ಬ್ರೇಕಿಂಗ್ ನ್ಯೂಸ್
28-08-24 02:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಹೊಂದಿದ್ದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿ ವಜಾಗೊಂಡಿದೆ.
ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಗಣಪತಿ ಸಹೋದರಿ ಸಬಿತಾ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮ ಅವರನ್ನೊಳಗೊಂಡ ಪೀಠ ವಜಾಗೊಳಿಸಿದೆ. ಇದರಿಂದಾಗಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿ ಎಂಟು ವರ್ಷಕ್ಕೂ ಹೆಚ್ಚು ಕಾಲ ನಡೆದ ಕಾನೂನು ಸಂಘರ್ಷದಲ್ಲಿ ಸಚಿವ ಜಾರ್ಜ್ ಅವರಿಗೆ ಗೆಲುವಾಗಿದೆ. ಕ್ಲೀನ್ ಚಿಟ್ ನೀಡಿದ್ದ ಸಿಬಿಐ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
2016ರ ಜುಲೈ 17 ರಂದು ಡಿವೈಎಸ್ಪಿ ಎಂ.ಕೆ.ಗಣಪತಿ ಅವರು ಕೊಡಗಿನ ಹೋಟೆಲ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಮಾಡಿದ್ದ ವಿಡಿಯೋದಲ್ಲಿ ಅವರು ಆಗ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರ ಹೆಸರು ಪ್ರಸ್ತಾಪಿಸಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ 2019ರಲ್ಲಿ ವರದಿ ನೀಡಿ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಅಲ್ಲದೆ, ಗಣಪತಿ ಆತ್ಮಹತ್ಯೆಗೆ ಕಿರುಕುಳ ಕಾರಣವಲ್ಲ ಎಂದು ಹೇಳಿತ್ತು.
In a significant relief for Energy Minister K.J. George, the Supreme Court has dismissed the criminal proceedings against him and two IPS officers, clearing them of any wrongdoing. The case, which centred on allegations of abetting the suicide of Deputy Superintendent of Police M.K. Ganapathy on July 7, 2016, has been quashed.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 07:08 pm
Bangalore Correspondent
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm