ಬ್ರೇಕಿಂಗ್ ನ್ಯೂಸ್
27-08-24 09:58 pm Bangalore Correspondent ಕರ್ನಾಟಕ
ಬೆಂಗಳೂರು, ಆ.27: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ನಟನಿಗೆ ಸಂಕಷ್ಟ ಎದುರಾಗಿದೆ. ಹೌದು ದರ್ಶನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶ ನೀಡಿದೆ.
ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಲವು ಆರೋಪಿಗಳನ್ನು ಸಹ ಇದೀಗ ಬೇರೆ ಬೇರೇ ಜೈಲಿಗೆ ಸ್ಥಳಾಂತರಿಸುವಂತೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಅದರಂತೆ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ನ್ಯಾಯಾಲಯದ ಆದೇಶದ ಪ್ರತಿ ಸಿಗುತ್ತಿದ್ದಂತೆ ಜೈಲು ಸಿಬ್ಬಂದಿ ದರ್ಶನ್ ರನ್ನು ಸ್ಥಳಾಂತರಿಸಲಿದ್ದಾರೆ. ದರ್ಶನ್ ಶಿಫ್ಟ್ ಆಗಲಿರುವ ಬಳ್ಳಾರಿ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಇದೆ. ಹೀಗಾಗಿ ಮುಂದೆ ನ್ಯಾಯಾಲಯದ ವಿಚಾರಣೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಒಳಪಡಿಸಲಾಗುತ್ತದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿನ ಪವನ್, ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ ಶಿಫ್ಟ್ ಆಗಬೇಕಿದೆ. ಜಗದೀಶ್, ಲಕ್ಷ್ಮಣ ಶಿವಮೊಗ್ಗ ಜೈಲು, ಧನರಾಜ್ಗೆ ಧಾರವಾಡ ಜೈಲು ಗತಿಯಾಗಿದೆ. ವಿಜಯಪುರ ಜೈಲಿಗೆ ವಿನಯ್ ಸ್ಥಳಾಂತರ ಆಗಬೇಕಿದೆ. ನಾಗರಾಜ್ ಕಲಬುರಗಿ ಜೈಲು, ಪ್ರದೂಶ್ ಬೆಳಗಾವಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಇನ್ನುಳಿದ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್, ದೀಪಕ್ ಪರಪ್ಪನ ಅಗ್ರಹಾರದಲ್ಲೇ ಇರಲಿದ್ದಾರೆ. ಅದಾಗಲೇ ಆರೋಪಿಗಳಾದ ರವಿ, ಕಾರ್ತಿಕ್, ನಿಕಿಲ್, ಕೇಶವಮೂರ್ತಿ ತುಮಕೂರು ಜೈಲಿನಲ್ಲಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿಸುವ ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. ಕೊಲೆ ಮಾಡಿ ಜೈಲು ಸೇರಿರುವ ಕ್ರಿಮಿನಲ್. ಆತನಿಗೆ ರಾಜೋಪಚಾರ ಮಾಡಬಾರದು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Actor Darshan jail photo viral, court orders transfer of darshan to Bellary jail, Wilson garden naga in trouble. Darshan photo being smoking and talking with Rowdy Wilson Naga went viral on social media after which the court has ordered for transfer.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 07:08 pm
Bangalore Correspondent
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm