ಬಿಜೆಪಿ ಸರ್ಕಾರದ ಕೋವಿಡ್ ಅಕ್ರಮ ; ಜಸ್ಟಿಸ್ ಮೈಕಲ್ ಡಿಕುನ್ನಾ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ, ಮುಡಾ ಅಸ್ತ್ರ ಹಿಡಿದಿರುವ ಬಿಜೆಪಿಗರಿಗೆ ಪ್ರತ್ಯಸ್ತ್ರ! 

31-08-24 11:27 pm       Bangalore Correspondent   ಕರ್ನಾಟಕ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣ ಕುರಿತ ಪ್ರಕರಣದಲ್ಲಿ ನಿವೃತ್ತ ಜಸ್ಟೀಸ್ ಜಾನ್ ಮೈಕಲ್ ಡಿ ಕುನ್ನಾ ನೇತೃತ್ವದ ಆಯೋಗ ತನಿಖಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. 

ಬೆಂಗಳೂರು, ಆಗಸ್ಟ್ 31:  ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣ ಕುರಿತ ಪ್ರಕರಣದಲ್ಲಿ ನಿವೃತ್ತ ಜಸ್ಟೀಸ್ ಜಾನ್ ಮೈಕಲ್ ಡಿ ಕುನ್ನಾ ನೇತೃತ್ವದ ಆಯೋಗ ತನಿಖಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. 

ಆಮೂಲಕ ವಾಲ್ಮೀಕಿ ನಿಗಮ ಹಗರಣ ಹಾಗೂ ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಬಿಗ್‌ ಶಾಕ್‌ ನೀಡಲು ಸರ್ಕಾರ ಸಜ್ಜಾಗಿದೆ. ಕೋವಿಡ್‌ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್‌ ನಾಯಕರಿಗೆ ಈಗ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ವರದಿ ಕೈಸೇರಿದ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವ ಎಂ.ಬಿ ಪಾಟೀಲ್‌, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸರಚಿವರು ಸಮಾಲೋಚನೆ ನಡೆಸಿದ್ದಾರೆ. 

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಭೇಟಿ ಮಾಡಿದ ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ ತನಿಖಾ ವರದಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗ‌ಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಇದ್ದರು. 

ಬಿಜೆಪಿ ಸರ್ಕಾರದ ಕೋವಿಡ್ ಕಾಲದ ಹಗರಣಗಳ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ತನಿಖಾ ಆಯೋಗ ರಚಿಸಲಾಗಿತ್ತು. 2023 ಆಗಸ್ಟ್‌ನಲ್ಲಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದ್ದ ಸಿದ್ದರಾಮಯ್ಯ ಸರ್ಕಾರ ವರದಿ ನೀಡುವಂತೆ ಸೂಚಿಸಿತ್ತು. ವೆಂಟಿಲೇಟರ್‌ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಅಕ್ರಮಗಳ ಆರೋಪದ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು. ಆಯೋಗ ರಚನೆಯಾಗಿ ವರ್ಷದೊಳಗೆ ತನಿಖಾ ವರದಿ ಸಲ್ಲಿಕೆಯಾಗಿದ್ದು, ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ವರದಿ ಬಹಿರಂಗೊಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

The commission headed by retired Justice John Michael D Cunna has submitted its inquiry report to the state government in the case of the alleged Covid scam in the health department during the BJP government.