ಬ್ರೇಕಿಂಗ್ ನ್ಯೂಸ್
03-09-24 03:47 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3: ಮುಡಾ ಸೈಟ್ ಪ್ರಕರಣ ಸಿಎಂ ಸಿದ್ದರಾಮಯ್ಯ ಕೊರಳು ಸುತ್ತಿಕೊಂಡಿರುವಾಗಲೇ ಅದೇ ಪ್ರಕರಣ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ತಾಂತ್ರಿಕ ಸಮಿತಿಯ ತನಿಖಾ ವರದಿ ಆಧರಿಸಿ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. KUDA ಕಾಯ್ದೆ ಕಲಂ 13 (1) ರಲ್ಲಿ ಮುಡಾ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ ಇರುವುದು ಮತ್ತು ಸರ್ಕಾರದಿಂದ ನೀಡಲಾದ ನಿರ್ದೇಶನಗಳನ್ನು ಪಾಲನೆ ಮಾಡದಿರುವುದನ್ನು ಗಮನಿಸಲಾಗಿದೆ.
ಸರ್ಕಾರವು ನೀಡುವ ಯಾವುದೇ ನಿರ್ದೇಶನಗಳನ್ನು ಪಾಲಿಸುವುದು KUDA ಕಾಯ್ದೆ ಕಲಂ 65ರನ್ವಯ ಪ್ರಾಧಿಕಾರದ ಜವಾಬ್ದಾರಿ ಆಗಿರುತ್ತದೆ. ಆದರೆ ನಿಯಮಗಳಿಗೆ ಮತ್ತು ಸರ್ಕಾರದ ನಿರ್ದೇಶನಗಳಿಗೆ ವ್ಯತಿರಿಕ್ತವಾಗಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸುತ್ತಿರುವುದು ಮತ್ತು ಅದರಂತೆ ಕ್ರಮ ವಹಿಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ದಿನೇಶ್ ಕುಮಾರ್ ಇನ್ನೂ ಅನೇಕ ಆರೋಪಗಳಲ್ಲಿ ಕರ್ತವ್ಯ ಲೋಪ ಎಸಗಿರುವುದು ಸಕ್ಷಮ ಪ್ರಾಧಿಕಾರಕ್ಕೆ ಮನವರಿಕೆಯಾಗಿದೆ.
ಸದರಿ ಆಯುಕ್ತರು ಅಧಿಕಾರದಲ್ಲಿ ಮುಂದುವರಿದಲ್ಲಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.
ಒಂದೆಡೆ ಮುಡಾ ಪ್ರಕರಣದ ಬಗ್ಗೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಕೋರ್ಟಿನಲ್ಲಿ ಜಟಾಪಟಿಗೆ ಕಾರಣವಾಗಿದೆ. ಇದರ ನಡುವಲ್ಲೇ ರಾಜ್ಯ ಸರ್ಕಾರ ಹಿಂದಿನ ಮುಡಾ ಆಯುಕ್ತ, ವರ್ಗಾವಣೆ ಆಗಿದ್ದರೂ ಹುದ್ದೆ ತೋರಿಸದೇ ಇರಿಸಲಾಗಿದ್ದ ದಿನೇಶ್ ಕುಮಾರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
In the Muda Scam that has embroiled the Congress government in Karnataka, the former Commissioner GT Dinesh Kumar has been suspended as per the order of the Governor. Mysore Urban Development Authority's site allotment scam is making a lot of noise and now it is the first head in the scam. GT Dinesh Kumar, former Commissioner of Mysore Urban Development Authority (MUDA), who was appointed as Chancellor of Haveri University, has been suspended.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm