ಬ್ರೇಕಿಂಗ್ ನ್ಯೂಸ್
03-09-24 06:16 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3: ಮಾಜಿ ಮುಖ್ಯಮಂತ್ರಿ, ಪ್ರಮುಖ ಸ್ವಾಮೀಜಿ ಸೇರಿದಂತೆ ಹಲವು ರಾಜಕೀಯ ನಾಯಕರ ಸೆಕ್ಸ್ ಸಿಡಿ ತನ್ನಲ್ಲಿದೆ ಎಂದು ಹೇಳಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಅವರನ್ನು ಪೊಲೀಸರು ಹಳೆ ಪ್ರಕರಣ ಒಂದರಲ್ಲಿ ಬಂಧಿಸಿದ್ದು ಕೋರ್ಟಿಗೆ ಹಾಜರುಪಡಿಸಿದ ಬೆನ್ನಲ್ಲೇ ಜಾಮೀನಿನಲ್ಲಿ ಬಿಡಗುಡೆಯಾಗಿದ್ದಾರೆ.
ಪೊಲೀಸರು ಬಂಧನ ಮಾಡಿದ ಬೆನ್ನಲ್ಲೇ ವಕೀಲ ಜಗದೀಶ್ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಪೊಲೀಸರಿಗೆ ಚಾಲೆಂಜ್ ಮಾಡಿದ್ದಾರೆ. ಲೈಂಗಿಕ ಕಾರ್ಯಕರ್ತೆಯರು ತನ್ನನ್ನು ಭೇಟಿಯಾಗಿದ್ದು, ತಮ್ಮಲ್ಲಿ 9 ಸಾವಿರಕ್ಕೂ ಹೆಚ್ಚು ವಿಡಿಯೋ ತುಣುಕುಗಳಿರುವುದಾಗಿ ಹೇಳಿದ್ದಾರೆ. ಅದನ್ನು ಮುಖ್ಯಮಂತ್ರಿಗೆ ಸಲ್ಲಿಸಲು ರೆಡಿ ಇದ್ದೇನೆ. ಆದರೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ವಕೀಲ ಜಗದೀಶ್ ತನ್ನಲ್ಲಿ ಸೆಕ್ಸ್ ಸಿಡಿ ಇದೆಯೆಂದು ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತನ್ನ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡಬಾರದು ಎಂದು ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಮಾಜಿ ಸಿಎಂ ಮತ್ತು ರಾಜ್ಯದ ಪ್ರಮುಖ ಸ್ವಾಮೀಜಿಯೊಬ್ಬರ ಸೆಕ್ಸ್ ಸಿಡಿ ಇದೆಯೆಂದು ವಕೀಲ ಜಗದೀಶ್ ಹೇಳಿಕೊಂಡಿದ್ದು ಭಾರೀ ಸಂಚಲನ ಮೂಡಿಸಿತ್ತು. 2022ರಲ್ಲಿ ಎಸ್ಸಿ- ಎಸ್ಟಿ ಕಾಯ್ದೆಯಡಿ ವಕೀಲ ಜಗದೀಶ್ ವಿರುದ್ಧ ದಾಖಲಾದ ಪ್ರಕರಣದಲ್ಲಿ ಕೋರ್ಟಿನಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಕೋರ್ಟಿಗೆ ಹಾಜರಾಗದೇ ಇದ್ದುದರಿಂದ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಈಗ ಜಗದೀಶ್ ಅವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರಲ್ಲಿ ಕೇಳಿದಾಗ, ವಾರೆಂಟ್ ಬಳಿಕ ಅವರು ಎಲ್ಲಿದ್ದಾರೆಂದು ತಿಳಿದಿರಲಿಲ್ಲ. ಈಗ ವಿಡಿಯೋ ಬಿಡುಗಡೆ ಮಾಡಿದ್ದರಿಂದ ಚೆಕ್ ಮಾಡಿದಾಗ, ಗೋವಾದಲ್ಲಿರುವುದು ತಿಳಿದುಬಂದು ಅಲ್ಲಿಂದಲೇ ಅರೆಸ್ಟ್ ಮಾಡಿದ್ದೇವೆ. ಕೋರ್ಟ್ ಜಾಮೀನು ನೀಡಿದೆ ಎಂದಿದ್ದಾರೆ.
2022ರ ಫೆಬ್ರವರಿಯಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಇತರ ವಕೀಲರ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದರು. ಆನಂತರ, ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದ ಮಹಿಳೆಯ ಪರವಾಗಿ ಜಗದೀಶ್ ವಕಾಲತ್ತು ವಹಿಸಿದ್ದರು. ಅದಕ್ಕೂ ಹಿಂದೆ ಬೆಂಗಳೂರು ಸಿಟಿ ಪೊಲೀಸ್ ಕಮಿಷನರ್ ಕಚೇರಿಯ ಪೇದೆ ಒಬ್ಬರನ್ನು ನಿಂದಿಸಿದ ಬಗ್ಗೆ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ವಿಡಿಯೋ ಬಿಡುಗಡೆ ಮಾಡಿರುವ ಜಗದೀಶ್, ನೀವು ಬಂಧನ ಮಾಡಿದರೆ ಹೇಗೆ ಹೊರಗೆ ಬರಬೇಕು ಎಂದು ತಿಳಿದಿದೆ ಎಂದು ಸವಾಲು ಹಾಕಿದ್ದಾರೆ.
Bangalore Advocate Jagadish claim to have sex cd of former cm, arrested, released on bail. Advocate K.N. Jagadish, who over the last three days claimed to have “sex CDs” of a former Chief Minister of Karnataka and a prominent seer in the State, was arrested by the city police on Thursday in a case that dates back to 2022. He was produced before a city court on Friday which granted him bail.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm