ಬ್ರೇಕಿಂಗ್ ನ್ಯೂಸ್
30-08-24 11:24 am HK News Desk ಕರ್ನಾಟಕ
ಕಾರವಾರ, ಆ 30: ಕೈದಿಗಳಿಬ್ಬರು ರಂಪಾಟ ಮಾಡಿ, ತಲೆ ಒಡೆದುಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜೈಲಿನೊಳಗೆ ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಸೂಕ್ತ ಸೌಲಭ್ಯವಿಲ್ಲ ಹಾಗೂ ಹೊರಗಿನಿಂದ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುತ್ತಿಲ್ಲ. ತಮಗೆ ತಂಬಾಕು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಗಳ ಜೊತೆ ರಗಳೆ ತೆಗೆದಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿ ಗಲಾಟೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ, ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನೀಡಿದ್ದರು. ಅಲ್ಲದೇ ಜೈಲಿನ ಒಳಗೆ ಹೋಗಿ ಕೈದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಗಲಾಟೆ ಮಾಡಿ ಗಾಯಗೊಂಡವರು ದಾಂಡೇಲಿಯ ಮುಜಾಮಿಲ್ ಹಾಗೂ ಕುಮಟಾದ ಫರಾನ್ ಛಬ್ಬಿ ಎನ್ನುವರಾಗಿದ್ದಾರೆ. ಕಲ್ಲಿನಿಂದ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ ಇಬ್ಬರ ತಲೆಗೆ ಬಟ್ಟೆ ಸುತ್ತಿ, ಕಾರವಾರದ ಕ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೈದಿಗಳನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ, ತಮಗೆ ಜೈಲು ಅಧಿಕಾರಿಗಳು ಮನಬಂದಂತೆ ಥಳಿಸಿದ್ದಾರೆ. ಈ ಗಲಾಟೆಗೆ ಜೈಲು ಅಧಿಕಾರಿಗಳೇ ಕಾರಣ ಎಂದು ಆರೋಪ ಮಾಡುತ್ತ ತೆರಳಿದರು. ಆದರೆ, ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಕೈದಿಗಳ ಆರೋಪವು ಸುಳ್ಳು ಎಂದು ತಳ್ಳಿಹಾಕಿದ್ದಾರೆ.
''ಕೈದಿಗಳು ಗಲಾಟೆ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜೈಲಿಗೆ ತೆರಳಿ ಪರಿಶೀಲಿಸಲಾಗಿದೆ. ಜೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದರಿಂದ ಮತ್ತು ಸರಿಯಾಗಿ ಊಟ ನೀಡುವಂತೆ ಗಲಾಟೆ ನಡೆಸಿದ್ದರು. ಆರಂಭದಲ್ಲಿ ಗಲಾಟೆ ಬಗ್ಗೆ ಕೇಳಿದಾಗ ಜೈಲಾಧಿಕಾರಿಗಳು ಹಲ್ಲೆ ಮಾಡಿರುವುದಾಗಿ ನಮಗೂ ದೂರಿದ್ದರು. ಬಳಿಕ ಜೈಲಿನಲ್ಲಿ ಪರಿಶೀಲನೆ ನಡೆಸಿ, ಕೈದಿಗಳು ಹಾಗೂ ಜೈಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರೂ ಕಲ್ಲಿನಿಂದ ಮೂರ‍್ನಾಲ್ಕು ಬಾರಿ ಹೊಡೆದುಕೊಂಡಿರುವುದು ಖಚಿತವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ'' ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ತಿಳಿಸಿದ್ದಾರೆ.
Karwar jail inmates break head and fight, two hospitalized
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm