Development Authority (MUDA) land scam.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 07:08 pm
Bangalore Correspondent
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm