ಬ್ರೇಕಿಂಗ್ ನ್ಯೂಸ್
02-09-24 02:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಿಎ ನಿವೇಶನ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ. ಈ ಮೂಲಕ ರಾಜ್ಯಪಾಲರು ಮತ್ತೊಂದು ದಾಳ ಉರುಳಿಸಿದ್ದಾರೆ.
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್‌ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿಯಿಂದ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್‌ಗೆ ಮಂಜೂರು ಮಾಡಲಾಗಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿದ್ದು, ಮಾರ್ಚ್ 5 ರಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಂಡು ಮಾರ್ಚ್ 6 ರಿಂದ ಹಂಚಿಕೆ ಪತ್ರಗಳನ್ನು ನೀಡಲಾಗಿದೆ. ಇಷ್ಟೊಂದು ಅವಸರದಲ್ಲಿ ಹಂಚಿಕೆ ಮಾಡಿದ್ದು ಯಾಕೆ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.
ಟ್ರಸ್ಟ್‌ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವಾರು ಲೋಪಗಳಾಗಿವೆ. ಅಕ್ರಮದಿಂದಾಗಿ ಸರ್ಕಾರಕ್ಕೆ ಸುಮಾರು ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು. ಅರ್ಜಿ ಸಲ್ಲಿಸಲು ಕೇವಲ 14 ದಿನಗಳ ಕಾಲಾವಕಾಶ ನೀಡಿ ತರಾತುರಿಯಲ್ಲಿ ಪ್ರಕ್ರಿಯೆ ಮುಗಿಸಿರುವುದರಿಂದ ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಿರುವ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಯದಂತಾಗಿದೆ. ಇದು ಕೆಐಎಡಿಬಿ ಇತಿಹಾಸದಲ್ಲಿ ನಡೆದಿರುವ ಅತಿದೊಡ್ಡ ಲೋಪ ಎಂದು ಆರೋಪಿಸಿದ್ದಾರೆ.
Karnataka Governor Thaawarchand Gehlot has asked Chief Secretary Shalini Rajneesh to submit a detailed report on the complaint filed against the family of Mallikarjun Kharge.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm