ಬ್ರೇಕಿಂಗ್ ನ್ಯೂಸ್
03-09-24 10:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3: ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿರುವ ರಾಜ್ಯ ಸರ್ಕಾರ, ಡೆಂಗ್ಯೂ ನಿಯಂತ್ರಣ ವಿಚಾರವಾಗಿ ಸಾರ್ವಜನಿಕರನ್ನ ಎಚ್ಚರಗೊಳಿಸುವ ಪ್ರಯತ್ನಕ್ಕೆ ಕೈಹಾಕಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ಸಾಂಕ್ರಾಮಿಕ ರೋಗವನ್ನಾಗಿ ಘೋಷಿಸುವುದರ ಜೊತೆಗೆ ಡೆಂಗ್ಯೂ ನಿಯಂತ್ರಣ ಮಾರ್ಗಸೂಚಿಗಳನ್ನ ಪಾಲಿಸದವರಿಗೆ ದಂಡ ವಿಧಿಸಲಾಗುವುದು ಎಂದಿದ್ದಾರೆ.
ಇದರಿಂದ ಆರೋಗ್ಯ ಇಲಾಖೆಗೆ ಡೆಂಗ್ಯೂ ಸೊಳ್ಳೆ ಉತ್ಪತ್ತಿ ತಾಣಗಳನ್ನ ಹತೋಟಿಗೆ ತರುವ ನಿಟ್ಟಿನಲ್ಲಿ ಕಾನೂನಿನ ಅಸ್ತ್ರ ಬಳಸಬಹುದಾಗಿದೆ. ಈ ಹಿಂದೆ ಬೆಂಗಳೂರು ಮತ್ತು ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಪ್ರದೇಶಗಳಲ್ಲಿ ಕಾನೂನಿನ ರೀತಿ ಕ್ರಮ ಕೈಗೊಳ್ಳಲು ಅವಕಾಶ ಇರಲಿಲ್ಲ ಎಂದರು.
ಡೆಂಗ್ಯೂ ಮಾರ್ಗಸೂಚಿಗಳನ್ನ ಪಾಲಿಸದಿದ್ದರೆ, ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂ. ಹಾಗೂ ನಗರ ಪ್ರದೇಶಗಳಲ್ಲಿ 400 ರೂಪಾಯಿ ದಂಡ ವಿಧಿಸಲಾಗುವುದು. ಅಲ್ಲದೇ ಶಾಲಾ ಕಾಲೇಜು, ಹೋಟೆಲ್, ಲಾಡ್ಜ್, ರೆಸಾರ್ಟ್ ಸೇರಿದಂತೆ ವಾಣಿಜ್ಯ ಸಂಘ, ಸಂಸ್ಥೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ 500 ಹಾಗೂ ನಗರ ಪ್ರದೇಶಗಳಲ್ಲಿ 1000 ರೂ. ದಂಡ ನಿಗದಿಪಡಿಸಲಾಗಿದ್ದು, ಕಟ್ಟಡ ನಿರ್ಮಾಣ, ಹೊರಾಂಗಣ ಸ್ಥಳಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ 1000 ರೂ. ಹಾಗೂ ನಗರ ಪ್ರದೇಶಗಳಲ್ಲಿ 2000 ರೂ. ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈಡಿಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿಗೆ ಅನುಕೂಲವಾಗುವಂತೆ ನೀರು ಸಂಗ್ರಹಣೆಯಾಗಬಾರದು. ಈ ನಿಟ್ಟಿನಲ್ಲಿ ಎಲ್ಲರೂ ಎಚ್ಚರಿಕೆ ವಹಿಸುವುದು ಮುಖ್ಯ. ದಂಡ ವಿಧಿಸುವುದಕ್ಕಿಂತ ಜನರು ಡೆಂಗ್ಯೂ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿಸಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಈ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನಿಯಮ ಜಾರಿಗೊಳಿಸುವ ಅಧಿಕಾರ ನೀಡಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಸುಧಾಕರ್ ಹೆಗಲು ಮುಟ್ಟಿಕೊಳ್ಳುತ್ತಿದ್ದಾರೇಕೆ ?
ಕೋವಿಡ್ ಅಕ್ರಮ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ನಾ ಅವರು ವರದಿಯನ್ನ ಮುಖ್ಯಮಂತ್ರಿಗಳಿಗೆ ನೀಡಿದ್ದು, ವರದಿಯ ಅಂಶಗಳನ್ನ ಆಧರಿಸಿ ಮುಂದಿನ ಕ್ರಮ ಆಗಲಿದೆ. ವರದಿಯಲ್ಲಿ ಏನಿದೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಸುಧಾಕರ್ ಅವರು ಮಾತ್ರ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಬಹುಶಃ ಕೋವಿಡ್ ಸಂದರ್ಭದಲ್ಲಿ ಅವರು ಮಾಡಿರುವ ತಪ್ಪುಗಳ ಗಿಲ್ಟ್ ಸುಧಾಕರ್ ಅವರಿಗೆ ಕಾಡುತ್ತಿರಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ತಜ್ಞರ ಸಮಿತಿ ಕೋವಿಡ್ ಅಕ್ರಮದ ಬಗ್ಗೆ ವರದಿ ಸಲ್ಲಿಕೆ ಮಾಡಿದೆ. ವರದಿಯಲ್ಲಿ ಇಂಥವರ ಹೆಸರು ಇದೆ ಎಂದು ನಾವು ಹೇಳಿಲ್ಲ. ಸುಧಾಕರ್ ಅವರೇ ತಮ್ಮ ಬಗ್ಗೆ ತಾವು ಆರೋಪ ಮಾಡಿಕೊಳ್ಳುತ್ತಿದ್ದಾರೆ ಎಂದರು.
ಬೀದೀಲಿ ನಿಂತುಕೊಂಡು ಕೆಲಸ ಮಾಡಿದ್ದೇನೆ ಎಂದು ಸುಧಾಕರ್ ಹೇಳಿಕೊಳ್ಳುತ್ತಿದ್ದಾರೆ. ಅವರು ಏಲ್ಲಿ ನಿಂತು ಕೆಲಸ ಮಾಡಿದ್ದಾರೆ, ನಾವು ನೋಡಿದ್ದೇವೆ. ಮಂತ್ರಿ ಮಾಡುವುದೇ ಕೆಲಸ ಮಾಡಲಿಕ್ಕೆ. ಹಾಗಿದ್ದಾಗ ಕೆಲಸ ಮಾಡುವುದು ಮಂತ್ರಿಗಳ ಕರ್ತವ್ಯ. ಅದನ್ನ ನಾವು ಹೇಳಿಕೊಳ್ಳುವುದಲ್ಲ. ಜನರು ನಮ್ಮ ಕೆಲಸದ ಬಗ್ಗೆ ಮಾತಾಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
The Karnataka Government on Tuesday declared dengue fever as an epidemic disease, in response to the increasing number of cases across the state. According to a gazette notification, the government will enforce stringent measures to control the spread of dengue fever, which has been identified as a significant public health concern.
22-11-24 05:16 pm
HK News Desk
Kodava News, children : ಕೊಡವ ಜನಸಂಖ್ಯೆ ಹೆಚ್ಚಿಸ...
22-11-24 03:53 pm
Dinesh Gundu Rao, Bangalore: ಸರ್ಕಾರಿ ಆಸ್ಪತ್ರೆ...
21-11-24 09:32 pm
Bangalore Fire showroom: ಇಲೆಕ್ಟ್ರಿಕ್ ವಾಹನ ಶೋರ...
20-11-24 09:57 pm
Liquor Bandh, Mangalore: ನ.20ರ ಮದ್ಯ ವ್ಯಾಪಾರ ಬ...
19-11-24 11:05 pm
18-11-24 03:54 pm
HK News Desk
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
ಭಾರತೀಯ ರೈಲ್ವೇ ಹೊಸ ಇತಿಹಾಸದತ್ತ ಹೆಜ್ಜೆ ; ವಿದ್ಯುತ...
14-11-24 11:11 pm
ಅಮೆರಿಕದ ಗುಪ್ತಚರ ಸಂಸ್ಥೆ ಮುಖ್ಯಸ್ಥರಾಗಿ ಹಿಂದು ಮಹಿ...
14-11-24 05:58 pm
ಸುದೀರ್ಘ 18 ವರ್ಷಗಳ ಹಿಂದೆ ಕೊಲೆಯಾದ ಕೊಡಗಿನ ಸಫಿಯಾಗ...
12-11-24 09:00 pm
22-11-24 10:33 pm
Mangalore Correspondent
Kuthar, Mangalore News: ಕುತ್ತಾರಿನಲ್ಲಿ ಜೆಸಿಬಿ...
22-11-24 10:17 pm
Brijesh Chowta, MIR group, Mangalore: ಸಂಸದ ಕ್...
22-11-24 09:04 pm
BJP Vijay Kumar shetty, Mangalore video: ಬಿಜೆ...
22-11-24 08:21 pm
Ullal news, Mangalore, Batapady; ಭ್ರಷ್ಟ ಅಧಿಕಾ...
22-11-24 11:55 am
22-11-24 10:47 pm
Mangalore Correspondent
Mangalore crime, Sexual Harrasment, Police: ಮ...
22-11-24 09:37 pm
Bangalore crime, Stabbing: ಬೈಕ್ ಪಾರ್ಕಿಂಗ್ ವಿಚ...
22-11-24 04:14 pm
Belthangady, Mangalore, Crime : ಟೋರ್ನ್ ಜೀನ್ಸ್...
22-11-24 03:04 pm
Mangalore court, crime, Rape: ಅಜ್ಜಿ ಮನೆಯಲ್ಲಿ...
22-11-24 01:33 pm