ಬ್ರೇಕಿಂಗ್ ನ್ಯೂಸ್
02-09-24 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಮುಂದುವರಿದಿದ್ದು ಮತ್ತೆ ಸೆ.9ಕ್ಕೆ ಮುಂದೂಡಿಕೆಯಾಗಿದೆ.
ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದಾರೆ. “ಮುಖ್ಯಮಂತ್ರಿ ವಿರುದ್ಧ ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ.
“1998-99ರ ನಡುವೆ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದರು. 2004-05ರ ಅವಧಿಯಲ್ಲಿ ಮತ್ತೆ ಡಿಸಿಎಂ ಆಗಿದ್ದರು. 2013-18ರ ಅವಧಿಯಲ್ಲಿ ಸಿಎಂ ಆಗಿದ್ದರು. ಈಗ ಮತ್ತೆ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಮೈಸೂರಿನ ತನ್ನ ಹೆಸರಲ್ಲಿ ಸೈಟ್ ಪಡೆದಿರುವುದು ಸಿದ್ದರಾಮಯ್ಯ ಗಮನಕ್ಕೆ ಬಂದಿಲ್ಲವೇ” ಎಂದು ಕೆ.ಜಿ ರಾಘವನ್ ಪ್ರಶ್ನಿಸಿದ್ದಾರೆ.
ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿದ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಪ್ರಕರಣದ ವಾದ ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.
The Karnataka High Court on Monday extended till September nine the interim stay on trial court proceedings against Chief Minister Siddaramaiah in connection with the alleged Mysuru Urban Development Authority (MUDA) case.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm