High Court, D.K. Shivakumar, CM Siddaramaiah: ಅಕ್ರಮ ಆಸ್ತಿ ಗಳಿಕೆ ಪ್ರಕರಣ ; ಅರ್ಜಿ ತಳ್ಳಿಹಾಕಿದ ಹೈಕೋರ್ಟ್, ಸುಪ್ರೀಂ ಕೋರ್ಟಿನಲ್ಲೇ ಬಗೆಹರಿಸಿಕೊಳ್ಳಿ ಎಂದು ಸಲಹೆ, ಸದ್ಯಕ್ಕೆ ಬೀಸೋ ದೊಣ್ಣೆಯಿಂದ ಪಾರಾದ ಡಿಕೆಶಿ, ಸಿದ್ದರಾಮಯ್ಯ ಪ್ರಕರಣ ಆಗಸ್ಟ್ 31ಕ್ಕೆ ವಿಚಾರಣೆ

29-08-24 06:22 pm       Bangalore Correspondent   ಕರ್ನಾಟಕ

ಡಿಸಿಎಂ ಡಿಕೆ ಶಿವಕುಮಾರ್ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ರಿಟ್ ಅರ್ಜಿಗಳ ಕುರಿತು ಹೈಕೋರ್ಟ್ ತೀರ್ಪು ನೀಡಿದ್ದು, ರಾಜ್ಯ ಸರಕಾರದ ಸ್ವಾಯತ್ತೆ ವಿಚಾರದಲ್ಲಿ ಹೈಕೋರ್ಟ್ ತೀರ್ಪು ನೀಡುವುದು ಸರಿಯಲ್ಲ.

ಬೆಂಗಳೂರು, ಆಗಸ್ಟ್ 29: ಡಿಸಿಎಂ ಡಿಕೆ ಶಿವಕುಮಾರ್ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ರಿಟ್ ಅರ್ಜಿಗಳ ಕುರಿತು ಹೈಕೋರ್ಟ್ ತೀರ್ಪು ನೀಡಿದ್ದು, ರಾಜ್ಯ ಸರಕಾರದ ಸ್ವಾಯತ್ತೆ ವಿಚಾರದಲ್ಲಿ ಹೈಕೋರ್ಟ್ ತೀರ್ಪು ನೀಡುವುದು ಸರಿಯಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿ ಬಗೆಹರಿಸಿಕೊಳ್ಳಿ ಎಂದು ಅರ್ಜಿದಾರರಿಗೆ ಸಲಹೆ ಮಾಡಿದ್ದಲ್ಲದೆ, ಎರಡೂ ಅರ್ಜಿಗಳನ್ನು ವಜಾ ಮಾಡಿದೆ.

ಡಿಕೆಶಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸುತ್ತಿದ್ದಾಗಲೇ ರಾಜ್ಯದ ಕಾಂಗ್ರೆಸ್ ಸರಕಾರ ಅನುಮತಿಯನ್ನು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಕಡೆಯಿಂದ ಹೈಕೋರ್ಟಿನಲ್ಲಿ ರಿಟ್ ಹಾಕಲಾಗಿತ್ತು. ಆರು ತಿಂಗಳ ಕಾಲ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ಅವರಿದ್ದ ದ್ವಿಸದಸ್ಯ ಪೀಠವು, ಸೆಕ್ಷನ್ 131 ಪ್ರಕಾರ ರಾಜ್ಯ ಮತ್ತು ಕೇಂದ್ರದ ನಡುವಿನ ವಿವಾದ ಬಗ್ಗೆ ಹೈಕೋರ್ಟ್ ತೀರ್ಪು ನೀಡುವುದು ಸರಿಯಾಗದು. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿಯೇ ಪ್ರಶ್ನೆ ಮಾಡಿಕೊಳ್ಳಿ ಎಂದು ಹೇಳಿದೆ. ಅಲ್ಲದೆ, ಎರಡೂ ಅರ್ಜಿಗಳನ್ನು ವಜಾ ಮಾಡಿದೆ.

D K Shivakumar | Have done no wrong, only did party work: Karnataka Deputy  Chief Minister D K Shivakumar facing disproportionate assets case -  Telegraph India

ಹೀಗಾಗಿ ಸದ್ಯಕ್ಕೆ ಡಿಕೆಶಿ ಬೀಸೋ ದೊಣ್ಣೆಯಿಂದ ಪಾರಾದರೂ, ಅಕ್ರಮ ಆಸ್ತಿ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು ಖಚಿತವಾಗಿದೆ. ಇದರಿಂದಾಗಿ ತಾತ್ಕಾಲಿಕ ರಿಲೀಫ್ ಸಿಕ್ಕರೂ, ಡಿಕೆಶಿ ಪ್ರಕರಣ ಸುಪ್ರೀಂ ಕೋರ್ಟಿನಲ್ಲಿ ಎದುರಿಸಬೇಕಾಗುತ್ತದೆ. ಇದರ ಬೆನ್ನಲ್ಲೇ ಹೈಕೋರ್ಟ್ ತೀರ್ಪಿನ ಬಗ್ಗೆ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ಸುಪ್ರೀಂ ಕೋರ್ಟ್ ಹೋಗುವುದು ಖಚಿತ ಎಂದು ಹೇಳಿದ್ದಾರೆ. ಇದೇ ವೇಳೆ, ರಾಜ್ಯ ಸರಕಾರ ಸಿಬಿಐ ತನಿಖೆಯ ಬದಲು ಲೋಕಾಯುಕ್ತಕ್ಕೆ ವಹಿಸಿದ್ದರಿಂದ ಲೋಕಾಯುಕ್ತ ಅಧಿಕಾರಿಗಳು ಡಿಕೆಶಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಲೋಕಾಯುಕ್ತ ನೋಟೀಸ್ ಪಡೆದು ಡಿಕೆಶಿ ವಿಚಾರಣೆಯನ್ನೂ ಎದುರಿಸಿದ್ದರು.  

Karnataka CM Siddaramaiah to move High Court against governor's nod to  prosecute him in MUDA 'scam': Report

ಸಿದ್ದರಾಮಯ್ಯ ಪ್ರಕರಣ ಆಗಸ್ಟ್ 31ಕ್ಕೆ

ಇತ್ತ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನೂ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಆಗಸ್ಟ್ 31ಕ್ಕೆ ಮುಂದೂಡಿದೆ. ಇದರೊಂದಿಗೆ ಇಂದಿನ ಮಟ್ಟಿಗೆ ಸಿಎಂ ಮತ್ತು ಡಿಸಿಎಂ ಇಬ್ಬರೂ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಶನ್ ಅನುಮತಿಯನ್ನು ರದ್ದುಪಡಿಸಬೇಕೆಂದು ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದಿಸುತ್ತಿದ್ದಾರೆ.

In a rare coincidence, the High Court of Karnataka will on Thursday witnesses two separate proceedings on petitions related to Chief Minister Siddaramaiah and Deputy Chief Minister D.K. Shivakumar.